More

    ಶಿಕ್ಷಕರ, ಸಿಬ್ಬಂದಿ ಸಹಕಾರ ಅವಶ್ಯ

    ವಿಜಯಪುರ: ಒಂದು ಶಿಕ್ಷಣ ಸಂಸ್ಥೆ ಉತ್ತಮವಾಗಿ ಬೆಳೆಯಬೇಕಾದರೆ ಶಿಕ್ಷಕರು, ಅಲ್ಲಿರುವ ಸಿಬ್ಬಂದಿ ಸಹಕಾರ ಇದ್ದರೆ ಮಾತ್ರ ಸಾಧ್ಯ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
    ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 18ನೇ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಶಿಕ್ಷಣ ಸಂಸ್ಥೆಗಳು ಮುಂದಿನ ದಿನಮಾನಗಳಲ್ಲಿ ಹೆಮ್ಮರವಾಗಿ ಬೆಳೆಯಲಿ ಎಂದು ಹಾರೈಸಿದರು.
    ಎಂಎಲ್‌ಸಿ ಹಣಮಂತ ನಿರಾಣಿ ಮಾತನಾಡಿ, ಶಾಂತಿನಿಕೇತನ ಸಂಸ್ಥೆಯು ಗುಣಾತ್ಮಕ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಈ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲಿ ಅದಕ್ಕೆ ನಮ್ಮೆಲ್ಲರ ಸಹಕಾರವಿದೆ. ಪಾಲಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದರು.
    ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಚೇರ‌್ಮನ್ ಡಾ.ಸುರೇಶ ಬಿರಾದಾರ ಮಾತನಾಡಿ, ಪಾಲಕರು ಕಳೆದ 18 ವರ್ಷಗಳಿಂದ ಸಂಸ್ಥೆಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಮುಂದೆನೂ ಕೂಡ ಶಾಲೆಯ ಬೆಳವಣಿಗೆಗೆ ಸಹಕರಿಸಬೇಕು ಎಂದರು.
    ಸಂಸ್ಥೆಯ ಅಧ್ಯಕ್ಷೆ ಶೀಲಾ ಬಿರಾದಾರ ಅವರು ಮಕ್ಕಳಿಗೆ ಬಹುಮಾನ ವಿತರಣೆ ಮಾಡಿದರು. ಮುಖಂಡ ಗೋಪಾಲ ಕಾರಜೋಳ, ಮಳುಗೌಡ ಪಾಟೀಲ, ಸಂಸ್ಥೆಯ ನಿರ್ದೇಶಕ ಶರತ್ ಬಿರಾದಾರ, ದಿವ್ಯಾ ಬಿರಾದಾರ, ಭರತ್ ಬಿರಾದಾರ, ಪ್ರಾಚಾರ್ಯ ಚಂದನಗೌಡ ಮಾಲಿಪಾಟೀಲ ಇನ್ನಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts