ದೇಸಿ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ

ವಿಜಯಪುರ: ಗ್ರಾಮೀಣ ಪರಂಪರೆ ಉತ್ತೇಜಿಸಲು ದೇಸಿ ಕ್ರೀಡೆಗಳನ್ನು ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಗ್ರಾಮೀಣ ಪೊಲೀಸ್ ಠಾಣೆ ಸಹಾಯಕ ಎಸ್‌ಐ ಎ.ಎಂ. ಮಹಾಂತಮಠ ಹೇಳಿದರು.

ತಾಲೂಕಿನ ಆಹೇರಿ ಗ್ರಾಮದಲ್ಲಿ ಕೊಡೇಕಲ್ಲ ಬಸವೇಶ್ವರ ಜಾತ್ರೆ ನಿಮಿತ್ತ ಸಿದ್ದರಾಯ ತೇಲಿ ಅವರ ತೋಟದಲ್ಲಿ ಹಮ್ಮಿಕೊಂಡಿದ್ದ ಕುಸ್ತಿ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಬಂಡೆಪ್ಪ ತೇಲಿ ಮಾತನಾಡಿ, ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿವೆ. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ ಎಂದರು.

ಆಹೇರಿ ಚಿಲ್ಲಾಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಪಂ ಮಾಜಿ ಸದಸ್ಯ ರಾಚು ವಾಲಿಕಾರ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ನಿರ್ದೇಶಕ ಸದಾಶಿವ ಢಗೆ, ಎಸ್.ಬಿ. ಕಾಂಬಳೆ, ಗ್ರಾಪಂ ಸದಸ್ಯ ಮಲ್ಲನಗೌಡ ಬಿರಾದಾರ, ಡಾ.ಮಲ್ಲು ವಾಲಿಕಾರ, ದೈಹಿಕ ಶಿಕ್ಷಣ ಶಿಕ್ಷಕ ಆತ್ಮಾನಂದ ಇಬ್ರಾಹಿಂಪುರ, ಬಾಬು ಮೆಟಗಾರ, ನರಸಿಂಗ್ ರಜಪೂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಚೇತನ ಪಟ್ಟಣಶೆಟ್ಟಿ ಸ್ವಾಗತಿಸಿದರು. ಆತ್ಮಾನಂದ ಶಿವಣಗಿ ವಂದಿಸಿದರು.

ಪಂದ್ಯಾವಳಿ ವಿಜೇತ ದ್ಯಾಬೇರಿಯ ಗೋಪಾಲ ಢಗೆ ಅವರಿಗೆ ‘ಬಸವ ಕೇಸರಿ’ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.