25.5 C
Bangalore
Monday, December 16, 2019

ಶಾಸಕ ನಡಹಳ್ಳಿ ಚರ್ಚೆಗೆ ಬರಲಿ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ವಿಜಯಪುರ: ಜಿಲ್ಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅವರು ಮಾಡಿರುವ ನೀರಾವರಿ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಲ್ಲಿ ವಿಶ್ವಾಸವಿದೆ. ಎಂ.ಬಿ.ಪಾಟೀಲರು ಮಾಡಿದ ಕಾರ್ಯಸಾಧನೆಗೆ ನಡಹಳ್ಳಿಯಂತಹವರಿಂದ ಸರ್ಟಿಫಿಕೇಟ್ ಬೇಕಾಗಿಲ್ಲ. ಜ್ಞಾನಯೋಗಿ ಸಿದ್ಧೇಶ್ವರ ಶ್ರೀಗಳೇ ಅವರಿಗೆ ಸರ್ಟಿಫಿಕೇಟ್ ನೀಡಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರಿಗೆ ಸವಾಲು ಹಾಕಿದರು.

- Advertisement -

ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರ ಸಾಧನೆ ಬಗ್ಗೆ ಸಿದ್ಧೇಶ್ವರ ಶ್ರೀಗಳು ಹೊಗಳಿದ್ದಾರೆ. ಅಲ್ಲದೆ, ಕೇಂದ್ರದ ಜಲಸಂಪನ್ಮೂಲ ಸಚಿವೆ ಉಮಾಭಾರತಿ ರಾಷ್ಟ್ರೀಯ ಜಲ ಸಪ್ತಾಹ ಕಾರ್ಯಕ್ರಮಕ್ಕೆ ಎಂ.ಬಿ.ಪಾಟೀಲರನ್ನು ಆಹ್ವಾನಿಸಿದ್ದು ಅವರು ಮಾಡಿದ ಸಾಧನೆಯೇ ಕಾರಣ. ಆದರೆ ಅನವಶ್ಯಕವಾಗಿ ಶಾಸಕ ನಡಹಳ್ಳಿ ಅವರು ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ, ಎಂ.ಬಿ.ಪಾಟೀಲರ ಬಗ್ಗೆ ಕೇವಲವಾಗಿ ಮಾತನಾಡಿದ್ದು ಸರಿಯಲ್ಲ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಮುದ್ದೇಬಿಹಾಳದಲ್ಲಿ ಜೆಡಿಎಸ್ ಟಿಕೆಟ್ ಕೇಳಿದ್ದ ಎ.ಎಸ್.ಪಾಟೀಲ ನಡಹಳ್ಳಿ ನಂತರ ತನ್ನ ಹೆಂಡತಿಗೆ ಟಿಕೆಟ್ ಸಿಗದಿದ್ದಾಗ, ಇದೀಗ ಬಿಜೆಪಿಗೆ ಸೇರಿದ್ದಾರೆ. ದೇವರಹಿಪ್ಪರಗಿ ಕ್ಷೇತ್ರದಲ್ಲಿ ರೈತರ ಸೊಸೈಟಿ ಸಾಲವನ್ನು ನಾನೇ ತುಂಬುತ್ತೇನೆ. ಬೃಹತ್ ಗಾಮೆರ್ಂಟ್ ಉದ್ದಿಮೆ ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗ ಕೊಡುತ್ತೇನೆಂದು ಜನರಿಗೆ ಮಂಕುಬೂದಿ ಎರಚಿ ಚುನಾಯಿತರಾದ ನಂತರ ಆ ಕ್ಷೇತ್ರದಿಂದ ಪಲಾಯನಗೈದಿದ್ದಾರೆ ಎಂದು ದೂರಿದರು.

ನಾನೊಬ್ಬ ಸಮಾಜ ಸೇವಕನೆಂದು ಹೇಳಿಕೊಂಡು ಕ್ಷೇತ್ರದ ಜನರಿಗೆ ಅನ್ಯಾಯ ಎಸಗಿರುವ ಶಾಸಕ ನಡಹಳ್ಳಿ ಎಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂಬುದು ಕೂಡ ಬಹಿರಂಗವಾಗಿ ಚರ್ಚೆಗೆ ಬರಲಿ. ಜತೆಗೆ ಕೇಂದ್ರ ಸಚಿವ, ಹಾಲಿ ಸಂಸದ ರಮೇಶ ಜಿಗಜಿಣಗಿ ಅವರನ್ನು ಕರೆ ತರಲಿ ಎಂದು ಸವಾಲು ಹಾಕಿದರು.

ಲಿಂಗಾಯತ ಧರ್ಮದ ಬಗ್ಗೆ ಅವಹೇಳನ ಸಲ್ಲ
12ನೇ ಶತಮಾನದಲ್ಲಿ ಬಸವಾದಿ ಶರಣರು ಸ್ಥಾಪಿಸಿದ ಲಿಂಗಾಯತ ಧರ್ಮದ ಬಗ್ಗೆ ಅದೇ ಧರ್ಮದಲ್ಲಿ ಹುಟ್ಟಿದ ಎ.ಎಸ್.ಪಾಟೀಲ ನಡಹಳ್ಳಿ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಲಿಂಗಾಯತ ಬಿಟ್ಟು ಬೇರೆ ಧರ್ಮದಲ್ಲಿ ಹುಟ್ಟಿದ್ದರೆ ದಾಖಲೆಗಳನ್ನು 24 ಗಂಟೆಗಳಲ್ಲಿ ಸಾಬೀತು ಪಡಿಸಲಿ ಎಂದು ಶಾಸಕ ನಡಹಳ್ಳಿ ವಿರುದ್ಧ ಬಬಲೇಶ್ವರ ಹರಿಹಾಯ್ದರು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...