ಉಸಿರುಗಟ್ಟಿಸಿ ಮಹಿಳೆ ಕೊಲೆ

ವಿಜಯಪುರ: ಇಲ್ಲಿನ ಜನ್ನತ್ ಸಭಾಂಗಣದ ಹಿಂಬಾಗದ ಮನೆಯೊಂದರಲ್ಲಿ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ.
ರೇಖಾ ಶಿವಶಂಕರ ದೇಶಮಾನೆ (69) ಕೊಲೆಯಾದ ವೃದ್ಧೆ. ಮನೆಯಲ್ಲಿ ರಾತ್ರಿ ಮಲಗಿದ್ದ ವೇಳೆಯೇ ಈಘಟನೆ ನಡೆದಿದ್ದು ಬೆಳಗಿನ ಜಾವ ಪ್ರಕರಣ ಬಯಲಾಗಿದೆ. ದುಷ್ಕರ್ಮಿಕರು ಉಸಿರು ಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ ನಿಕ್ಕಂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಲಾಯಿತು. ಈ ಬಗ್ಗೆ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *