More

    ರ‌್ಯಾಲಿ ಅನುಮತಿಗೆ ಎಸ್‌ಪಿ ನಕಾರ

    ವಿಜಯಪುರ: ಮೋದಿ ಸರ್ಕಾರ ಜಾರಿಗೆ ತಂದ ನೂತನ ಪೌರತ್ವ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ. ಹೀಗಾಗಿ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ, ಸಿಎಂ ಯಡಿಯೂರಪ್ಪ ಒತ್ತಡಕ್ಕೆ ಮಣಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮತಿ ನೀಡುತ್ತಿಲ್ಲ ಎದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ ಆರೋಪಿಸಿದರು.
    ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದು ಮನವರಿಕೆ ಮಾಡಿದರೂ ಪೊಲೀಸರು ಒಪ್ಪುತ್ತಿಲ್ಲ. ಈ ಆಡಳಿತ ವೈಖರಿ ಬೇಸರ ತಂದಿದೆ. ಇನ್ನಾದರೂ ಅನುಮತಿ ನೀಡಬೇಕೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.
    ಪ್ರಸ್ತುತ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಜೂಜ್ ಸಮುದಾಯದ ಮೇಲೆ ಹಿಟ್ಲರ್ ದಾಳಿ ಮಾಡಿದ ರೀತಿಯಲ್ಲೇ, ಮೋದಿ ಸರ್ಕಾರ ಮುಸ್ಲಿಮರ ವಿರುದ್ಧ ಕಾನೂನು ಜಾರಿಗೆ ಮುಂದಾಗಿದೆ. ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಗೂಂಡಾಗಳನ್ನು ಬಿಟ್ಟು ದೌರ್ಜನ್ಯ ನಡೆಸಿದೆ ಎಂದು ಕಿಡಿಕಾರಿದರು.
    ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ. ಎನ್‌ಆರ್‌ಸಿ, ಸಿಎಎ, ಎನ್‌ಪಿಆರ್‌ಯಿಂದ ಮುಸ್ಲಿಂ ಸಮುದಾಯ ಆತಂಕಕ್ಕೆ ಒಳಗಾಗಿದೆ. ಹಿಂದೂಗಳಿಗೂ ಈ ಕಾಯ್ದೆಯಿಂದ ಅನ್ಯಾಯವಾಗಲಿದೆ. ಯಾವುದೇ ಕಾರಣಕ್ಕೂ ಸಂವಿಧಾನ ವಿರೋಧಿ ಕಾಯ್ದೆ ಜಾರಿಗೆ ತರಬಾರದು. ಅದಕ್ಕೆ ನಮ್ಮ ವಿರೋಧವಿದೆ ಎಂದರು.
    ದೇಶದಲ್ಲಿ ನಿರುದ್ಯೋಗಿಗಳ ಪ್ರಮಾಣ ಹೆಚ್ಚುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸಮಸ್ಯೆಗಳ ಸಂಖ್ಯೆ ಹೆಚ್ಚಿದೆ. ಅದರ ಬಗ್ಗೆ ಮೋದಿ ಸರ್ಕಾರ ಎಳ್ಳಷ್ಟು ಸ್ಪಂದಿಸಿಲ್ಲ. ಅವರ ಆಡಳಿತಕ್ಕೆ ಬೇಸತ್ತು ಜನರು ಪ್ರಶ್ನಿಸುತ್ತಿರುವುದನ್ನು ಅರಿತು, ಗಮನ ಬೇರೆಡೆ ಸೆಳೆಯಲು ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಮುಖಂಡರಾದ ಎಸ್.ಎಂ.ಪಾಟೀಲ ಗಣಿಹಾರ, ಸುರೇಶ ಘೋಣಸಗಿ, ಹಮೀದ್ ಮುಶ್ರೀಫ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts