17.8 C
Bengaluru
Wednesday, January 22, 2020

ಶಿಕಾರಖಾನೆ ಕೊಳಗೇರಿ ಅಭಿವೃದ್ಧಿಪಡಿಸಿ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ವಿಜಯಪುರ : ಶಿಕಾರಖಾನೆ ಕೊಳಗೇರಿ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗ ಹರಡಿ ಜನ ಭಯಭೀತರಾಗಿದ್ದು, ಕೊಳಗೇರಿಯನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಶುಕ್ರವಾರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ವಾರ್ಡ್ ನಂ.15ರ ಓಣಿಯಲ್ಲಿ ಅವೈಜ್ಞಾನಿಕ ಒಳಚರಂಡಿ, ಸಾರ್ವಜನಿಕ ಶೌಚಾಲಯ ಅವವ್ಯಸ್ಥೆ, ರಸ್ತೆಗಳ ತುಂಬಾ ಕಸದ ರಾಶಿ, ಬೀದಿಗಳಲ್ಲಿ ಕಲುಷಿತಗೊಂಡಿರುವ ನೀರು ತಗ್ಗು ದಿನ್ನೆಯಲ್ಲಿ ಸಂಗ್ರಹ ಗೊಂಡು ಓಣಿಯ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಉಂಟಾಗುತ್ತಿದೆ. ಈಗಾಗಲೇ ಓಣಿಯ ನಿವಾಸಿ ಹಣಮಂತ ಹೂಗಾರ ಅವರ ಮಗಳು ದಾನಮ್ಮ ಹಣಮಂತ ಹೂಗಾರ ಅವರಿಗೆ ಸಾಂಕ್ರಾಮಿಕ ರೋಗ ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓಣಿಯ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ತಗಲುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳಿಗೆ ಓಣಿಯ ಸ್ವಚ್ಛತೆ ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಕೊಟ್ಟರು ಎಚ್ಚೆತ್ತುಕೊಂಡಿಲ್ಲ. ಈಗಿದ್ದ ಶೌಚಾಲಯವನ್ನು ಹೈಟೆಕ್ ಶೌಚಾಲಯವಾಗಿ ಮಾರ್ಪಡಿಸಬೇಕು.

ವೈಜ್ಞಾನಿಕವಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಓಣಿಯ ನಿವಾಸಿಗಳಿಗೆ 24*7 ಶುದ್ಧ ಕುಡಿಯುವ ನೀರು ಒದಗಿಸಬೇಕು. ಕೂಡಲೇ ಸ್ವಚ್ಛತೆ ಕುರಿತು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸಂಬಂಧ ಅಧಿಕಾರಿಗಳಿಗೆ ಸೂಚಿಸಬೇಕೆಂದು ನಿವಾಸಿಗಳು ಒತ್ತಾಯಿಸಿದರು.

ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿರುವ ಕುಟುಂಬಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರ ಹಾಗೂ ಅವರ ಚಿಕಿತ್ಸೆಯ ಖರ್ಚು ವೆಚ್ಚವನ್ನು ಸರ್ಕಾರ ಭರಿಸಿ ಬಡ ಕುಟುಂಬಕ್ಕೆ ಸಹಾಯ ಮಾಡಲು ಮುಂದಾಗಬೇಕೆಂದರು.

ನಿವಾಸಿಗಳಾದ ಸಂತೋಷ ಮಸಿಮನಾಳ, ಜಾವೀದ ಮುಲ್ಲಾ, ಮಹೇಶ ಕ್ಷೀರಸಾಗರ, ಮಾಳಪ್ಪ ದೊಡಮನಿ, ಕಲ್ಲಪ್ಪ ಶಿವಶರಣ, ಲೋಹಿತ ಸಕ್ರೆನ್ನವರ, ಪವನ ಕೋಳೂರ, ಜಿ.ಜಿ.ದೊಡಮನಿ, ಆರ್.ಟಿ. ಬಿರಾದಾರ, ಅನೀಲ ಪೂಜಾರಿ, ಸಿದ್ರಾಮ ಸಂಗೋಗಿ, ಅರುಣ ಜುಮನಾಳ, ಆನಂದ ಕೆರೂರ, ಆನಂದ ಪೂಜಾರಿ, ರವಿ ಗೌಂಡಿ, ಸಾಗರ ಲಾಯದಗುಂದಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...