Tuesday, 20th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ರಸ್ತೆಗೆ ಈರುಳ್ಳಿ ಸುರಿದು ಪ್ರತಿಭಟನೆ

Wednesday, 06.06.2018, 5:00 AM       No Comments

<<ರೈತರ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಲಿ | ಬಿಜೆಪಿ ಶಾಸಕರು ಸಂಕಷ್ಟ ಆಲಿಸಲಿ >>

ವಿಜಯಪುರ: ರಾಜ್ಯದಲ್ಲಿ ಈರುಳ್ಳಿ ಬೆಳೆಗಾರರು ಪದೆ ಪದೇ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈರುಳ್ಳಿ ಬೆಲೆ ಪಾತಾಳಕ್ಕಿಳಿದಿದ್ದು ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಆಗ್ರಹಿಸಿದರು.

ಪ್ರತಿ ವರ್ಷ ಈರುಳ್ಳಿ ಬೆಲೆ ಕುಸಿಯುತ್ತಲೇ ಇದೆ. ರೈತ ತೀವ್ರ ಆರ್ಥಿಕ ತೊಂದರೆ ಅನುಭವಿಸುವಂತಾಗುತ್ತದೆ. ಈ ಹಿಂದೆ ಅಧಿಕಾರಕ್ಕೆ ಬರುವುದಕ್ಕೂ ಮುಂಚೆ ಡಾ.ಸ್ವಾಮಿನಾಥನ್ ಆಯೋಗದ ವರದಿ ಅನುಷ್ಠಾನಗೊಳಿಸುವುದಾಗಿ ಹೇಳಿದ್ದ ಬಿಜೆಪಿ ಈಗ ತನ್ನ ಮಾತನ್ನು ಮರೆತಿದೆ. ನಾಲ್ಕು ವರ್ಷ ಗತಿಸಿದರೂ ವರದಿ ಅನುಷ್ಠಾನಗೊಳಿಸಿಲ್ಲ. ಇದರಿಂದ ಬೆಲೆ ಕುಸಿತ ಸಮಸ್ಯೆ ಎದುರಾಗುತ್ತಲೇ ಇದೆ ಎಂದರು.

ಕೇಂದ್ರ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಈರುಳ್ಳಿಗೆ ತನ್ನ ಪಾಲಿನ 1800 ರೂ. ಪ್ರತಿ ಕ್ವಿಂಟಲ್​ಗೆ ನೀಡಬೇಕು. ಇದಕ್ಕೆ ರಾಜ್ಯ ಸರ್ಕಾರದ 200 ರೂ. ಬೆಂಬಲ ಬೆಲೆ ಸೇರ್ಪಡೆಯಾಗಿ ಈರುಳ್ಳಿ ಬೆಳೆಗಾರರಿಗೆ ಕಿಂಚಿತ್ತಾದರೂ ಅನುಕೂಲವಾಗಲಿದೆ ಎಂದರು.

ಕೇಂದ್ರದ ಹೈಫೈ ಯೋಜನೆ

ಪ್ರಧಾನಿ ನರೇಂದ್ರ ಮೋದಿ ದೇಶದ ಕೀರ್ತಿಯನ್ನು ಹೆಚ್ಚಿಸುತ್ತಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ವಿಷಯದಲ್ಲಿ ನಾನು ಅವರನ್ನು ಸಮರ್ಥಿಸಿಕೊಳ್ಳುತ್ತೇನೆ. ಆದರೆ ಕಪ್ಪುಹಣ ತರುವ ವಿಷಯದಲ್ಲಿ, ಉದ್ಯೋಗ ನೀಡುವ ವಿಷಯದಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಬೆಳ್ಳುಬ್ಬಿ ಆರೋಪಿಸಿದರು.

ಮುದ್ರಾ ಯೋಜನೆ, ಮೇಕ ಇನ್ ಇಂಡಿಯಾ ಮೊದಲಾದ ಯೋಜನೆಗಳು ಕೇವಲ ಘೊಷಣೆಗಷ್ಟೇ ಸೀಮಿತವಾಗಿವೆ. ಇದು ಕೇವಲ ಹೈಫೈ ಯೋಜನೆಯಾಗಿವೆ, ದುಡಿಯುವ ವರ್ಗದ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಕಾಳಜಿ ಹೊಹಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಮಾನ ನಿಲ್ದಾಣ ಕಾಮಗಾರಿ

ವಿಮಾನ ನಿಲ್ದಾಣ ಕಾಮಗಾರಿ ನನೆಗುದಿಗೆ ಬಿದ್ದು ದಶಕಗಳೇ ಕಳೆದವು. ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದರು ಮತ್ತು ನಗರ ಶಾಸಕರು ಬಿಜೆಪಿಯವರೇ ಇದ್ದಾರೆ. ಇನ್ನಾದರೂ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಶ್ರಮಿಸಬೇಕೆಂದು ಒತ್ತಾಯಿಸಿದರು.

ಐತಿಹಾಸಿಕ ವಿಜಯಪುರ ನಗರ ಅವ್ಯವಸ್ಥೆಯ ಆಗರವಾಗಿದೆ. ಸ್ಲಂಗಳಲ್ಲಿ ವಿಜಯಪುರ ನಗರವಿದೆಯೋ ಅಥವಾ ನಗರವೇ ಸ್ಲಂನಲ್ಲಿದೆಯೋ ಎಂಬಂತಾಗಿದೆ. ವಿಜಯಪುರ ನಗರದ ಸರ್ವತೋಮುಖ ಪ್ರಗತಿ ಆಗಬೇಕಾಗಿದೆ, ಕೂಡಲೇ ವಿಜಯಪುರವನ್ನು ಸ್ಮಾರ್ಟ್ ಸಿಟಿಯನ್ನಾಗಿಸಬೇಕು ಎಂದು ಒತ್ತಾಯಿಸಿದರು.

ಶೂನ್ಯದಿಂದ ಸಿಂಹಾಸನಕ್ಕೆ

ಸಂಸತ್ ಚುನಾವಣೆ ವೇಳೆಗೆ ಬಿಜೆಪಿ ಸೇರ್ಪಡೆಗೆ ಆಹ್ವಾನ ಬಂದರೆ ಏನು ಮಾಡುತ್ತೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಬೆಳ್ಳುಬ್ಬಿ, ಬಿಜೆಪಿ ಸಂಘಟನೆಗೆ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದರೂ ಪ್ರಯೋಜನವಾಗಿಲ್ಲ, ಅವರೂ ಅವಕಾಶ ನೀಡಲಿಲ್ಲ. ಇನ್ಮುಂದೆ ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ. ಶೂನ್ಯದಿಂದ ಸಿಂಹಾಸನ ಸ್ಥಾಪಿಸಬೇಕು ಎಂಬುದು ನನ್ನ ಆಶಯ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ ಎಂದರು.

ರೈತರ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಜೆಡಿಎಸ್ ಶಾಸಕರು ಪ್ರತಿ ತಿಂಗಳು ಜನ ಸಂಪರ್ಕ ನಡೆಸುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಲು ವಿಶೇಷ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಶೀಘ್ರದಲ್ಲೇ ಆ ಕಾರ್ಯ ಅನುಷ್ಠಾನಗೊಳ್ಳಲಿದೆ.

| ಎಸ್.ಎಸ್. ಖಾದ್ರಿ ಇನಾಮದಾರ, ಜೆಡಿಎಸ್ ಮುಖಂಡ

ಈರುಳ್ಳಿ ಸುರಿದು ಪ್ರತಿಭಟನೆ

ಈರುಳ್ಳಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ನೂರಾರು ರೈತರು ಈರುಳ್ಳಿ ಸುರಿದು ಪ್ರತಿಟಭಟನೆ ನಡೆಸಿದರು.

ಬಳಿಕ ಜಿಲ್ಲಾಡಳಿತ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡಬೇಕು. ಪ್ರತೀ ಕ್ವಿಂಟಾಲ್ ಈರುಳ್ಳಿಗೆ 1800 ರೂ. ನೀಡಲು ಆಗ್ರಹಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮುಖಂಡ ಆನಂದ ಬಿಸ್ಟಗೊಂಡ ಸೇರಿದಂತೆ ಹಲವು ರೈತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Back To Top