More

    ನ್ಯಾಯಾಂಗದಲ್ಲೂ ಮೀಸಲಾತಿ ಜಾರಿಯಾಗಲಿ

    ವಿಜಯಪುರ : ನ್ಯಾಯಾಂಗದಲ್ಲಿಯೂ ಮೀಸಲಾತಿ ವ್ಯವಸ್ಥೆ ಜಾರಿಯಾಗಬೇಕು. ಈ ಬಗ್ಗೆ ಎಲ್ಲ ದಲಿತ ಸಂಘಟನೆಗಳು ಒಗ್ಗೂಡಿ ಬೃಹತ್ ಆಂದೋಲನ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ ಹೇಳಿದರು.

    ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ, ಈ ತೀರ್ಪು ಸಮಸ್ತ ದಲಿತರ ಮೇಲೆ ಪ್ರಹಾರ ಮಾಡಿದಂತಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಮೀಸಲಾತಿಗೆ ಐತಿಹಾಸಿಕ ಹಿನ್ನೆಲೆ ಇದೆ. ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರು ದಲಿತರಿಗಾಗಿ ಪ್ರತ್ಯೇಕ ಮತದಾನ ಪದ್ಧತಿ ಕಲ್ಪಿಸಬೇಕು ಹಕ್ಕೊತ್ತಾಯ ಮಂಡಿಸಿದ್ದರು. ಇದರಿಂದಾಗಿ ದೇಶ ಇಬ್ಭ್ಬಾಗಕ್ಕೆ ಕಾರಣವಾಗುತ್ತದೆ ಎನ್ನುವ ಕಾರಣಕ್ಕೆ ಗಾಂಧೀಜಿ ಅವರು ಒಪ್ಪಲಿಲ್ಲ, ಪರಿಣಾಮವಾಗಿ ಮೀಸಲಾತಿ ಕಲ್ಪಿಸಲಾಗಿದೆ. ಅದನ್ನು ಕಿತ್ತುಹಾಕಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಪಡುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ನ್ಯಾಯಾಂಗದಲ್ಲಿ ಮೀಸಲಾತಿ ಕಲ್ಪಿಸಬೇಕಾದ ಅವಶ್ಯಕತೆ ಇದೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ಸೇರಿದಂತೆ ಎಲ್ಲ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ನೇಮಕದಲ್ಲಿ ಮೀಸಲಾತಿ ನೀಡಬೇಕು. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಮೀಸಲಾತಿ ಕಲ್ಪಿಸಬೇಕು ಎನ್ನುವ ಪ್ರಸ್ತಾವ ಇತ್ತು. ಅದು ಈವರೆಗೆ ಜಾರಿಯಾಗಿಲ್ಲ. ಅದರಿಂದಾಗಿ ಇಂದು ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿಗೆ ನೀಡುತ್ತಿರುವ ಮೀಸಲಾತಿಗೆ ಸಂಕಷ್ಟ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನಾಳೆ ಸಂವಿಧಾನ ಉಳಿಸಿ ಆಂದೋಲನ
    ವಿಜಯಪುರ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ೆ.24 ರಂದು ಜುಮನಾಳ ಕ್ರಾಸ್ ಬಳಿ ‘ಸಂವಿಧಾನ ಉಳಿಸಿ’ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರು ವೇದಿಕೆ ಮೇಲೆ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

    ಮುಖಂಡರಾದ ಸಿ.ವಿ. ಕೊಡಬಾಗಿ, ಅಬ್ದುಲ್ ಹಮೀದ್ ಮುಶ್ರ್ೀ, ರಮೇಶ ಆಸಂಗಿ, ಸುರೇಶ ಮಣ್ಣೂರ, ವಿನಾಯಕ ಗುಣಸಾಗರ, ಅಡಿವೆಪ್ಪ ಸಾಲಗಲ್ಲ, ನಾಗರಾಜ ಲಂಬು, ಸುರೇಶ ಘೋಣಸಗಿ, ಮಹೇಶ ಕ್ಯಾತನ್, ಮೊಹ್ಮದ್‌ರಫೀಕ್ ಟಪಾಲ್, ತಮ್ಮಣ್ಣ ಮೇಲಿನಕೇರಿ, ಅಬ್ದುಲ್‌ರಜಾಕ್ ಹೊರ್ತಿ, ಅಶೋಕ ಚಲವಾದಿ, ವಸಂತ ಹೊನಮೋಡೆ, ಈರಪ್ಪ ಜಕ್ಕಣ್ಣವರ, ಬಬಲು ಪೀರಜಾದೆ, ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

    ದಲಿತರು ಈ ದೇಶದ ಮೂಲನಿವಾಸಿಗಳು, ಹೆತ್ತ ತಾಯಿಗಿಂತ ಹೆಚ್ಚು ದೇಶವನ್ನು ಪ್ರೀತಿಸುತ್ತೇವೆ. ಮೊದಲು ದೇಶ, ನಂತರ ಧರ್ಮ, ನಂತರ ಜಾತಿ ಎನ್ನುವುದು ವಿಚಾರಧಾರೆಯನ್ನು ಪಾಲಿಸುತ್ತಾ ಬರುತ್ತಿದ್ದೇವೆ. ಆದರೆ ಕೆಲವರು ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗುವ ಮೂಲಕ ದೇಶದ್ರೋಹ ಕೆಲಸಕ್ಕೆ ಮುಂದಾಗಿದ್ದಾರೆ. ಅಂತಹವರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು.
    ಪ್ರೊ.ರಾಜು ಆಲಗೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts