18.5 C
Bangalore
Monday, December 16, 2019

ತಂತ್ರಜ್ಞಾನಕ್ಕೆ ತಕ್ಕಂತೆ ತರಬೇತಿ ಅವಶ್ಯಕ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ವಿಜಯಪುರ: ಒಂದು ಕಾಲೇಜಿನ ಆಡಳಿತ, ಕಾರ್ಯ ಚಟುವಟಿಕೆಗಳು ಉತ್ತಮ ರೀತಿಯಿಂದ ನಡೆಯಲು ಅಲ್ಲಿನ ಬೋಧಕೇತರ ಸಿಬ್ಬಂದಿ ಕಾರ್ಯಜ್ಞಾನ ಹೊಂದಿರಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಶಾರದಾಭವನದಲ್ಲಿ ಪಪೂ ಶಿಕ್ಷಣ ಇಲಾಖೆ ಬೋಧಕೇತರ ಸಿಬ್ಬಂದಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುಗದಲ್ಲಿ ಪ್ರತಿಯೊಂದು ವಿಷಯವು ಗಣಕಯಂತ್ರ, ಅಂತರ್ಜಾದ ಮೂಲಕವೇ ನಡೆಯುತ್ತಿವೆ. ಸಿಬ್ಬಂದಿಗೆ ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ತರಬೇತಿ ನೀಡುವುದು ಅವಶ್ಯಕವಾಗಿದೆ. ಕೇವಲ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಮಾತ್ರ ತರಬೇತಿ ನೀಡದೇ ಬೋಧಕೇತರ ಸಿಬ್ಬಂದಿಗೂ ಅದನ್ನು ವಿಸ್ತರಿಸಿರುವ ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಜೆ.ಎಸ್. ಪೂಜೇರಿ ಅವರ ಕಾರ್ಯ ಶ್ಲಾಘನಾರ್ಹ. ಈ ಕಾರ್ಯಾಗಾರ ಕೇವಲ ಸರ್ಕಾರಿ, ಅನುದಾನಿತ ಕಾಲೇಜು ಸಿಬ್ಬಂದಿಗೆ ನೀಡದೇ ಅನುದಾನರಹಿತ ಸಿಬ್ಬಂದಿಗೂ ವಿಸ್ತರಿಸಿದ್ದು ಶ್ಲಾಘನೀಯ. ಈ ಕಾರ್ಯಾಗಾರದ ಲಾಭ ಎಲ್ಲರೂ ಪಡೆಯಬೇಕೆಂದು ಹೇಳಿದರು.

ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಜೆ.ಎಸ್. ಪೂಜೇರಿ ಅಧ್ಯಕ್ಷತೆ ವಹಿಸಿ, ಪಪೂ ವಿಭಾಗದಲ್ಲಿ ಅನೇಕ ಬದಲಾವಣೆಗಳು ಆಗುತ್ತಿದ್ದು, ಆನ್‌ಲೈನ್‌ನಲ್ಲಿ ತ್ವರಿತವಾಗಿ ಮಾಹಿತಿ ದಾಖಲಿಸುವುದು. ಸೇವಾ ಪುಸ್ತಕ, ಸರ್ಕಾರಿ, ಅರೆ ಸರ್ಕಾರಿ ಹಣಕಾಸಿನ ನಿರ್ವಹಣೆ, ದಾಖಲಾತಿ ನಿರ್ವಹಣೆ, ಕಡತಗಳ ನಿರ್ವಹಣೆ ಹೀಗೆ ಹತ್ತು ಹಲವು ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಅದಕ್ಕಾಗಿ ಹೊಸದಾಗಿ ಸೇವೆ ಸೇರಿದವರಿಗೂ, ಈಗಾಗಲೇ ಸೇವೆಯಲ್ಲಿರುವವರಿಗೂ ತರಬೇತಿ ಅವಶ್ಯವಾಗಿರುವುದರಿಂದ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ನಿರ್ದೇಶಕ ಪಪೂ ಶಿಕ್ಷಣ ಇಲಾಖೆ ಅಧೀಕ್ಷಕ ಬಿ.ಟಿ. ಗೊಂಗಡಿ, ವಿಪ ಸದಸ್ಯ ಅರುಣ ಶಹಾಪುರ ಹಾಗೂ ಉಪನಿರ್ದೇಶಕ ಜೆ.ಎಸ್. ಪೂಜೇರಿ ಅವರನ್ನು ಬಾಲಿಕೆಯರ ಸರ್ಕಾರಿ ಪಪೂ ಕಾಲೇಜು ಹಾಗೂ ಬೋಧಕೇತರ ಸಿಬ್ಬಂದಿ ಒಕ್ಕೂಟದಿಂದ ಸನ್ಮಾನಿಸಲಾಯಿತು.
ಅಡಿವೆಪ್ಪ ಸಾಲಗಲ್, ನ್ಯಾಯವಾದಿ ನಾಗರಾಜ ಲಂಬು, ಎಸ್.ಬಿ. ಹಿರೇಮಠ ಉಪಸ್ಥಿತರಿದ್ದರು. ನಿವೃತ್ತ ಅಧಿಕಾರಿ ಎನ್.ಎಸ್. ಪುರೋಹಿತ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ಒದಗಿಸಿದರು. ಜಿಲ್ಲೆಯ ಪಪೂ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 250 ಜನ ಬೋಧಕೇತರ ಸಿಬ್ಬಂದಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಪ್ರಾಚಾರ್ಯ ಪ್ರೊ.ಎಸ್.ಬಿ. ಸಾವಳಸಂಗ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪ್ರೊ.ಎಂ.ಬಿ. ರಜಪೂತ ನಿರೂಪಿಸಿದರು. ಪ್ರೊ.ಎಸ್.ಆರ್. ಬಿರಾದಾರ ವಂದಿಸಿದರು.





Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...