More

    ಮತ್ಸ್ಯಸಂಪದ ಯೋಜನೆ ಸದುಪಯೋಗವಾಗಲಿ

    ವಿಜಯಪುರ: ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮೀನು ಕೃಷಿಕರಿಗಾಗಿ ನೀಡಿದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದರು.

    ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ 2021-22ನೇ ಸಾಲಿನ ವಾರ್ಷಿಕ ಕ್ರಿಯಾಯೋಜನೆ ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಮೀನು ಉತ್ಪಾದನೆಯಲ್ಲಿ ಗಣನೀಯವಾಗಿ ಏರಿಕೆ ಕಂಡು ಬರಲಿದೆ ಎಂದರು.

    ಈ ಯೋಜನೆ ಇನ್ನೂ 3 ವರ್ಷ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೀನು ಕೃಷಿಕರು, ಮೀನುಗಾರರು, ಮತ್ಸೊೃೀದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.

    ಮೀನುಗಾರಿಕೆ ಸಹಾಯವಾಣಿ (8277200300) ಹಾಗೂ ಬಯೋಪ್ರೋಕ್ ಮೀನು ಕೃಷಿಯಲ್ಲಿ ಆಗಿಂದಾಗ್ಗೆ ಕೇಳುವ ಪ್ರಶ್ನೆಗಳು ಮತ್ತು ಉತ್ತರ ಎಂಬ ಕಿರು ಹೊತ್ತಿಗೆ ಬಿಡುಗಡೆಗೊಳಿಸಲಾಯಿತು.

    ಜಂಟಿ ಕೃಷಿ ನಿರ್ದೇಶಕ ಡಾ.ರಾಜಶೇಖರ ವಿಲಿಯಮ್ಸ್, ಮೀನುಗಾರಿಕೆ ಉಪನಿರ್ದೆಶಕ ಶ್ರೀಶೈಲ ಗಂಗನಹಳ್ಳಿ, ಭೂತನಾಳ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ.ಎಸ್.ವಿಜಯಕುಮಾರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts