More

    ಭಾರತೀಯ ಸಂಸ್ಕೃತಿ ಉಳಿಯಲಿ

    ವಿಜಯಪುರ: ಭಾರತೀಯ ಸಂಸ್ಕೃತಿ ಉಳಿಸುವ ಕೆಲಸ ಯುವ ಪೀಳಿಗೆ ಮೇಲಿದೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಗುರುರಾಜ ಕಟ್ಟಿ ಹೇಳಿದರು.
    ವಿಜಯಪುರ ನಗರದಲ್ಲಿ ಶನಿವಾರ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಜಿಲ್ಲಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
    ಪುರೋಹಿತರನ್ನು ಮದುವೆಯಾಗುವ ಹೆಣ್ಣು ಮಕ್ಕಳ ಹೆಸರಲ್ಲಿ ಮೂರು ಲಕ್ಷ ರೂ. ಠೇವಣಿ ಇಟ್ಟು ಮೂರು ವರ್ಷದ ನಂತರ ಆ ಕುಟುಂಬಕ್ಕೆ ಹಣ ನೀಡಲಾಗುತ್ತದೆ. 150 ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಐಎಎಸ್ ತರಬೇತಿ ಕೊಡಲು ಸರ್ಕಾರಕ್ಕೆ ಒತ್ತಾಯಿಸಲಾಗಿದ್ದು, ಕೆಲವೇ ದಿನಗಳಲ್ಲಿ ತರಬೇತಿ ಪ್ರಾರಂಭವಾಗಲಿದೆ. ಬಡ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕಾಗಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಧನ ಸಹಾಯ ಮಾಡುತ್ತದೆ ಎಂದು ತಿಳಿಸಿದರು.
    ಪರಿಷತ್‌ನ ಜಿಲ್ಲಾಧ್ಯಕ್ಷ ಪ್ರಮೋದ ಅಥಣಿ ಮಾತನಾಡಿ, ಸರ್ಕಾರದ ಯಾವುದೇ ಸೌಲಭ್ಯಗಳು ಅರ್ಚಕರಿಗೆ ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ಸಿಂದಗಿಯ ಭೀಮಾಶಂಕರ ಮಠದ ದತ್ತಪ್ಪಯ್ಯ ಸ್ವಾಮೀಜಿ, ಚಿದಂಬರ ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಹಂಗರಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಆನಂದ ಜೋಶಿ, ಶೃಂಗೇರಿ ಶಂಕರ ಮಠದ ಜಿಲ್ಲಾಧ್ಯಕ್ಷ ಮಹೇಶ ದೇಶಪಾಂಡೆ, ಬ್ರಾಹ್ಮಣ ಆರ್ಚಕರ ಮತ್ತು ಪುರೋಹಿತರ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಭಟ್ ಗಲಗಲಿ ಉಪಸ್ಥಿತರಿದ್ದರು. ವಿಜಯೇಂದ್ರ ನ್ಯಾಮಣ್ಣವರ ಸ್ವಾಗತಿಸಿದರು. ಸಂಜೀವಭಟ್ ಬೀಳಗಿ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿಕುಮಾರ ಜೋಶಿ ವಂದಿಸಿದರು.

    ಭಾರತೀಯ ಸಂಸ್ಕೃತಿ ಉಳಿಯಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts