ವಿಜಯಪುರದಲ್ಲಿ ತಡರಾತ್ರಿ ಗುಡಿಸಲಿಗೆ ಆಕಸ್ಮಿಕ ಬೆಂಕಿ: ಮಲಗಿದ್ದಲ್ಲೇ ವೃದ್ಧ ದಂಪತಿ ಸಜೀವ ದಹನ

Photo of Vijayapura Old Couple
Published on

ವಿಜಯಪುರ: ಗುಡಿಸಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

ಕರೀಮಸಾಬ ಇಮಾಮಸಾಬ ಟಪಾಲ (82), ಸಾಜನಬಿ ಕರೀಮಸಾಬ ಟಪಾಲ ಮೃತಪಟ್ಟಿರುವ ದುರ್ದೈವಿಗಳು.

ಗುಡಿಸಲಿನಲ್ಲಿ ಮಲಗಿದ ವೇಳೆ ಚಿಮಣಿಯಿಂದ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಗುಡಿಸಲು ಸುಟ್ಟು ಭಸ್ಮವಾಗಿದೆ. ಇದರಿಂದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಲಿಂಡರ್ ಬ್ಲಾಸ್ಟ್ ಗುಡಿಸಲು ಬೆಂಕಿಗಾಹುತಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಹೊರಭಾಗದ ಸಾಯಿನಗರದಲ್ಲಿ ಸಿಲಿಂಡರ್​ ಸ್ಫೋಟಗೊಂಡು ಆಂಧ್ರ ಮೂಲದ ಟಿ.ಮಧು ಅವರಿಗೆ ಸೇರಿದ್ದ ಗುಡಿಸಲು ಬೆಂಕಿಗಾಹುತಿಯಾಗಿದೆ. ಸ್ನಾನ ಮಾಡಲು ನೀರು ಕಾಯಿಸಲು ಇಟ್ಟಾಗ ಸಿಲಿಂಡರ್ ಬ್ಲಾಸ್ಟ್ ಆಗಿದೆ. ನೀರು ಕಾಯಿಸಲು ಸಿಲಿಂಡರ್​ ಇಟ್ಟು ಮಧು ಹೊರಗಡೆ ಬಂದಿದ್ದ. ಹೀಗಾಗಿ ಪ್ರಾಣಾಪಯದಿಂದ ಪಾರಾಗಿದ್ದಾರೆ. ಗುಡಿಸಲು ಪಕ್ಕದಲ್ಲಿರುವ ಓರ್ವ ವ್ಯಕ್ತಿಗೆ ಗಾಯವಾಗಿದೆ. ಲಕ್ಷಾಂತರ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ. ಎರಡು ಲಕ್ಷ ರೂ. ನಗದು ಸುಟ್ಟು ಭಸ್ಮವಾಗಿದೆ.

ಮಗಳ ಆಪರೇಷನ್ ಮಾಡಿಸಲು ಮಧು ಹಣ ತಂದಿಟ್ಟಿದ್ದ. ಇಂದು ಬೆಳಗ್ಗೆ ಮಗಳ ಆಪರೇಷನ್ ಮಾಡಿಸಲು ಕೊಪ್ಪಳದ ಗಂಗಾವತಿಗೆ ತೆರಳಬೇಕಿತ್ತು. ಆದರೆ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಬೆಂಕಿಗಾಹುತಿಯಾಗಿ ಅಪಾರ ಹಾನಿಯಾಗಿದೆ. ಘಟನಾಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕೆಂಭಾವಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net