More

    ಹೊಸ ವರ್ಷ ಆಚರಣೆಗೆ ಬ್ರೇಕ್?

    ವಿಜಯಪುರ: ಸರ್ಕಾರದ ಆದೇಶದ ಮೇರೆಗೆ 2022ನೇ ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕೋವಿಡ್-19 ರೂಪಾಂತರಿ ಒಮಿಕ್ರಾನ್ ಸೋಂಕು ಹರಡುವಿಕೆ ತಡೆಗಟ್ಟಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಜಿಲ್ಲೆಯ ಎಲ್ಲ ಸಾರ್ವಜನಿಕರು ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಸೂಚನೆ ನೀಡಿದ್ದಾರೆ.

    ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕ್ಲಬ್‌ಗಳು, ಪಬ್‌ಗಳು, ರೆಸ್ಟೋರೆಂಟ್, ಹೋಟೆಲ್ಗಳು, ಉದ್ಯಾನವನ ಹಾಗೂ ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ ಸಮೂಹ ನೃತ್ಯ ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

    ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸಬಾರದು. ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಪ್ರವೇಶ ನೀಡುವ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಎರಡನೇ ಲಸಿಕೆ ಪಡೆದಿರುವುದನ್ನು ಖಚಿತಪಡಿಸಿದ ನಂತರವೇ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕೆಂದು ಮಾಹಿತಿ ನೀಡಿದ್ದಾರೆ.

    ಗುಂಪು ನೃತ್ಯಕ್ಕಾಗಿ ಡಿಜೆ, ಡಾನ್ಸ್, ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಚರಿಸುವಂತಿಲ್ಲ. ಸರ್ಕಾರದ ಆದೇಶದಂತೆ ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಪಾಡಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕೆಂದು ತಿಳಿಸಿದ್ದಾರೆ.

    ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೆ ಸಾರ್ವಜನಿಕರ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಾರ್ವಜನಿಕರಿಗೆ ತಿಳಿಸಿದ್ದಾರೆ.

    ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಭಾರತೀಯ ದಂಡ ಸಂಹಿತೆ 188ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳಡಿ ಕಾನೂನು ಕ್ರಮದ ಜತೆಗೆ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51 ರಿಂದ 60 ರನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts