ಪ್ಯಾರಾಮೋಟರಿಂಗ್ ಮೂಲಕ ಮತದಾನ ಜಾಗೃತಿ

Latest News

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಶರದ್​ ಅರವಿಂದ್​ ಬೊಬ್ಡೆ ಪ್ರಮಾಣವಚನ: ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ

ನವದೆಹಲಿ: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ಶರದ್​ ಅರವಿಂದ್​ ಬೊಬ್ಡೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ...

ಉದ್ಯೋಗ ಕೊಡಿಸಲು ಸಹಾಯ ಮಾಡಲಿಲ್ಲ ಎಂದು ತನ್ವೀರ್​ ಸೇಠ್​ ಹತ್ಯೆಗೆ ಯತ್ನ: ಆರೋಪಿಯ ಗೊಂದಲದ ಹೇಳಿಕೆ

ಮೈಸೂರು: ಉದ್ಯೋಗ ಕೊಡಿಸಲು ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ಶಾಸಕ ತನ್ವೀರ್​ ಸೇಠ್​ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದಾಗಿ ಆರೋಪಿ ಫರಾನ್​ ಪಾಷಾ...

ಕನಕದಾಸ ಸರ್ಕಲ್​ ನಾಮಫಲಕ ತೆರವು ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಎರಡು ಸಮುದಾಯಗಳ ನಡುವೆ ಗಲಾಟೆ

ತುಮಕೂರು: ಕನಕದಾಸ ಸರ್ಕಲ್​ ಹೆಸರಿನ ನಾಮಫಲಕ ತೆರವು ವಿಚಾರವಾಗಿ ನಡೆದ ಗಲಾಟೆ ಹಿನ್ನೆಲೆಯಲ್ಲಿ ಎರಡು ಸಮುದಾಯದ ನಡುವೆ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಮತ್ತೊಮ್ಮೆ...

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್​ ವಲಯದಲ್ಲಿ ಶಂಕಾಸ್ಪದ ಸ್ಫೋಟ: 1 ಯೋಧ ಹುತಾತ್ಮ, ಇನ್ನಿಬ್ಬರಿಗೆ ಗಂಭೀರ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್​ ವಲಯದಲ್ಲಿ ಭಾನುವಾರ ಸಂಜೆ ಸಂಭವಿಸಿದ ಶಂಕಾಸ್ಪದ ಸ್ಫೋಟದಲ್ಲಿ ಭಾರತೀಯ ಸೇನಾಯಪಡೆಯ ಒಬ್ಬ ಯೋಧ ಹುತಾತ್ಮರಾಗಿದ್ದು, ಇನ್ನಿಬ್ಬರು...

ಆಸ್ಟ್ರೇಲಿಯಾದ ಮಹಿಳೆಯೊಬ್ಬರು ದಿನಕ್ಕೊಂದು ಮೀಸೆ ಧರಿಸುತ್ತಿದ್ದಾರೆ, ಇದಕ್ಕೆ ಕಾರಣ ಇಲ್ಲಿದೆ ನೋಡಿ

ನವದೆಹಲಿ: ನವೆಂಬರ್​ ಬಂತೆಂದರೆ ಪುರುಷರು ನೋ ಶೇವ್​ ನವೆಂಬರ್​ ಅಭಿಯಾನ ಆರಂಭಿಸುತ್ತಾರೆ. ಒಂದು ತಿಂಗಳು ಅವರು ಯಾವುದೇ ಕಾರಣಕ್ಕೂ ಗಡ್ಡ, ಮೀಸೆ ಬೋಳಿಸದೆ,...

ವಿಜಯಪುರ : ಜಿಲ್ಲೆಯ 110 ಗ್ರಾಪಂ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸೋಮವಾರ ಹಮ್ಮಿಕೊಂಡ ಪ್ಯಾರಾ ಮೋಟರಿಂಗ್ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಚಾಲನೆ ನೀಡಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪ್ಯಾರಾ ಮೋಟರಿಂಗ್‌ನಲ್ಲಿ ಕುಳಿತು ನಗರದ ವಿವಿಧೆಡೆ ಸಂಚರಿಸಿ ಮತದಾನ ಕುರಿತು ಅರಿವು ಮೂಡಿಸಿದರು. ‘ನಿಮ್ಮ ಮತ ನಿಮ್ಮ ಹಕ್ಕು ನೈತಿಕವಾಗಿ ನಿಮ್ಮ ಮತ ಚಲಾಯಿಸಿ’ ಎಂಬ ಬ್ಯಾನರ್‌ದೊಂದಿಗೆ ಜಿಲ್ಲೆಯ ವಿಜಯಪುರ, ಇಂಡಿ, ಸಿಂದಗಿ, ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ತಾಲೂಕುಗಳ 110ಕ್ಕೂ ಹೆಚ್ಚು ಗ್ರಾಪಂ ಗಳಲ್ಲಿ ಕರಪತ್ರ ವಿತರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.

ಸೋಮವಾರ ಆರಂಭಗೊಂಡ ಪ್ಯಾರಾ ಮೋಟರಿಂಗ್ ಮತದಾನ ಜಾಗೃತಿ ಕಾರ್ಯಕ್ರಮವು ಏ.12ರವರೆಗೆ ಜರುಗಲಿದೆ. ಏ. 9 ರಂದು ಇಂಡಿ, ಏ.10 ರಂದು ಸಿಂದಗಿ, ಏ. 11 ರಂದು ಬಸವನ ಬಾಗೇವಾಡಿ ಹಾಗೂ ಏ.12 ರಂದು ಮುದ್ದೇಬಿಹಾಳದಲ್ಲಿ ಪ್ರತಿ ದಿನ ಬೆಳಗ್ಗೆ 7 ರಿಂದ 10 ಗಂಟೆವರೆಗೆ ಪ್ಯಾರಾಮೋಟರಿಂಗ್ ಮೂಲಕ ಜಾಗೃತಿ ನಡೆಯಲಿದೆ ಎಂದು ಇದೇ ವೇಳೆ ಸಿಇಒ ಕಿಶೋರ ಸುರಳಕರ ಮಾಹಿತಿ ನೀಡಿದರು.

ಪ್ಯಾರಾ ಮೋಟರಿಂಗ್ ತಂಡಕ್ಕೆ ಈಗಾಗಲೇ ತಾಲೂಕಾವಾರು ಜಾಗೃತಿ ಮೂಡಿಸುವ ನಕಾಶೆಯೊಂದಿಗೆ ಮಾಹಿತಿ ನೀಡಲಾಗಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಕರಪತ್ರಗಳನ್ನು ವಿವಿಧ ಗ್ರಾಮಗಳಲ್ಲಿ ಈ ಪ್ಯಾರಾಮೋಟರಿಂಗ್ ಮೂಲಕ ವಿತರಣೆ ಮಾಡಲಾಗುತ್ತಿದೆ. ಅದರಂತೆ ಮತದಾನ ಜಾಗೃತಿಗಾಗಿ ‘ನಕ್ಕು-ನಕ್ಕು ಚಲಾಯಿಸಿ ನಿಮ್ಮ ಹಕ್ಕು’ ಹಾಸ್ಯ ಕಾರ್ಯಕ್ರಮ, ಮ್ಯಾರಾಥಾನ್, ಮಕ್ಕಳಿಂದ ಕಿರುನಾಟಕ, ಶಾಲಾ ಮಕ್ಕಳಿಂದ ಪತ್ರ ಚಳವಳಿ, ವಿವಿಧ ಜಾಥಾಗಳ ಮೂಲಕ ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಪ್ಯಾರಾ ಮೋಟರಿಂಗ್ ತಂಡದಲ್ಲಿ ಇಬ್ಬರೂ ಪೈಲಟ್‌ಗಳಾದ ಕುಮಾರ, ಸುನೀಲ, ಸಹಾಯಕರಾದ ಜಯಕುಮಾರ ಇನ್ನೋರ್ವ ಪೈಲಟ್ ಸಿದ್ಧಾರ್ಥ ಅವರನ್ನು ಒಳಗೊಂಡ ತಂಡವು ಜಿಲ್ಲೆಯಾದ್ಯಂತ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಪ್ರಸನ್ನ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಎಸ್.ಜಿ.ಲೋಣಿ, ತಾಪಂ ಇಒ ಅಡವಿಮಠ, ಡಯಟ್ ಉಪನ್ಯಾಸಕ ಕೊಣ್ಣೂರ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

- Advertisement -

Stay connected

278,564FansLike
571FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....