More

    ಪೌಷ್ಟಿಕ ಆಹಾರ ಪ್ರತಿಯೊಬ್ಬರ ಆದ್ಯತೆಯಾಗಲಿ

    ವಿಜಯಪುರ: ಗರ್ಭಿಣಿಯರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸುವ ನಿಟ್ಟಿನಲ್ಲಿ ಸರ್ಕಾರ ಪೋಷಣ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಫಲಾನುಭವಿಗಳು ಇದರ ಸದುಯೋಗ ಪಡೆದುಕೊಳ್ಳಬೇಕೆಂದು ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಹೇಳಿದರು.
    ನಗರದ ಮನಗೂಳಿ ರಸ್ತೆಯಲ್ಲಿರುವ ಬಾಲಭವನದ ಸ್ತ್ರೀಶಕ್ತಿ ಸಭಾಭವನದಲ್ಲಿ ಜಿಪಂ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನದ ಮಾಸಾಚರಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ವಿತರಿಸಿ ಅವರು ಮಾತನಾಡಿದರು. ಅಪೌಷ್ಟಿಕತೆ ಇಂದು ಎಲ್ಲರನ್ನೂ ಕಾಡುತ್ತಿದೆ. ಅದರಲ್ಲೂ ತಾಯಿ ಮತ್ತು ಮಕ್ಕಳ ಆರೋಗ್ಯದ ವಿಷಯದಲ್ಲಿ ಪೌಷ್ಟಿಕತೆ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಸರ್ಕಾರ ಪೋಷಣ್ ಅಭಿಯಾನ ಜಾರಿಗೊಳಿಸಿದೆ. ಅಲ್ಲದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ವಿತರಿಸುವ ಮೂಲಕ ಸೇವೆಗೆ ಹೆಚ್ಚಿನ ಸಹಕಾರ ನೀಡಿದೆ ಎಂದರು.

    ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ವಿ.ಬಿ. ಹೊಸಮನಿ ಉದ್ಘಾಟಿಸಿದರು. ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ತಾಪಂ ಇಒ ಬಿ.ಎಸ್. ರಾಠೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವಾಣ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೀತಾ ಗುತ್ತರಗಿಮಠ, ಸುರೇಖಾ ಎಸ್.ತೇಲಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts