16 C
Bangalore
Saturday, December 7, 2019

ವಕೀಲನಿಂದ ಬಿಜೆಪಿ ಅಭ್ಯರ್ಥಿ ತರಾಟೆಗೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆ ಕೋರ್ಟ್ ಆವರಣದ ಸಮುದಾಯ ಭವನದಲ್ಲಿ ಮಂಗಳವಾರ ನ್ಯಾಯವಾದಿಗಳ ಮತ ಯಾಚಿಸಲು ಹೋದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು ವಕೀಲರೊಬ್ಬರು ತರಾಟೆಗೆ ತೆಗೆದುಕೊಂಡರು.

ವಕೀಲರ ಸಭೆಯನ್ನುದ್ದೇಶಿಸಿ ರಮೇಶ ಜಿಗಜಿಣಗಿ ಮಾತನಾಡುತ್ತಿದ್ದಂತೆ ಎದ್ದು ನಿಂತ ವಕೀಲ ತಿಪ್ಪಣ್ಣ ದೊಡ್ಡಮನಿ ಸಂಸದರ ಸಾಧನೆ ಬಗ್ಗೆ ಪ್ರಶ್ನಿಸಿದರು. 10 ವರ್ಷ ಸಂಸದರಾಗಿ ಏನು ಮಾಡಿದ್ದೀರಿ? ನಾನೊಬ್ಬ ಸಾಮಾನ್ಯ ಮತದಾರನಾಗಿದ್ದು, ತಮ್ಮನ್ನು ಎರಡು ಬಾರಿ ಆರಿಸಿ ಕಳಿಸಿದ್ದೇವೆ. ಆದರೆ, ತಾವೊಬ್ಬ ದಲಿತರಾಗಿ ಎಷ್ಟು ದಲಿತ ಕೇರಿಗಳನ್ನು ಉದ್ಧರಿಸಿದ್ದೀರಿ ಎಂದು ಪ್ರಶ್ನಿಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ವಾದ-ಪ್ರತಿವಾದ ನಡೆಯಿತು.

ನನ್ನ ಅಧಿಕಾರವಧಿಯಲ್ಲಿ ಅನೇಕ ಶಾಲೆಗಳನ್ನು ಪ್ರಾರಂಭಿಸಿರುವೆ. ವಸತಿ ನಿಲಯಗಳಿಗೆ ಹೆಚ್ಚುವರಿ ಅನುದಾನ ನೀಡುವ ಮೂಲಕ ದಲಿತ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿರುವೆ. ದಲಿತ ಕೇರಿಯಲ್ಲಿ ಜನಿಸಿದ ನನಗೆ ಅಲ್ಲಿನ ಸ್ಥಿತಿಗತಿ ಏನೆಂಬುದು ಚೆನ್ನಾಗಿ ಗೊತ್ತು. ಆ ಕೇರಿಗಳ ಉದ್ಧಾರಕ್ಕೆ ಏನು ಮಾಡಬೇಕೆಂಬುದೂ ಗೊತ್ತು. ಪ್ರಶ್ನೆ ಕೇಳಿ, ತಮಗೆ ಬೇಡವೆಂದವರಾರು. ಆದರೆ, ಒಂದು ನೆನಪಿರಲಿ ದಲಿತರ ಅಭಿವೃದ್ಧಿ ಬಗ್ಗೆ ಏನು ಮಾಡಬೇಕೆಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದರು.

ನನ್ನನ್ನು ಬೆಂಬಲಿಸಿ; ಜಿಗಜಿಣಗಿ
ಮೋದಿಯವರ ನಾಯಕತ್ವದ ಜನಪ್ರಿಯತೆಯನ್ನು ಕಂಡು ದಂಗಾಗಿರುವ ವಿರೋಧಿಗಳು ವ್ಯಕ್ತಿಗತ ನಿಂದನೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಸುಳ್ಳುಗಳನ್ನೇ ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯುವ ಏಕೈಕ ಕಾಯಕದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಆರೋಪಿಸಿದರು.

ನ್ಯಾಯವಾದಿಗಳ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, 40 ವರ್ಷದ ರಾಜಕಾರಣದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವೆ. ಮತ್ತೊಮ್ಮೆ ನನ್ನನ್ನು ಬೆಂಬಲಿಸಿ ಎಂದರು.

ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ, ಬಿಜೆಪಿ ಬೆಂಬಲಿಸಲು ಮನವಿ ಮಾಡಿದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಎಂ.ಎಚ್. ಖಾಸನೀಸ್, ಮಂಜುಳಾ ಅರಕೇರಿ, ಕಲ್ಮೇಶ ಹಿರೇಮಠ, ಡಿ.ಜಿ. ಹಿರೇಮಠ, ಸಂಗಮೇಶ ಹೌದೆ, ಮಲ್ಲಿಕಾರ್ಜುನ ಹಳೆಮನಿ ಇತರರಿದ್ದರು.

ಕೇವಲ ಕಾಕಾ, ಮಾಮಾ ಎಂದು ಸವರ್ಣಿಯರ ಓಲೈಕೆಯಲ್ಲಿ ಬಿಜೆಪಿ ಅಭ್ಯರ್ಥಿ ತೊಡಗಿದ್ದು, ದಲಿತರ ಅನ್ಯಾಯದ ಬಗ್ಗೆ ಇವರಿಗೆ ಅರಿವಿಲ್ಲ. ಬಿಜೆಪಿ ಮುಖಂಡರ ಓಲೈಕೆ ಮಾಡುವುದೊಂದೇ ಸಂಸದರಿಗೆ ಗೊತ್ತು.
– ತಿಪ್ಪಣ್ಣ ದೊಡ್ಡಮನಿ ವಕೀಲ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...