17.8 C
Bengaluru
Wednesday, January 22, 2020

ಬೌದ್ಧಿಕ ಆಸ್ತಿ ಹಕ್ಕು ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ವಿಜಯಪುರ: ಒಬ್ಬನ ಬುದ್ಧಿಶಕ್ತಿಯಿಂದ ಉತ್ಪಾದನೆಯಾದುದೇ ಬೌದ್ಧಿಕ ಆಸ್ತಿ. ಅದು ಇಡೀ ಜನಾಂಗಕ್ಕೆ ಉಪಯೋಗವಾಗಬೇಕು. ಆ ನಿಟ್ಟಿನಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಅಂಜುಮನ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಪ್ರೊ.ಉಜ್ವಲಾ ಸರನಾಡಗೌಡ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಮತ್ತು ಕೆಸಿಪಿ ವಿಜ್ಞಾನ ಪಪೂ ಮಹಾವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಬೌದ್ಧಿಕ ಆಸ್ತಿ ಹಕ್ಕುಗಳು’ ಎಂಬ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ನಿತ್ಯ ಬದುಕಿನಲ್ಲಿ ಬರಹಗಾರ, ಸೃಜನಶೀಲ ಕಲೆಗಾರರು, ವಿಜ್ಞಾನಿಗಳು ರಚಿಸಿದ ಆಸಕ್ತಿದಾಯಕ ವಿಷಯಗಳ ಪೆಟೆಂಟ್‌ಗಳು, ಕೃತಿ ಸ್ವಾಮ್ಯ ಹಾಗೂ ವಿನ್ಯಾಸವನ್ನು ಗೌರವಿಸುವ ಬಗ್ಗೆ ಬೌದ್ಧಿಕ ಆಸ್ತಿ ಹಕ್ಕುಗಳು ನಮ್ಮಲ್ಲಿ ಅರಿವು ಮೂಡಿಸುತ್ತದೆ. ಆರ್ಥಿಕ ಅಭಿವೃದ್ಧಿ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಯೋಗಕ್ಷೇಮಕ್ಕಾಗಿ ವೇಗವರ್ಧಕವಾಗಿ ಕೆಲಸಮಾಡುತ್ತದೆ. ಒಂದು ರಾಷ್ಟ್ರದ ಸಾಮರ್ಥ್ಯವನ್ನು ಅರ್ಥ ಮಾಡಿಕೊಳ್ಳುವಲ್ಲಿ ಬೌದ್ಧಿಕ ಆಸ್ತಿ ಹಕ್ಕು ವಿವಿಧ ದೇಶಗಳಿಗೆ ಸಹಾಯಮಾಡುತ್ತದೆ ಎಂದರು.
ಬಿಎಲ್‌ಡಿಇ ಸಂಸ್ಥೆಯ ಆಡಳಿತಾಧಿಕಾರಿ ಡಾ.ಆರ್.ವಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೌದ್ಧಿಕ ಹಕ್ಕುಗಳಿಂದ ಅಮೂರ್ತ ವಿಷಯಗಳಾದ ಚಿಂತನೆ ಯೋಚನೆ, ರಾಗ, ಧ್ವನಿ ಇತ್ಯಾದಿಗಳನ್ನು ಮೂರ್ತಗೊಳಿಸಿ ಕಲಾವಿದರಿಗೆ ಅಥವಾ ಹೊಸ ಚಿಂತನೆಯನ್ನು ಹುಟ್ಟು ಹಾಕಿದವರಿಗೆ ಲಾಭವಾಗುವಂತೆ ಮಾಡುತ್ತದೆ. ಈ ತಾಂತ್ರಿಕ ಯುಗದಲ್ಲಿ ಬೌದ್ಧಿಕ ಆಸ್ತಿ ರಕ್ಷಣೆಗಾಗಿ ಪರಿಣಾಮಕಾರಿ ಕಾನೂನುಗಳು ರಚನೆಯಾಗಿದೆ. ಅವುಗಳನ್ನು ತಿಳಿದುಕೊಂಡು ಸ್ವಂತ ಕೃತಿಗಳನ್ನು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ರಕ್ಷಿಸಿಕೊಳ್ಳಬೇಕು ಎಂದರು.
ವಿಚಾರಗೋಷ್ಠಿಯಲ್ಲಿ ಡಾ.ಶರಣು ಗೌಡರ, ಸಚಿನ್ ಲೋಕಾಪುರ ಹಾಗೂ ಸುನೀಲ ವರ್ನೇಕರ ಉಪನ್ಯಾಸ ನೀಡಿದರು. ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಪ್ರಾಚಾರ್ಯ ಡಾ.ಎಸ್.ಜೆ.ಪವಾರ ಸ್ವಾಗತಿಸಿದರು. ರ್.ಎಂ. ಮಿರ್ದೆ ಪರಿಚಯಿಸಿದರು. ಪ್ರೊ.ಅನ್ನಪೂರ್ಣ ತುಪ್ಪದ ಹಾಗೂ ಪ್ರೊ.ಸೌಮ್ಯ ಕೋಷ್ಠಿ ನಿರೂಪಿಸಿದರು. ಡಾ.ಜೆ.ಆರ್. ಕೋಟ್ನಾಳ ವಂದಿಸಿರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...