ಗೋಳಗುಮ್ಮಟದಿಂದ ಜಾಗೃತಿ ಜಾಥಾಕ್ಕೆ ಚಾಲನೆ

ವಿಜಯಪುರ: ಉತ್ತರ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳ ಚುನಾವಣೆಗೆ ಏ. 23 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯಲ್ಲಿ ಮತ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.

ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಜಾಥಾಕ್ಕೆ ಹಸಿರು ನಿಶಾನೆ ತೋರಿದರು.

ನಗರದ ಮೆಟ್ರಿಕ್ ನಂತರದ ಬಾಲಕಿಯರು ಹಾಗೂ ವೃತ್ತಿಪರ ಬಾಲಕಿಯರ ವಸತಿ ನಿಲಯಗಳ ವಿದ್ಯಾರ್ಥಿನಿಯರು ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಮಹಾತ್ಮ ಬಸವೇಶ್ವರ ವೃತ್ತದವರೆಗೆ ಜಾಥಾ ನಡೆಯಿತು. ವಾರ್ತಾಧಿಕಾರಿ ಸುಲೆಮಾನ್ ನದ್ಾ, ಎನ್.ಎಸ್. ಭೂಸ್‌ಗುಂಡ್ ಸೇರಿ ವಸತಿ ನಿಲಯಗಳ ವಾರ್ಡನ್‌ಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *