ವಿಜಯಪುರ | ಹಾಡಹಗಲೇ ಗುಂಡಿನ ದಾಳಿ; ಸ್ಥಳದಲ್ಲಿಯೇ ಪ್ರಾಣಬಿಟ್ಟ ರೌಡಿಶೀಟರ್

Murder
Published on

ವಿಜಯಪುರ: ರಾಜ್ಯ ವಿಧಾನ ಸಭೆ ಚುನಾವಣೆ ಕಾವು ರಂಗೇರಿರುವಾಗಲೇ ವಿಜಯಪುರ ನಗರ ಕ್ಷೇತ್ರದಲ್ಲಿ ಬಂದೂಕಿನ ಗುಂಡು ಸದ್ದು ಮಾಡಿದೆ! ಇಲ್ಲಿನ ಚಂದಾಪುರ ಕಾಲನಿಯಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಹೈದರ್ ಅಲಿ ನದಾಫ್ ದಾರುಣವಾಗಿ ಹತ್ಯೆಗೀಡಾಗಿದ್ದಾನೆ.

ನಾಲ್ಕು ಸುತ್ತಿನ ಗುಂಡಿನ ದಾಳಿ

ವಿಜಯಪುರ ನಗರದಲ್ಲಿ ಚಂದಾಪೂರ ಕಾಲೋನಿ ಬಳಿ‌ ಇರುವ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತುತ್ತಿದ್ದ ವೇಳೆ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಹೈದರ್ ಓಡಿ ಹೋಗಿದ್ದಾರೆ. ಬೆನ್ನಟ್ಟಿದ್ದ ದುಷ್ಕರ್ಮಿಗಳು ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಎರಡು ಗುಂಡುಗಳು ಪತ್ತೆಯಾಗಿವೆ.

ಸ್ಥಳಕ್ಕೆ ಪೊಲೀಸರಿಂದ ಭೇಟಿ, ಪರಿಶೀಲನೆ

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವದಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತಿಚೆಗಷ್ಟೆ ನಡೆದ ಪಾಲಿಕೆ ಚುನಾವಣೆಯಲ್ಲಿ ಹೈದರ್ ನದಾಫ್ ವಾರ್ಡ್ ನಂ.19 ರಿಂದ ತಮ್ಮ ಪತ್ನಿ ನಿಶಾತ್ ನದಾಫ್ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲುವು ಸಾಧಿಸಿದ್ದರು. ರಿಯಲ್ ಎಸ್ಟೇಟ್ ವ್ಯವಹಾರ ಹಾಗೂ ಬಡ್ಡಿ ಹಣಕಾಸಿನ ವ್ಯವಹಾರ ನಡೆಸುತ್ತಿದ್ದ.

ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ದುಷ್ಕರ್ಮಿಗಳು ಕೊಲೆ ಮಾಡಿ ಕಾರಿನಲ್ಲಿ ಹೋಗುವುದನ್ನು ಸ್ಥಳೀಯರು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net