ಇಂದು ಜಿಲ್ಲೆಗೆ ಸಚಿವ ದೇಶಪಾಂಡೆ ಭೇಟಿ

ವಿಜಯಪುರ: ಕಂದಾಯ ಮತ್ತು ಕೌಶಲಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಆರ್.ವಿ. ದೇಶಪಾಂಡೆ ಆ.23 ರಂದು ವಿಜಯಪುರ ಜಿಲ್ಲೆ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

23ರಂದು ಬೆಳಗ್ಗೆ ಬಾಗಲಕೋಟೆಯಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ವಿಜಯಪುರಕ್ಕೆ ಆಗಮಿಸಿ ಸಾರ್ವಜನಿಕರ ಭೇಟಿ ಹಾಗೂ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ವಿಜಯಪುರದಿಂದ ಯಾದಗಿರಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.