More

    ಡಿಸಿಸಿ ಬ್ಯಾಂಕ್‌ನಿಂದ 5 ಲಕ್ಷ ರೂ. ನೆರವು

    ವಿಜಯಪುರ: ದೇಶಕ್ಕಾಗಿ ಮಡಿದ ವೀರ ಯೋಧ ಕಾಶಿರಾಯನಂತಹವರು ನಮ್ಮ ಯುವಕರಿಗೆ ಪ್ರೇರಕ ಶಕ್ತಿಯಾಗಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವಾನಂದ ಪಾಟೀಲ ಅವರು ಹೇಳಿದರು.

    ಉಕ್ಕಲಿ ಗ್ರಾಮದಲ್ಲಿ ಮಂಗಳವಾರ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಡಿಸಿಸಿ ಬ್ಯಾಂಕ್ ವತಿಯಿಂದ 5 ಲಕ್ಷ ರೂ ವಿತರಿಸಿದರು.

    ಕಾಶಿರಾಯ ಬೊಮ್ಮನಹಳ್ಳಿಯವರು ಆಕಸ್ಮಿಕವಾಗಿ ವೀರ ಮರಣ ಹೊಂದಿದ್ದು, ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಅವರಲ್ಲಿರುವ ದೇಶಪ್ರೇಮ ಮೆಚ್ಚುವಂತಹದ್ದು. ಅಂತಹ ವೀರಯೋಧರನ್ನು ಪಡೆದ ನಾವು ಪುಣ್ಯವಂತರು. ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ. ಹಿಂದೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಕುಟುಂಬಗಳಿಗೂ ಕೂಡ ಡಿಸಿಸಿ ಬ್ಯಾಂಕ್ ಸಹಾಯ ಮಾಡುತ್ತಾ ಬಂದಿದೆ. ಮುಂದೆಯೂ ಕೂಡ ಮುಂದುವರಿಸಿಕೊಂಡು ಹೋಗಲಾಗುವುದು ಎಂದು ಹೇಳಿದರು.

    ಹುತಾತ್ಮ ಯೋಧನ ಕುಟುಂಬ ಸದಸ್ಯರು ನೀಡಿದ ಮನವಿ ಸ್ವೀಕರಿಸಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಹೆಚ್ಚಿನ ಸಹಾಯಕ್ಕಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಗ್ರಾಮಸ್ಥರ ಬೇಡಿಕೆಯಂತೆ ಯೋಧರ ಸ್ಮಾರಕ ನಿರ್ಮಾಣಕ್ಕಾಗಿ ಶಾಸಕರ ಅನುದಾನದಿಂದ ಹಣ ಮಂಜೂರು ಮಾಡಿ ಸ್ಮಾರಕ ನಿರ್ಮಾಣಕ್ಕೆ ಪ್ರಯತ್ನಿಸೋಣ ಎಂದರು.

    ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ನಿರ್ದೇಶಕ ಗುರುಶಾಂತ ನಿಡೋಣಿ, ಬ್ಯಾಂಕ್ ಸಿಬ್ಬಂದಿ, ಊರಿನ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಸದಸ್ಯರು, ಗ್ರಾಮದ ಜನತೆ, ಯೋಧರಾದ ಕಿಶನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts