More

    ಕೃಷ್ಣ ಮಠದಲ್ಲಿ ಪೂರ್ವಭಾವಿ ಸಭೆ

    ವಿಜಯಪುರ: ನಗರದ ಕೃಷ್ಣ ಮಠದಲ್ಲಿ ಗುರುವಾರ ಬಿಜೆಪಿ ನಗರ ಘಟಕದಿಂದ ಅಯೋಧ್ಯೆ ಶ್ರೀ ರಾಮ ಮಂದಿರದ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು.
    ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಹಿಂದುಗಳ ಹಲವು ದಶಕಗಳ ಕನಸು ಸದ್ಯ ನನಸಾಗುತ್ತಿದ್ದು, ಜ.15 ರಿಂದ ಫೆ.5 ರವರೆಗೆ ನಡೆಯಲಿರುವ ನಿಧಿ ಸಮರ್ಪಣಾ ಅಭಿಯಾನದಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಕಾರ್ಯಕರ್ತರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಈ ನಿಟ್ಟಿನಲ್ಲಿ ನಗರದ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಬೇಕೆಂದರು.
    ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ ಮಾತನಾಡಿದರು.
    ಸಂಸದ ರಮೇಶ ಜಿಗಜಿಣಗಿ, ಮಳುಗೌಡ ಪಾಟೀಲ, ಭೀಮಾಶಂಕರ ಹದನೂರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 20

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts