ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಅಂಕ ಬರದಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದ ನರ್ಸಿಂಗ್​ ವಿದ್ಯಾರ್ಥಿನಿ

Student Death
Published on

ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಿಲ್ಲೆ ಚಡಚಣ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ (21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ವಿಜಯಪುರದ ಬಿಎಲ್​ಡಿಇ ನರ್ಸಿಂಗ್ ಕಾಲೇಜ್​ನಲ್ಲಿ ದ್ವಿತೀಯ ವರ್ಷದ ನರ್ಸಿಂಗ್ ಓದುತ್ತಿದ್ದರು.

ಮೊದಲ ವರ್ಷದ ಅಂತಿಮ ಪರೀಕ್ಷೆ ಬರೆದು ಎರಡನೇ ವರ್ಷಕ್ಕೆ ದಾಖಲಾತಿ ಪಡೆದಿದ್ದಳು ಎನ್ನಲಾಗಿದೆ. ಇತ್ತೀಚಿಗೆ ಮೊದಲು ವರ್ಷದ ಅಂತಿಮ ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ, ಇದರಿಂದ ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೀರ್ತನಾ ಅವರ ತಂದೆ ಜಾಲೇಂದ್ರನಾಥ ಮಗಳ ಆತ್ಮಹತ್ಯೆ ಬಗ್ಗೆ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net