More

    ಮಹಿಳೆ ಅಬಲೆಯಲ್ಲ ಸಬಲೆ: ಪ್ರತಿಭಾ ಪಾಟೀಲ

    ವಿಜಯಪುರ: ಮಹಿಳೆ ಪ್ರತಿ ಸ್ಥರದಲ್ಲೂ ಮುನ್ನಡೆ ಸಾಧಿಸುವ ಮೂಲಕ ತಾನು ಅಬಲೆಯಲ್ಲ, ಸಬಲೆ ಎಂಬುದನ್ನು ಜಗತ್ತಿಗೆ ತೋರಿಸಿದ್ದಾಳೆ ಎಂದು ಜಿಪಂ ಸದಸ್ಯೆ ಹಾಗೂ ಕೃಷಿ ಮತ್ತು ಕೈಗಾರಿಕೆ ಸಮಿತಿ ಅಧ್ಯಕ್ಷ ಪ್ರತಿಭಾ ಪಾಟೀಲ ಹೇಳಿದರು.

    ನಗರದ ಹೊರವಲಯದಲಯದ ಕೃಷಿ ವಿಜ್ಞಾನ ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಹಿಂದೆ ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ ಎಂದು ಭಾವಿಸಲಾಗುತ್ತಿತ್ತು. ಅದಕ್ಕಾಗಿ ಹೆಣ್ಣು ಬ್ರೂಣ ಹತ್ಯೆ, ಲಿಂಗ ತಾರತಮ್ಯ ನಡೆಯುತ್ತಿದ್ದವು. ಆದರೆ, ಬದಲಾಗುತ್ತಿರುವ ಸನ್ನಿವೇಶದಲ್ಲಿ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಡಿದರ ಫಲವಾಗಿ ಸಂವಿಧಾನ ಅವರಿಗೆ ವಿಶೇಷ ಮೀಸಲಾತಿ ನೀಡಿದ್ದರಿಂದ ಇಂದು ಮಹಿಳೆ ಶೈಕ್ಷಣಿಕ, ಆರ್ಥಿಕ ಹಾಗೂ ಮಾನಸಿಕವಾಗಿ ಬಲಾಢ್ಯಳಾಗಿದ್ದಾಳೆ ಎಂದು ಹೇಳಿದರು.

    ಜಿಪಂ ಸದಸ್ಯೆ ಕವಿತಾ ರಾಠೋಡ ಮಾತನಾಡಿ, ಇಂದು ದೇಶದ ಉನ್ನತ ಹುದ್ದೆಯಾದ ರಾಷ್ಠ್ರಪತಿ, ಪ್ರಧಾನಮಂತ್ರಿ, ರಕ್ಷಣಾ ಮಂತ್ರಿ ಹಾಗೂ ಹಣಕಾಸಿನ ಮಂತ್ರಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕೆ ಪುರುಷರು ಕೂಡ ಪ್ರೋತ್ಸಾಹಿಸುತ್ತಿದ್ದಾರೆ ಎಂದರು.

    ಸಹವಿಸ್ತರಣಾ ನಿರ್ದೇಶಕ ಡಾ.ಆರ್.ಬಿ. ಬೆಳ್ಳಿ ಅಧ್ಯಕ್ಷತೆ ವಹಿಸಿ, ಮಹಿಳೆಯರು ಎಲ್ಲ ರಂಗಗಳಂತೆ ಕೃಷಿ ರಂಗದಲ್ಲೂ ಅಪಾರ ಸಾಧನೆ ಮಾಡಿದ್ದಾರೆ. ಅದಕ್ಕಾಗಿಎ ಲ್ಲ ಕೃಷಿ ವಿವಿಗಳಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ಹಾಗೂ ತಾಲೂಕು ಮಟ್ಟದಲ್ಲಿ ಯುವ ಕೃಷಿ ಮಹಿಳಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

    ಕಳೆದ ಸಾಲಿನ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ವಿಜೇತೆ ತಾಜಪುರ ಗ್ರಾಮದ ಹಸೀನಾ ಬೇಗ್‌ಂ ಮೊಕಾಶಿ, ಯುವ ಕೃಷಿ ಮಹಿಳೆ ಪ್ರಶಸ್ತಿ ವಿಜೇತರಾದ ಭಾರತಿ ವಿಜಯಪುರ ಹಾಗೂ ಬಸವನಬಾಗೇವಾಡಿ ತಾಲೂಕಿನ ಯುವ ಕೃಷಿ ಮಹಿಳೆ ಲಕ್ಷ್ಮಿ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಕೃಷಿ ಅಧಿಕಾರಿ ಬಸವರಾಜ ಬಿರಾದಾರ ವ್ಯಕ್ತಿತ್ವ ವಿಕಸನದ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶ್ರೀದೇವಿ ಪ್ರಜಾರಿ, ಅನೀತಾ ಬಿರಾದಾರ, ಕೃಷಿ ವಿಜ್ಞಾನ ಕೇಂದ್ರದ ಡಾ.ಬಿ.ಸಿ.ಕೊಲ್ಹಾರ, ಶ್ರೀಶೈಲ ರಾಠೋಡ ಸೇರಿದಂತೆ ಜಿಲ್ಲೆಯಿಂದ 80 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

    ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎಸ್.ಎ. ಬಿರಾದಾರ ಸ್ವಾಗತಿಸಿದರು. ಡಾ.ಸಂಗೀತಾ ಜಾಧವ ನಿರೂಪಿಸಿದರು.ಡಾ.ಶಿವಲಿಂಗಪ್ಪ ಹೊಟಕರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts