More

    5 ವರ್ಷದಲ್ಲಿ 129 ರಸ್ತೆ ಅಭಿವೃದ್ಧಿ: ಸಂಸದ ರಮೇಶ ಜಿಗಜಿಣಗಿ

    ವಿಜಯಪುರ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ -3 ರಡಿ ಜಿಲ್ಲೆಯ ಒಟ್ಟು 1361.42 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದರು.

    ಈಗಾಗಲೇ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಒಟ್ಟು 117.39 ಕೋಟಿ ರೂ.ಅಂದಾಜು ಮೊತ್ತ ನಿಗದಿಯಾಗಿದ್ದು, ಹಂತ ಹಂತವಾಗಿ ಅನುದಾನ ಬಿಡುಗಡೆಯಾಗಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ವಿಜಯಪುರ-33, ಬಸವನಬಾಗೇವಾಡಿ-34, ಇಂಡಿ- 20, ಸಿಂದಗಿ- 20, ಮುದ್ದೇಬಿಹಾಳ-22 ಹೀಗೆ ಒಟ್ಟು 129 ರಸ್ತೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಐದು ವರ್ಷದಲ್ಲಿ 12 ಕಾಮಗಾರಿ ಕೈಗೊಳ್ಳಲಾಗಿದ್ದು, 92.58 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಆದಷ್ಟು ಬೇಗ ಉದ್ದೇಶಿತ ಎಲ್ಲ ಕಾಮಗಾರಿಗಳನ್ನು ಕೈಗೆತ್ತಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದರು.

    ಗ್ರಾಮಸಡಕ್ ಯೋಜನೆ ಎಲ್ಲ ರಾಜ್ಯಗಳಿಗೂ ಏಕಕಾಲಕ್ಕೆ ಜಾರಿಯಾಗಲಿದೆ. ಕೆಲವೊಂದು ರಾಜ್ಯಗಳಲ್ಲಿ ಎರಡನೇ ಹಂತದ ಕಾಮಗಾರಿಗಳು ಪೂರ್ಣಗೊಳ್ಳದ ಹಿನ್ನೆಲೆ ಮೂರನೇ ಹಂತದ ಅನುದಾನ ಬಿಡುಗಡೆಯಾಗಲು ವಿಳಂಬವಾಗಿತ್ತು. ಈಗ ಎಲ್ಲ ರಾಜ್ಯಗಳಲ್ಲಿಯೂ ಕಾಮಗಾರಿ ಪೂರ್ಣಗೊಂಡಿದೆ. ಇದೀಗ 3 ನೇ ಹಂತದ ಕಾಮಗಾರಿಗಳಿಗೆ ಮಂಜೂರು ದೊರಕಿದೆ. ಸೆಟ್‌ಲೈಟ್ ಮೂಲಕ ರಸ್ತೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದರು.

    ರೈಲ್ವೆ ಮೇಲ್ಸೇತುವೆ ಕಾಮಗಾರಿ
    ರೈಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳ ಮೇಲೆ ಒತ್ತಡ ತರಲಾಗಿದೆ. ಗುತ್ತಿಗೆದಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಅವನನ್ನು ಕಪ್ಪು ಪಟ್ಟಿಗೆ ಸೇರ್ಪಡೆ ಮಾಡಿದರೆ ಕಾಮಗಾರಿ ಬಿಟ್ಟು ಹೋಗುತ್ತಾನೆ. ನಂತರ ಕಾಮಗಾರಿ ಪೂರ್ಣಗೊಳಿಸಲು ವಿಳಂಬವಾಗಲಿದೆ ಎನ್ನುವ ಕಾರಣಕ್ಕೆ ಸುಮ್ಮನಿದ್ದೇನೆ. ಅಧಿಕಾರಿಗಳಿಂದ ನಿರಂತರವಾಗಿ ಒತ್ತಡ ಹಾಕಿಸುತ್ತಿದ್ದೇನೆ ಎಂದರು.

    ನೆರೆ ಪರಿಹಾರ
    ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರದಿಂದ ಸರಿಯಾಗಿ ಅನುದಾನ ಬರುತ್ತಿದೆ. ಕೇಂದ್ರ ಸರ್ಕಾರಕ್ಕೆ ನಮ್ಮದೊಂದೇ ರಾಜ್ಯವಿರಲ್ಲ. ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ ಎಂದ ಜಿಗಜಿಣಗಿ, ತುಮಕೂರಿನಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲಿ ಸಿಎಂ ಯಡಿಯೂರಪ್ಪ ನೆರೆ ಪರಿಹಾರ ನೀಡುವಂತೆ ಬಹಿರಂಗವಾಗಿ ಬೇಡಿಕೆ ಇಟ್ಟಿರುವುದನ್ನು ಸಮರ್ಥಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts