23.2 C
Bangalore
Saturday, December 14, 2019

ತಂಬಾಕು, ಮದ್ಯ ಸೇವನೆಯಿಂದ ದೂರವಿರಿ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ವಿಜಯಪುರ : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ಮಾಡುವುದು ಮತ್ತು ಧೂಮಪಾನ ಮಾಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹವಾಗಿದ್ದು, ಅಂತಹ ಕೃತ್ಯಗಳು ಕಂಡುಬಂದಲ್ಲಿ ನಿರ್ಧಾಕ್ಷಣ್ಯವಾಗಿ ಅಧಿಕಾರಿಗಳು ಕ್ರಮ ಕೈಗೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ರವೀಂದ್ರ ಕಾರಬಾರಿ ಹೇಳಿದರು.
ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ಕಾನೂನು ಅರಿವು ನೆರವು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಾದ ಬಸ್‌ನಿಲ್ದಾಣ, ರೈಲು ನಿಲ್ದಾಣ, ಸಾರ್ವಜನಿಕ ಆಸ್ಪತ್ರೆ, ಶಾಲೆ, ಕಾಲೇಜುಗಳ ಮುಂದೆ ತಂಬಾಕು ಸೇವನೆ ಮಾಡುವುದು ಶಿಕ್ಷರ್ಹವಾಗಿದ್ದು, ಸಾರ್ವಜನಿಕ ಸ್ಥಳಗಳಿಂದ 500 ಮೀಟರ್ ಅಂತರದಲ್ಲಿ ಯಾವುದೇ ತರಹದ ತಂಬಾಕು ಸೇವನೆ ಮತ್ತು ಮಾರಾಟ ಮಾಡುವಂತಿಲ್ಲ. ಅದು ಕಾನೂನಿನ ಉಲ್ಲಂಘನೆಯಾಗಲಿದೆ ಎಂದು ತಿಳಿಸಿದರು.
ಇಂದಿನ ದಿನಗಳಲ್ಲಿ ಪುರುಷರಲ್ಲದೆ ಮಹಿಳೆಯರು ಕೂಡ ತಂಬಾಕು ಸೇವನೆ ಮಾಡುತ್ತಿದ್ದು ಕ್ಯಾನ್ಸರ್ ಮುಂತಾದ ರೋಗಗಳಿಗೆ ಇಳಿವಯಸ್ಸಿನಲ್ಲೇ ತುತ್ತಾಗುತ್ತಿದ್ದಾರೆ. ಯುವ ಸಮುದಾಯವು ಈ ಕೆಟ್ಟ ಚಟಗಳಿಂದ ಹೊರ ಬಂದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ ಮಾತನಾಡಿ, ಯುವ ಜನರು ತಂಬಾಕು ಮತ್ತು ಮದ್ಯಪಾನ ಸೇವನೆಗೆ ಹೆಚ್ಚು ಬಲಿಯಾಗುವುದು ಕಳವಳಕಾರಿ ಸಂಗತಿ. ನಗರ ಪ್ರದೇಶಗಳಲ್ಲಿ ಯುವ ಜನತೆ ತಂಬಾಕು ವ್ಯಸನಿಗಳಾಗುತ್ತಿದ್ದಾರೆ. ಅದನ್ನು ತಡೆಗಟ್ಟಲು ಇಲಾಖೆಯಿಂದ ಅನೇಕ ಕಾರ್ಯಕ್ರಮಗಳನ್ನು ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.
ಬಿಎಲ್‌ಡಿಇ ವೈದ್ಯಕೀಯ ವಿದ್ಯಾಲಯದ ಪ್ರೊ.ಡಾ. ವಿಕಾಸ್ ದೇಸಾಯಿ ಅವರು ತಂಬಾಕು ಸೇವನೆಯಿಂದ ಉಂಟಾಗಬಹುದಾದ ದುಷ್ಪರಿಣಾಮ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಕಾರ್ಯಲಯದವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪ್ಸೆ, ಜಿಲ್ಲಾ ಶಸ ಚಿಕಿತ್ಸಕ ಡಾ. ಶರಣಪ್ಪ ಕಟ್ಟಿಮನಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಎಚ್.ಖಾಸನೀಸ, ಡಾ. ಸಂಪತ್ ಗುಣಾರಿ, ಸುರೇಶ್ ಹೊಸಮನಿ, ಡಾ.ಐ.ಎಸ್ ಧಾರವಾಡಕರ, ಡಾ. ಪ್ರಕಾಶ್ ಚವಾಣ್, ವಿಜಯಕುಮಾರ್, ಶ್ರೀಕಾಂತ್ ಪೂಜಾರ, ಮುಂತಾದವರು ಉಪಸ್ಥಿತರಿದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...