More

    ವೇಮನ ಒಬ್ಬ ಸಮಾಜ ಸುಧಾರಕ

    ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

    ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡ ಮಹಾಯೋಗಿ ವೇಮನರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಾಯೋಗಿ ವೇಮನರು ಜಾತಿ ಬೇಧ, ಮತ ಪಂಥ ಮೀರಿ ನಿಂತು ಬೆಳೆದಿದ್ದಾರೆ. ಅವರು ಸರಳತೆಯಿಂದ ಬದುಕಿ, ಸಂತ ಜೀವನಕ್ಕೆ ಮಾದರಿ ಎನಿಸಿದ್ದರು ಎಂದರು.

    ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಮಹಾಯೋಗಿ ವೇಮನ ಮತ್ತು ಹೇಮರಡ್ಡಿ ಮಲ್ಲಮ್ಮ ಅವರು ರಡ್ಡಿ ಸಮಾಜದ ಎರಡು ಕಣ್ಣುಗಳಿದ್ದಂತೆ. ಅವರ ದಾರಿಯಲ್ಲಿ ನಡೆದಾಗ ಪ್ರತಿಯೊಬ್ಬ ಆದರ್ಶ ವ್ಯಕ್ತಿಗಳಾಗುತ್ತಾರೆ ಎಂದು ಹೇಳಿದರು.

    ಬಸವಾದಿ ಶರಣರ ಕಾಲದ ವಚನಕಾರರು ಹಾಗೂ ವೇಮನರ ವಚನಗಳು ಒಂದೇ ತತ್ವವನ್ನು ಹೇಳುತ್ತವೆ. ಅವರ ಆದರ್ಶ, ಚಿಂತನೆಗಳು ಇಂದಿಗೂ ಪ್ರಸ್ತುತ. 12ನೇ ಶತಮಾನದ ಬಸವಣ್ಣ, ಸರ್ವಜ್ಞ ಅವರ ಸಾಲಿನಲ್ಲಿ ವೇಮನ ನಿಲ್ಲುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರಿಯ ನಿಸರ್ಗ ಚಿಕಿತ್ಸಾ ತಜ್ಞ ಡಾ.ಹನಮಂತ ಮಸಳಿ ಉಪನ್ಯಾಸ ನೀಡಿದರು. ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ( ಸಾಸನೂರ), ಜಿಪಂ ಸಿಇಒ ಗೋವಿಂದ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಮಹೇಶ ಪೋದ್ದಾರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚನಾಳ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts