More

    ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ

    ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಕೂಡಲೇ ರಾಜ್ಯ ಸರ್ಕಾರ 2ಎ ಮೀಸಲಾತಿ ಕಲ್ಪಿಸಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ಸರ್ಕಾರವನ್ನು ಒತ್ತಾಯಿಸಿದರು.ಬ.ಬಾಗೇವಾಡಿ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರು ಕೂಡ ಯಾವುದೇ ರೀತಿಯಿಂದ ಪ್ರಯೋಜನವಾಗುತ್ತಿಲ್ಲ ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧ ಉಗ್ರಸ್ವರೂಪದ ಹೋರಾಟವನ್ನು ರೂಪಿಸಲಾಗುವುದು ಎಂದು ಹೇಳಿದರು.

    ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷರಾದ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳಾದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಸುಮಾರು 780 ಕಿಲೋಮೀಟರ್ ಪಾದಯಾತ್ರೆ ಮಾಡಿ ಬೆಂಗಳೂರಿನಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಸ್ವತಂತ್ರ ಉದ್ಯಾನವನದಲ್ಲಿ 1ತಿಂಗಳ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡು ಇದೀಗ ಕೂಡಲಸಂಗಮದ ಅವರಣದಲ್ಲಿ ಶ್ರೀಗಳು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ಇಲ್ಲಿವರೆಗೂ ಸರ್ಕಾರದ ಯಾವ ಒಬ್ಬ ಜನಪ್ರತಿನಿಧಿ ಕೂಡ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸದೇ ಇರುವುದು ವಿಷಾದನೀಯ ಎಂದರು.

    ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ, ವಿಶ್ರಾಂತ ಪ್ರಾಚಾರ್ಯ ಸುರೇಶ ಪಾಟೀಲ ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಗೊಳಸಂಗಿ, ಸಂಜು ಬಿರಾದಾರ, ಬಸಣ್ಣ ಕಲ್ಲೂರ, ಶ್ರೀಕಾಂತ ಕೊಟ್ರಶೆಟ್ಟಿ, ಎಂ.ಜಿ. ಆದಿಗೊಂಡ, ಸುನಿಲ ಚಿಕ್ಕೊಂಡ, ಮುದುಕಪ್ಪ ಬಾರಿಗಿಡದ, ಶಾಂತಪ್ಪ ಪಡಶೆಟ್ಟಿ, ಪರಶುರಾಮ ಅಡುಗಿಮನಿ, ವಿಶ್ವನಾಥ ನಿಡಗುಂದಿ, ಶಂಕರಗೌಡ ಚಿಕ್ಕೊಂಡ, ಬದ್ರು ಮಣ್ಣೂರ, ಪ್ರಶಾಂತ ಮುಂಜಾನೆ, ಮಲ್ಲು ಪಟ್ಟಣಶೆಟ್ಟಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts