More

    ಕೈ ಕಾರ್ಯಕರ್ತರ ಸೈಕಲ್ ಸವಾರಿ

    ವಿಜಯಪುರ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟಿಸಿದರು.

    ನಗರದ ಡಾ.ಬಿ.ಆರ್. ಅಂಬೇಡ್ಕರ್, ಮಹಾತ್ಮ ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ವೃತ್ತದ ಮಾರ್ಗವಾಗಿ ಸಿದ್ಧೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬೆಲೆ ಏರಿಕೆ ನೀತಿ ಕೈಬಿಡುವಂತೆ ಆಗ್ರಹಿಸಿದರು.

    ನೇತೃತ್ವ ವಹಿಸಿದ್ದ ರಾಜ್ಯಸಭಾ ಸದಸ್ಯ ಡಾ.ಸೈಯ್ಯದ್ ನಾಸೀರ್ ಹುಸೇನ್ ಮಾತನಾಡಿ, ಕೇಂದ್ರ ಸರ್ಕಾರ ತಕ್ಷಣ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹಾಗೂ ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು. ಜನವಿರೋಧಿ ನೀತಿ ಅನುಸರಿಸುವುದನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿದರು.

    ವಿಧಾನ ಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪೂರ ಮಾತನಾಡಿ, ಧರ್ಮ-ಧರ್ಮಗಳ ಮಧ್ಯೆ ದ್ವೇಷದ ಬೀಜ ಬಿತ್ತಿ, ಅಚ್ಛೆ ದಿನ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನವಿರೋಧಿಯಾಗಿದ್ದು, ಜನರ ರಕ್ತ ಹೀರುವ ಕೆಲಸದಲ್ಲಿ ನಿರತವಾಗಿದೆ. ಇವರು ಅಧಿಕಾರಕ್ಕೆ ಬಂದಾಗಿನಿಂದ ಜನ ವಿರೋಧಿ ಆರ್ಥಿಕ ನೀತಿಗಳನ್ನು ಜಾರಿಗೆ ತಂದು ದೇಶ ಅಧೋಗತಿಯಲ್ಲಿ ಸಾಗಲು ಕಾರಣಿಭೂತರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ದೇಶದಲ್ಲಿ ಮಾತ್ರ ದಿನೇ ದಿನೆ ಬೆಲೆ ಏರಿಕೆಯಾಗುತ್ತಲೇ ಇದೆ. ಕೇಂದ್ರ ಸರ್ಕಾರ ಸುಂಕ ಹೆಚ್ಚಿಸುವ ಮೂಲಕ ಇಂಧನ ದರ ಹೆಚ್ಚುವಂತೆ ಮಾಡಿದೆ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬಡವರು, ಕಾರ್ಮಿಕರು, ರೈತರು ತುಂಬಾ ಸಂಕಷ್ಟದಲ್ಲಿದ್ದು, ಈ ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಮಾಜಿ ಶಾಸಕ ವಿಠಲ ಕಟಕಧೋಂಡ, ಮುಖಂಡರಾದ ಸಂಗಮೇಶ ಬಬಲೇಶ್ವರ, ಅಬ್ದುಲ್ ಹಮೀದ್ ಮುಶ್ರೀಫ್, ರಾಜಶೇಖರ ಮೆಣಸಿನಕಾಯಿ, ಹಾಸಿಂಪೀರ ವಾಲೀಕಾರ, ರಾಜು ಗಣದಾಳ, ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಶ್ರೀದೇವಿ ಉತ್ಲಾಸರ, ವಿದ್ಯಾರಾಣಿ ತುಂಗಳ, ಶ್ರೀಕಾಂತ ಛಾಯಾಗೋಳ, ಸಾಹೇಬಗೌಡ ಬಿರಾದಾರ, ವಸಂತ ಹೊನಮೊಡೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts