More

    19 ರಿಂದ ಪಲ್ಸ್ ಪೊಲಿಯೋ ರಾಷ್ಟ್ರೀಯ ಕಾರ್ಯಕ್ರಮ

    ವಿಜಯಪುರ: ಜ.19 ರಿಂದ 22 ರವರೆಗೆ ಪಲ್ಸ್ ಪೊಲಿಯೋ ರಾಷ್ಟ್ರೀಯ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಜಿಲ್ಲೆಯ 5 ವರ್ಷದೊಳಗಿನ ಪ್ರತಿ ಮಗುವಿಗೆ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
    ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಪಲ್ಸ್ ಪೊಲಿಯೋ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಟಾನಗೊಳಿಸಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಮಗು ಲಸಿಕೆ ಹಾಕಿಸುವ ಪ್ರಕ್ರಿಯೆಯಿಂದ ಹೊರಗುಳಿಯಬಾರದು ಎಂದರು.
    ವಿಶ್ವ ಆರೋಗ್ಯ ಸಂಸ್ಥೆಯ ಸರ್ವೆಲನ್ಸ್ ಅಧಿಕಾರಿ ಡಾ.ಮುಕುಂದ ಗಲಗಲಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಒಂದೇ ಸುತ್ತಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. 4 ದಿನಗಳ ಕಾಲ 5 ವರ್ಷದೊಳಗಿನ ಪ್ರತಿ ಮಗುವಿಗೆ ಲಸಿಕೆ ಹಾಕಲಾಗುತ್ತಿದೆ. ಮೊದಲ ದಿನ ಬೂತ್ ಮಟ್ಟದಲ್ಲಿ, ನಂತರ 2, 3 ಹಾಗೂ 4 ನೇ ದಿನಗಳಂದು ಮನೆ ಮನೆಗೆ ಭೇಟಿ ನೀಡಿ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಲ್ಲಿನ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದರು. ಆರೋಗ್ಯ ಇಲಾಖೆಯ ವಿವಿಧ ಸಿಬ್ಬಂದಿ ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts