17.8 C
Bengaluru
Wednesday, January 22, 2020

ಅನುದಾನ ರಹಿತ ಶಾಲೆಗಳಲ್ಲಿ ಬಂದ್ ಆಚರಣೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ವಿಜಯಪುರ: ಅನುದಾನ ರಹಿತ ಶಾಲೆ ಶಿಕ್ಷಕರ ಕಾಲ್ಪನಿಕ ವೇತನ ಏರಿಕೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಒಕ್ಕೂಟದ ಕರೆ ಮೇರೆಗೆ ಶಿಕ್ಷಣ ಸಂಸ್ಥೆಗಳ ನೂರಾರು ಸಿಬ್ಬಂದಿ ಮಂಗಳವಾರ ಬೃಹತ್ ರ‌್ಯಾಲಿ ನಡೆಸಿದರು.
ಶಾಲೆ- ಕಾಲೇಜ್‌ಗಳನ್ನು ಬಂದ್ ಮಾಡಿ ಹೋರಾಟಕ್ಕಿಳಿದ ಶಿಕ್ಷಣ ಸಂಸ್ಥೆ ಸಿಬ್ಬಂದಿ ಸಿದ್ಧೇಶ್ವರ ದೇವಸ್ಥಾನದಿಂದ ನಗರದ ಪ್ರಮುಖ ಮಾರ್ಗಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಗೆ ತೆರಳಿ ಮನವಿ ಅರ್ಪಿಸಿದರು.
ನೇತೃತ್ವ ವಹಿಸಿದ್ದ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟದ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ಅನುದಾನ ರಹಿತ ಶಾಲಾ ಶಿಕ್ಷಕರ ಕಾಲ್ಪನಿಕ ವೇತನ ಏರಿಕೆ ಮಾಡಬೇಕು. ಆರ್‌ಟಿಇ ಪದ್ಧತಿಯನ್ನು ಈ ಹಿಂದೆ ಇದ್ದಂತೆ ಮುಂದುವರೆಸುವುದು, ಖಾಸಗಿ ಹಾಗೂ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಮಕ್ಕಳ ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸಬಾರದು ಎಂದು ಒತ್ತಾಯಿಸಿದರು.
ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಆರ್‌ಟಿಇಯಡಿಯಲ್ಲಿ ಯಾವುದೇ ಮಾರ್ಪಾಡು ಮಾಡಬಾರದು, ಕೆಲವೇ ಕೆಲವು ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ಸರ್ಕಾರ ಯಾವುದೇ ಕಾರಣಕ್ಕೂ ಈ ಯೋಜನೆಯಡಿಯಲ್ಲಿ ನಿರ್ಬಂಧನೆ ವಿಧಿಸಬಾರದು ಎಂದು ಒತ್ತಾಯಿಸಿದರು.
1995ರ ವರೆಗಿನ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಿದ ಸರ್ಕಾರ ನಂತರ ಆರಂಭಗೊಂಡಿದ್ದ ಸಂಸ್ಥೆಗಳಿಗೆ ಅನುದಾನ ನೀಡದೆ ಕಡೆಗಣಿಸಿದೆ. ಸರ್ಕಾರದ ಈ ತಾರತಮ್ಯ ನೀತಿಯಿಂದ ಅನುದಾನ ರಹಿತ ಶಾಲೆಯ ಸಾವಿರಾರು ಶಿಕ್ಷಕರ ಬದುಕು ಅತಂತ್ರವಾಗಿದೆ ಎಂದು ದೂರಿದರು.
ಶಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸುಮಾರು ವರ್ಷಗಳಿಂದ ಸಾವಿರಾರು ಜನ ಶಿಕ್ಷಕರು ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಲಿಂದ ಇಲಿಯವರೆಗೆ ಅಧಿಕಾರಕ್ಕೆ ಬಂದಿರುವ ಸರ್ಕಾರಗಳು ಈ ಬಗ್ಗೆ ಭರವಸೆ ನೀಡಿ ಕಾಲಹರಣ ಮಾಡಿವೆ. ಸರ್ಕಾರಗಳ ನಿರ್ಲಕ್ಷದಿಂದ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರು ಬದುಕು ಕಟ್ಟಿಕೊಳ್ಳಲಾಗದೆ ಅನೇಕ ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದರು.
ಕಾರ್ಯಾಧ್ಯಕ್ಷ ಸಂಗನಗೌಡ ಯಂಕಂಚಿ, ಜಿಲ್ಲಾ ಉಪಾಧ್ಯಕ್ಷ ಎಂ.ಆರ್. ತುಪ್ಪದ, ಮಲ್ಲೇಶಿ ಪವಾರ, ಲಕ್ಷ್ಮಿಕಾಂತ ಮಾನೆ ಮುಂತಾದವರಿದ್ದರು. ಜಿಲ್ಲೆಯ 1010 ಅನುದಾನರಹಿತ ಶಾಲೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದವು. ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿವಿಧ ಬೇಡಿಕೆಗಳು

ಖಾಸಗಿ ಶಾಲೆಗಳ ನವೀಕರಣ ಪದ್ಧತಿ ಸರಳೀಕರಣಗೊಳಿಸುವುದು, ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೂ, ಖಾಸಗಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೂ ತೋರುತ್ತಿರುವ ತಾರತಮ್ಯವನ್ನು ಸರಿ ಪಡಿಸುವುದು, ಖಾಸಗಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೂ ಬಿಸಿ ಊಟ, ಹಾಲು, ಸಮವಸ, ಪಠ್ಯ ಪುಸ್ತಕ, ಸೈಕಲ್ ನೀಡಬೇಕು. 1995ರ ನಂತರ ಪ್ರಾರಂಭವಾದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ಖಾಸಗಿ ಶಾಲೆಗಳಿಗೆ ಜನಪ್ರತಿಧಿನಿಗಳು ಅನುದಾನ ಒದಗಿಸುವ ನಿಟ್ಟಿನಲ್ಲಿ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸುವುದು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...