ದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಅಗತ್ಯ

ವಿಜಯಪುರ: ಪ್ರಧಾನಿ ಮೋದಿ ದೇಶವನ್ನೇ ಕುಟುಂಬವೆಂದು ತಿಳಿದ ಪ್ರಧಾನ ಸೇವಕರಾಗಿದ್ದು, ತಮ್ಮ ದೂರದೃಷ್ಟಿಯಿಂದ ಭಾರತವನ್ನು ಪರಿವರ್ತನೆ ಹಾದಿಯಲ್ಲಿ ಮುನ್ನಡೆಸಿದ್ದಾರೆ ಎಂದು ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.

ನಗರದ ನೂತನ ಚಾಣಕ್ಯ ತರಬೇತಿ ಕೇಂದ್ರದಲ್ಲಿ ಮತಯಾಚಿಸಿ ಅವರು ಮಾತನಾಡಿದರು. ಬಿಜೆಪಿ ನೇತೃತ್ವದ ಸರ್ಕಾರ 5 ವರ್ಷಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಮುದ್ರಾ ಯೋಜನೆಯಡಿ 15.55 ಕೋಟಿ ಜನರಿಗೆ 7 ಲಕ್ಷ ಕೋಟಿ ರೂ.ಸಾಲ ಸೌಲಭ್ಯ ನೀಡಲಾಗಿದೆ. ಮೇಕ್ ಇನ್ ಇಂಡಿಯಾ ಯೋಜನೆಯಿಂದ ಸಾವಿರಾರು ಹೊಸ ಸಂಸ್ಥೆಗಳಿಂದ ಉತ್ಪಾದನೆ ಆರಂಭಿಸಿ ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ. ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಬಿಜೆಪಿ ಅಭ್ಯರ್ಥಿಯಾದ ನನಗೆ ಮತ ನೀಡಿ ಮೋದಿಯವರ ಕೈಬಲಪಡಿಸಬೇಕೆಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ, ಪ್ರಧಾನಿ ಮೋದಿಯವರು ದೇಶದ ಜನರಿಗೆ ನೂರಾರು ಯೋಜನೆಗಳನ್ನು ನೀಡಿದ್ದಾರೆ. ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿ ನೇತೃತ್ವದ ಸರ್ಕಾರದ ಅವಶ್ಯವಿದೆ. ಆ ನಿಟ್ಟಿನಲ್ಲಿ ತಾವೆಲ್ಲ ಬಿಜೆಪಿಯನ್ನು ಬೆಂಬಲಿಸಬೇಕೆಂದು ಹೇಳಿದರು.

ಮುಖಂಡ ವಿಜುಗೌಡ ಪಾಟೀಲ ಮಾತನಾಡಿ, ಕೇಂದ್ರ ಸಚಿವ ರಮೇಶ ಜಿಗಜಿಣಗಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. 5 ವರ್ಷದಲ್ಲಿ ಪ್ರಧಾನಿ ಮೋದಿ ದೇಶವನ್ನು ಉನ್ನತ ಸ್ಥಾನಕ್ಕೆ ಏರಿಸಿದ್ದಾರೆ. ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಜಿಗಜಿಣಗಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಸೋಮನಗೌಡ ಯರನಾಳ, ನೂತನ ಚಾಣಕ್ಯ ಕರಿಯರ್ ಸಂಸ್ಥಾಪಕ ಬಿ.ಡಿ. ಪಾಟೀಲ, ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಆನಂದ ಧುಮಾಳೆ, ಅಲ್ತಾಫ್ ಇಟಗಿ, ವಿಜಯ ಜೋಶಿ, ಸಂಗಮೇಶ ಉಕ್ಕಲಿ, ಶಂಕರ ಚಿಕಲಗಾರ ಸೇರಿ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *