ಹಾಲುಮತ ಸಮಾಜ ಶ್ರೇಷ್ಠ ಸಮಾಜ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ವಿಜಯಪುರ: ಎಲ್ಲ ಸಮಾಜದಲ್ಲಿ ಹಾಲುಮತ ಸಮಾಜ ಶ್ರೇಷ್ಠ ಸಮಾಜ. ನುಡಿದಂತೆ ನಡೆಯುವ ಸಮಾಜ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಸನ್ಮಾನಿಸುವುದರಿಂದ ಅವರನ್ನು ನಮ್ಮ ಮುಂದಿನ ಆಸ್ತಿಯನ್ನಾಗಿ ಮಾಡುವಂತಾಗಿದೆ. ಇದು ಒಂದು ಮಾದರಿ ಕಾರ್ಯಕ್ರಮ ಎಂದು ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.
ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಸೋಮವಾರ ಜಿಲ್ಲಾ ಕುರುಬ ಹಾಲುಮತ ನೌಕರರ ಸಂಘದ ವತಿಯಿಂದ ಜಿಲ್ಲಾ ಕುರುಬ ನೌಕರರ ಸಮಾವೇಶ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಸಂಘಟನೆ ಅಗತ್ಯವಾಗಿದೆ. ಸಮಾಜದ ಯಾವುದೇ ಒಬ್ಬ ವ್ಯಕ್ತಿಗೆ ಅನ್ಯಾಯವಾದಾಗ ಸಂಘಟನೆಯಿಂದ ಹೋರಾಟದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹಾಲುಮತ ಸಮಾಜದಲ್ಲಿ ಅಹಲ್ಯಾಬಾಯಿ ಹೋಳಕರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಹಕ್ಕಬುಕ್ಕರು, ಭಕ್ತ ಕನಕದಾಸರ ಕೊಡುಗೆ ಸಮಾಜಕ್ಕೆ ಅಪಾರವಾಗಿದೆ. ಹಾಲುಮತ ಸಮಾಜ ಮುಗ್ಧ ಸಮಾಜವಾಗಿದೆ. ಅಲ್ಲದೆ, ನಂಬಿಕೆ, ವಿಶ್ವಾಸಕ್ಕೆ ಪಾತ್ರವಾಗಿದೆ. ಈ ಸಮಾಜಕ್ಕೆ ಸದಾ ನನ್ನ ಬೆಂಬಲವಿದ್ದು, ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಾಜಿ ಸಚಿವ, ಬಾಗೇವಾಡಿ ಶಾಸಕ ಶಿವಾನಂದ ಎಸ್. ಪಾಟೀಲ ಮಾತನಾಡಿ, ಸಮಾಜದಲ್ಲಿ ಬಹುಮುಖ ಪ್ರತಿಭೆಗಳಿಗೆ ಕೊರತೆಯಿಲ್ಲ. ಪ್ರತಿಭೆಗಳನ್ನು ಗುರುತಿಸುವ ಕೆಲಸ ವಿರಳ. ಇಂತಹ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಈ ಸಂಘದ ಕಾರ್ಯ ಶ್ಲಾಘನೀಯವಾದದ್ದು. ವಿದ್ಯಾರ್ಥಿಗಳು ಸಹ ಇದರ ಪ್ರತಿಲ ಪಡೆದುಕೊಂಡು ಉನ್ನತ ವ್ಯಾಸಂಗ ಮಾಡಿ ಸಮಾಜ ಹಾಗೂ ದೇಶಕ್ಕೆ ಕೊಡುಗೆ ನೀಡಬೇಕೆಂದರು.
ನಾಗಠಾಣ ಶಾಸಕ ದೇವಾನಂದ ಚವಾಣ್ ಮಾತನಾಡಿ, ಹಾಲಮತ ಸಮಾಜ ಹಾಲಿನಷ್ಟೇ ಪರಿಶುದ್ಧವಾಗಿದೆ. ಇತರ ಸಮಾಜಗಳೊಂದಿಗೆ ಅನೋನ್ಯವಾಗಿರುತ್ತದೆ. ಎಷ್ಟೋ ಜನರು ಸಾಧು, ಸಂತರು ನಾಡಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ರಾಜಕಾರಣಿಗಳಾಗಿ, ಡಾಕ್ಟರ್‌ಗಳಾಗಿ, ಇಂಜೀಯರ್‌ಗಳಾಗಿ ವಿವಿಧ ರಂಗಗಳಲ್ಲಿ ಈ ಸಮಾಜದವರು ಮುಂಚೂಣಿಯಲ್ಲಿದ್ದಾರೆ ಎಂದರು.
ಪ್ರೋ. ಎ.ಆರ್. ಹೆಗ್ಗಣದೊಡ್ಡಿ ಉಪನ್ಯಾಸ ನೀಡಿ, ಯಾವುದೇ ಮಗು ದಡ್ಡನಲ್ಲ, ಪಾಲಕರು ತಮ್ಮ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ಸಂಸ್ಕಾರ ಕಲಿಸಬೇಕು ಎಂದರು.
ಸಮಾಜದ ಮುಖಂಡ ಬಿ.ಡಿ. ಪಾಟೀಲ ಮಾತನಾಡಿದರು.
ಮಕಣಾಪುರ ಗುರುಪೀಠದ ಸೋಮೇಶ್ವರ ಸ್ವಾಮೀಜಿ, ಮುಮ್ಮಟ್ಟಿ ಗುಡ್ಡದ ಬನಸಿದ್ದ ಮಹಾರಾಜರು(ಹಂಜಗಿ) ಸಾನ್ನಿಧ್ಯ ವಹಿಸಿದ್ದರು.
ಪ್ರದೇಶ ಯುವ ಕುರುಬ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಶಿಲ್ಪಾ ಕುದರಗೊಂಡ ಮಾತನಾಡಿದರು.
ನೌಕರರ ಸಂಘದ ಗೌರವ ಅಧ್ಯಕ್ಷ ಡಾ. ಅನೀಲ ಬೊಮ್ಮಗೊಂಡ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ವೇಳೆ ಎಸ್‌ಎಸ್‌ಎಲ್‌ಸಿ, ಪಿಯು ವಿದ್ಯಾರ್ಥಿಗಳು, ಸಾಧಕರು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು.
ಚಂದ್ರಶೇಖರ ಬಗಲಿ, ಜಿಪಂ ಸದಸ್ಯೆ ಸುಜಾತಾ ಸೋಮನಾಥ ಕಳ್ಳಿಮನಿ, ಶಾಂತಾಬಾಯಿ ನಾಗರಾಳ, ಕಲ್ಲಪ್ಪ ಮಟ್ಟಿ, ಸಿದ್ದು ಬುಳ್ಳ, ಸಮಾಜದ ಮುಖಂಡರಾದ ತಮ್ಮಣ್ಣ ಹಂಗರಗಿ, ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿಗಳಾದ ಐ. ಸಿ. ಆಶಾಪುರ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಜಿಲ್ಲಾ ಆಸ್ಪತ್ರೆಯ ಡಾ. ಎಸ್.ಎಲ್. ಲಕ್ಕಣ್ಣವರ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ರಾಜುಕಂಭಾಗಿ, ತಾಲೂಕು ಅಧ್ಯಕ್ಷ ಮಾನಪ್ಪ ಭಾವಿಕಟ್ಟಿ, ಮೋಹನ ದಳವಾಯಿ, ಪ್ರಕಾಶ ಜಾಲಗೇರಿ, ಮಲ್ಲು ಪರಸಣ್ಣವರ, ಪ್ರೊ. ಸುನೀಲ ತೋಂಟಾಪುರ, ಎಲ್.ಆರ್. ಜೈನಾಪುರ, ಶಿವಾನಂದ ಹಿರೇಕುಬರ, ಜಿ.ಎಸ್. ಕಾಡಸಿದ್ದ, ಬಿ.ಜಿ. ಪಾಂಡೆಗಾಂವಿ, ಸಂತೋಷ ಲೋಕುರಿ, ಆರ್.ಕೆ. ಹಳಿಮನಿ, ಜಿ.ಕೆ. ಹುಗ್ಗೆಣ್ಣವರ ಹಾಗೂ ತಾಲೂಕು ಘಟಕದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ಜಿಲ್ಲಾ ಕುರುಬ ನೌಕರರ ಸಂಘದ ಉಪಾಧ್ಯಕ್ಷ ರವಿ ಕಿತ್ತೂರ ಸ್ವಾಗತಿಸಿದರು. ಬಿ.ಎಚ್. ಜೋಗಿ ನಿರೂಪಿಸಿದರು. ಮಲ್ಲು ವಾಲಿಕಾರ ವಂದಿಸಿದರು.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....