More

    ಕೊರಮ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

    ವಿಜಯಪುರ: ಹಿಂದುಳಿದ ಕೊರಮ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹಿಸಿ ಆ ಸಮುದಾಯದವರು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ಜಿಲ್ಲಾ ಯುವ ಕೊರಮ ಕ್ಷೇಮಾಭಿವೃದ್ಧಿ ಸಂಘ (ರಿ)ದ ನೇತೃತ್ವ ಶಾಸಕ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

    ಅಧ್ಯಕ್ಷ ರವೀಂದ್ರ ಜಾಧವ ಮಾತನಾಡಿ, ಈಗಾಗಲೇ 2013-14ರ ಬಜೆಟ್‌ನಲ್ಲಿ ಹಿಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೊರಮ ಅಭಿವೃದ್ಧಿ ಮಂಡಳಿ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಈವರೆಗೂ ಕೊರಮ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿಲ್ಲ. ರಾಜ್ಯದಲ್ಲಿ ಕೊರಮ ಸಮಾಜ 15-20 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಬಹಳ ಹಿಂದುಳಿದಿದೆ. ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಎಂ.ಬಿ. ಪಾಟೀಲ ಅವರು ಸರ್ಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿದರು.

    ಮುಖಂಡರಾದ ಸಿದ್ದಣ್ಣ ಭಜಂತ್ರಿ, ಶಿವಾನಂದ ಭಜಂತ್ರಿ, ಬಸವರಾಜ ಭಜಂತ್ರಿ, ಬಾಬು ಭಜಂತ್ರಿ, ಕಾಮೇಶ ಭಜಂತ್ರಿ, ರಮೇಶ ಭಜಂತ್ರಿ, ಸದಾಶಿವ ಭಜಂತ್ರಿ, ರಾಜಶೇಖರ ಭಜಂತ್ರಿ, ಹಣಮಂತ ಭಜಂತ್ರಿ, ಪ್ರಕಾಶ ಭಜಂತ್ರಿ, ಸತ್ಯೆಪ್ಪ ಭಜಂತ್ರಿ, ಲಕ್ಷ್ಮಣ ಭಜಂತ್ರಿ, ಶ್ರೀಕಾಂತ ಭಜಂತ್ರಿ, ಮಂಜುನಾಥ ಭಜಂತ್ರಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts