ಭಯಮುಕ್ತ ಸಮಾಜ ನಿರ್ಮಾಣವೇ ಪ್ರಜಾಪ್ರಭುತ್ವದ ಆಶಯ

ವಿಜಯಪುರ: ಭಾರತದ ಸಂವಿಧಾನವು ಜಗತ್ತಿನ ಎಲ್ಲ ಸಂವಿಧಾನಗಳಲ್ಲಿ ವಿಶಿಷ್ಟವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಂತಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಸಚಿವೆ ಡಾ.ಆರ್.ಸುನಂದಮ್ಮ ಹೇಳಿದರು.
ಇಲ್ಲಿನ ಸರ್ಕಾರಿ ನೌಕರರ ಸಭಾಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಆಹೇರಿಯ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಂಸ್ಕೃತಿ ವೇದಿಕೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ವ್ಯವಸ್ಥೆ ಮತ್ತು ಮಾನವ ಹಕ್ಕಗಳ’ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಗೊಳಿಸಲು ಆರ್ಥಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ, ಅಧ್ಯಾತ್ಮಿಕ ಹಾಗೂ ಶೈಕ್ಷಣಿಕ ರಂಗಗಳ ಮೂಲಕ ನಮ್ಮ ಹಿರಿಯರು ಹೋರಾಟ ಮಾಡಿದ್ದಾರೆ. ಆದ್ದರಿಂದ ನಾವೆಲ್ಲ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕಗಳನ್ನು ಗೌರವಿಸಬೇಕು ಎಂದು ಹೇಳಿದರು.
ಆಲ್-ಅಮೀನ್ ಮೆಡಿಕಲ್ ಕಾಲೇಜಿನ ನಿವೃತ್ತ ಡೀನ್ ರಿಯಾಜ್ ಫಾರುಖಿ, ಅಂಜುಮನ್ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಎಸ್. ನಾಗಠಾಣ, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಅಧಿಕಾರಿ ಬಸವರಾಜ ಬಿರಾದಾರ, ಮೋನೇಶ್ವರ ಮೇಟಿ, ಅಪ್ಪಾಸಾಬ ಯರನಾಳ, ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಬಸವರಾಜ ಗಂಗನಳ್ಳಿ ಮಾತನಾಡಿದರು.
ನೌಕರರ ಸಂಘದ ಅಧ್ಯಕ್ಷ ಸುರೇಶ ಶೇಡಶ್ಯಾಳ ಅಧ್ಯಕ್ಷತೆ ವಹಿಸಿದ್ದರು. ಭಾರತ ಸೇವಾದಳ ಜಿಲ್ಲಾಧ್ಯಕ್ಷ ಎಸ್.ಪಿ. ಬಿರಾದಾರ, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಭೀಮಶಿ ಕಲಾದಗಿ, ವೈಜನಾಥ ಕರ್ಪೂರಮಠ, ಪ್ರಭುಗೌಡ ಪಾಟೀಲ, ಎಲ್.ಜಿ. ಕುಂಬಾರ, ಪಿ.ಬಿ. ಚಲವಯ್ಯ, ಭಾಗ್ಯಾ ತೆಗ್ಗಳ್ಳಿ, ಶಾರದಾ ತೆಗ್ಗಳ್ಳಿ, ಸಂಗೀತಾ ಚವಾಣ್, ಭರತೇಶ ಕಲಗೊಂಡ, ಶೇಖರ ಹೂಗಾರ, ಬಿ.ಎನ್. ಕಾಳಿ, ಜಿ.ಎಸ್. ಪಾಟೀಲ, ಬಿ.ಐ. ಬಿರಾದಾರ ಮತ್ತಿತರರು ಉಪಸ್ಥಿತರಿದ್ದರು.
ಬಸವ ಸಾಹಿತ್ಯ ವೇದಿಕೆ ಬಂಡೆಪ್ಪ ತೇಲಿ ಸ್ವಾಗತಿಸಿದರು. ಪ್ರೊ. ಶರಣಗೌಡ ಪಾಟೀಲ ನಿರೂಪಿಸಿದರು. ದಾನೇಶ ಅವಟಿ ವಂದಿಸಿದರು.

Leave a Reply

Your email address will not be published. Required fields are marked *