More

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    ವಿಜಯಪುರ: ಪ್ರತಿವರ್ಷದಂತೆ ಈ ವರ್ಷವೂ ಜಿಲ್ಲಾ ಕೋಳಿ ಸಮಾಜ (ಗಂಗಾ ಮತ ಸಮಾಜ)ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    2019-20 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಕೋಳಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಮ್ಮ ಸ್ವವಿವರದೊಂದಿಗೆ ನ.20 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
    ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣಪತ್ರ ಹಾಗೂ ಎರಡು ಭಾವಚಿತ್ರಗಳೊಂದಿಗೆ ನಗರದ ಲಲಿತ್ ಮಹಲ್ ಹೋಟೆಲ್ ಕಟ್ಟಡದ ಆವರಣದಲ್ಲಿರುವ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರ ಸಂಘ, ವಿಜಯಪುರ ಅವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಮಾಹಿತಿಗಾಗಿ 99864 86452 ಅಥವಾ 94483 42873 ಸಂಪರ್ಕಿಸುವಂತೆ ಜಿಲ್ಲಾ ಕೋಳಿ ಸಮಾಜದ ಪ್ರಚಾರ ಸಮಿತಿ ಮುಖ್ಯಸ್ಥ ಶಿವಾನಂದ ಅಂಬಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts