More

    ದಾರಿ ಸಮಸ್ಯೆ ಇತ್ಯರ್ಥಗೊಳ್ಳಲಿ

    ವಿಜಯಪುರ: ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಇತ್ಯರ್ಥ ಪಡಿಸಲು ಕಾನೂನು ತಿದ್ದುಪಡಿ ಮಾಡಿ ತಹಸೀಲ್ದಾರರಿಗೆ ಅಧಿಕಾರ ನೀಡುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಅಖಂಡ ಕರ್ನಾಟಕ ರೈತ ಸಂಘದ ಮುಖಂಡರು ಮಂಗಳವಾರ ಮನವಿ ಸಲ್ಲಿಸಿದರು.

    ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ದಾರಿ ಸಮಸ್ಯೆ ಹಳ್ಳಿಗಳಲ್ಲಿ ತೀವ್ರವಾಗುತ್ತಿದೆ. ದಿನ ನಿತ್ಯ ದಾರಿಗಾಗಿ ಹೊಡೆದಾಟಗಳು ನಡೆಯುತ್ತಿವೆ. ಮೊದಲಿನಂತೆ ದಾರಿ ಮಾಡಿಕೊಡುವ ಅಧಿಕಾರವನ್ನು ತಹಸೀಲ್ದಾರರಿಗೆ ನೀಡಲು ಅಧಿವೇಶನದಲ್ಲಿ ಚರ್ಚಿಸಿ ಕಾನೂನು ತಿದ್ದುಪಡಿ ಮಾಡಬೇಕು. ಅಂದಾಗ ಮಾತ್ರ ದಾರಿ ಸಮಸ್ಯೆ ಬಗೆ ಹರಿಯುತ್ತದೆ. ತಾವು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮತ್ತು ಸಮಕ್ಷಮ ಭೇಟಿಯಾಗಿ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಒತ್ತಡ ತರಬೇಕೆಂದು ಮನವಿ ಮಾಡಿಕೊಂಡರು.

    ಅದಕ್ಕೆ ಸ್ಪಂದಿಸಿದ ಸಂಸದರು, ದಾರಿ ಸಮಸ್ಯೆ ನಮ್ಮ ಗಮನಕ್ಕೂ ಬಂದಿದ್ದು, ದಾರಿ ಸಮಸ್ಯೆ ಬಗೆಹರಿಯಲೇಬೇಕಾಗಿದೆ. ನಾನು ಕೂಡ ಮುಖ್ಯಮಂತ್ರಿಗಳಿಗೆ ಹೇಳಿ ಅಧಿವೇಶನದಲ್ಲಿಯೂ ಚರ್ಚಿಸಲು ಗಮನಕ್ಕೆ ತರಲಾಗುವುದು ಎಂದು ಹೇಳಿದರು.

    ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮ ರಂಜಣಗಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಮುಖಂಡರಾದ ಸಿದ್ರಾಮ ಅಂಗಡಗೇರಿ, ಈರಣ್ಣ ದೇವರಗುಡಿ, ಹೊನಕೇರಪ್ಪ ತೆಲಗಿ, ಕೃಷ್ಣಪ್ಪ ಭಮರಡ್ಡಿ, ಸಿದ್ದಪ್ಪ ಕಲಬೀಳಗಿ, ಸಂಗಪ್ಪ ಮುಂಡಗನೂರ ಮುಂತಾದವರು ಉಪಸ್ಥಿತರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts