23.2 C
Bangalore
Saturday, December 14, 2019

ಗಗನ ಮಹಲ್ ಬೋಟಿಂಗ್ ಕನಸು ನನಸು

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಪರಶುರಾಮ ಭಾಸಗಿ
ವಿಜಯಪುರ: ಐತಿಹಾಸಿಕ ಗಗನ ಮಹಲ್ ಉದ್ಯಾನ ಪಕ್ಕದ ಕಂದಕದಲ್ಲಿ ಬೋಟಿಂಗ್ ಸೌಲಭ್ಯ ಕಲ್ಪಿಸಬೇಕೆಂಬ ಬಹುದಿನದ ಬೇಡಿಕೆಗೆ ಕೊನೆಗೂ ಸ್ಪಂದಿಸಿರುವ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಶೀಘ್ರದಲ್ಲಿ ನಗರವಾಸಿಗಳ ಕನಸು ನನಸಾಗಲಿದೆ.

ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಇಬ್ಬರು ಗುತ್ತಿಗೆದಾರರು ಮುಂದೆ ಬಂದಿದ್ದಾರೆ. ಜನಪ್ರತಿನಿಧಿಗಳ ಸಮ್ಮುಖದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬೋಟ್‌ಗಳು ಶೀಘ್ರದಲ್ಲಿ ಕಾರ್ಯಾಚರಣೆಗಿಳಿಯಲಿವೆ. ಜಿಲ್ಲಾಡಳಿತದಿಂದಲೇ ಬೋಟ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈಗಾಗಲೇ ಒಂದು ಬೋಟ್ ಗಗನ ಮಹಲ್ ಪ್ರವೇಶಿಸಿದ್ದು, ಸೆ. 27ರ ವಿಶ್ವ ಪ್ರವಾಸೋದ್ಯಮ ದಿನದಂದು ಬೋಟಿಂಗ್ ಸೌಲಭ್ಯಕ್ಕೆ ಚಾಲನೆ ನೀಡಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಜಿಲ್ಲಾಡಳಿತದಿಂದಲೇ ಬೋಟ್ ಪೂರೈಕೆ
ಮೂರು ರೀತಿಯ ಬೋಟಿಂಗ್ ವ್ಯವಸ್ಥೆಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಕಯಾಕಿಂಗ್, ಪೆಡಲ್ ಬೋಟಿಂಗ್ ಹಾಗೂ ರ‌್ಯಾಪ್ಟಿಂಗ್ ನಡೆಸಲು ಮೂರು ವರ್ಷದ ಅವಧಿಗೆ ಲೀಸ್ ನೀಡಲಾಗುತ್ತಿದೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಬೋಟಿಂಗ್ ನಡೆಯಲಿದೆ. ಜಿಲ್ಲಾಡಳಿತವೇ ಎರಡು ಯಾಂತ್ರಿಕ ಬೋಟ್‌ಗಳನ್ನು, 10 ಡಬ್ಬಲ್ ಸೀಟರ್ ಕಯಾಕಿಂಗ್‌ಗಳನ್ನು ನೀಡಲಿದೆ. ಲೀಸ್ ಅವಧಿ ಮುಗಿದ ತಕ್ಷಣ ಈ ಬೋಟ್‌ಗಳಿಗೆ ಬದಲಾಗಿ ಹೊಸ ಬೋಟ್ ಜಿಲ್ಲಾಡಳಿತಕ್ಕೆ ಒದಗಿಸಬೇಕು. ಹಳೇ ಬೋಟ್‌ಗಳನ್ನು ಗುತ್ತಿಗೆದಾರರೇ ಇಟ್ಟುಕೊಳ್ಳಬಹುದು. ನೆರೆ ಹಾವಳಿಯಂಥ ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತ ಈ ಬೋಟ್‌ಗಳನ್ನು ವಶಕ್ಕೆ ಪಡೆಯಲಿದೆ.
ಗುತ್ತಿಗೆದಾರರು ಸಿಬ್ಬಂದಿಗೆ ಸಮವಸ್ತ್ರ, ಐಡಿ ಕಾರ್ಡ್ ನೀಡಬೇಕು. ಪ್ರಥಮ ಚಿಕಿತ್ಸೆ ಸೌಕರ್ಯಗಳನ್ನಿಡಬೇಕು. ತುರ್ತು ಸಂದರ್ಭಗಳಲ್ಲಿ ರಕ್ಷಣೆಗಾಗಿ ತರಬೇತಿ ಪಡೆದ ಇಬ್ಬರು ಸಿಬ್ಬಂದಿಯನ್ನಿರಿಸಿಕೊಳ್ಳಬೇಕೆಂಬ ನಿಬಂಧನೆಗೊಳಪಡಿಸಲಾಗಿದೆ.

ನೀರಿನ ಶುದ್ಧತೆ- ಸ್ವಚ್ಛತೆಗೆ ಬೇಕು ಆದ್ಯತೆ
ಬೋಟಿಂಗ್ ವ್ಯವಸ್ಥೆಗೂ ಮುನ್ನ ಉದ್ಯಾನದ ಅಭಿವೃದ್ಧಿಯಾಗಬೇಕಿದೆ. ಸದ್ಯ ಗಗನ ಮಹಲ್ ಕಂದಕದ ನೀರು ದುರ್ವಾಸನೆಯಿಂದ ಕೂಡಿದೆ. ಕಂದಕದ ನೀರಿಗೆ ಚರಂಡಿ ನೀರು ಸೇರುತ್ತಿದೆ. ಉದ್ಯಾನ ಅಧ್ವಾನಗೊಂಡಿದೆ. ಸುತ್ತಲೂ ಮುಳ್ಳು ಕಂಟಿ ಬೆಳೆದಿದ್ದು, ಅನೈತಿಕ ತಾಣವಾಗಿ ಮಾರ್ಪಟ್ಟಿದೆ. ಕಂದಕದ ಬಳಿ ಹೋಗಲು ದಾರಿಯೇ ಇಲ್ಲ. ಜಿಲ್ಲಾಧಿಕಾರಿ ನಿವಾಸದ ಮುಂದಿರುವ ದಾರಿಯೊಂದು ಮೂತ್ರ ವಿಸರ್ಜನೆಗೆ ಹೇಳಿ ಮಾಡಿಸಿದ ಜಾಗವಾಗಿದೆ. ಇನ್ನು ನರಸಿಂಹ ದೇವಸ್ಥಾನ ಮುಂಭಾಗದ ಮಾರ್ಗದಲ್ಲಿ ಸಂಚಾರ ಬಂದ್ ಮಾಡಲಾಗಿದೆ.

ಈ ಹಿಂದೆ ಕೆಬಿಜೆಎನ್‌ಎಲ್‌ನಿಂದ ಕಂದಕದ ಸುತ್ತ ಅಗೆದು ನೀರು ಸಂಗ್ರಹಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಆ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಸೌಂದರ್ಯವೂ ಹಾಳಾಗಿದೆ. ಹೀಗಾಗಿ ಮೊದಲು ಉದ್ಯಾನದ ಅಭಿವೃದ್ಧಿಯಾಗಬೇಕಿದ್ದು, ಈ ನಿಟ್ಟಿನಲ್ಲಿ ಪರಿಶೀಲನೆ ನಡೆಸುವುದಾಗಿ ಜಿಲ್ಲಾಡಳಿತ ‘ವಿಜಯವಾಣಿ’ಗೆ ತಿಳಿಸಿದೆ.

ಬೋಟಿಂಗ್ ವ್ಯವಸ್ಥೆ ಕಲ್ಪಿಸುತ್ತಿರುವ ಜಿಲ್ಲಾಡಳಿತಕ್ಕೆ ಅಭಿನಂದನೆಗಳು. ಆದರೆ, ‘ಹಂದಿ ಗಾರ್ಡನ್’ ಎಂದೇ ಕುಖ್ಯಾತಿ ಪಡೆದ ಗಗನ ಮಹಲ್ ‘ಮಂದಿ ಗಾರ್ಡನ್’ ಆಗಲು ಮೊದಲು ಕ್ರಮ ಕೈಗೊಳ್ಳಬೇಕು. ಈ ಹಿಂದೆ ಅದನ್ನು ‘ಐಲ್ಯಾಂಡ್’ ಥರ ಮಾಡುವ ಯೋಜನೆ ರೂಪಿಸಲಾಗಿತ್ತು. ಜತೆಗೆ ಗಗನ ಮಹಲ್ ಉದ್ಯಾನ ಮತ್ತು ಕಂದಕದ ಆಚೆಗಿನ ಉದ್ಯಾನಕ್ಕೆ ಸಂಪರ್ಕ ಕಲ್ಪಿಸಲು ಕಬ್ಬಿಣದ ಫ್ಲೈಓವರ್ ಥರ ಮಾಡುವ ಯೋಚನೆ ಇತ್ತು. ಇದೆಲ್ಲವೂ ಒಟ್ಟಿಗೆ ಆದರೆ ಅನುಕೂಲ.
ಶರಣು ಸಬರದ, ಯುವ ಮುಖಂಡ

ಗಗನ ಮಹಲ್ ಕಂದಕದಲ್ಲಿ ಬೋಟ್‌ಗಳು ಶೀಘ್ರದಲ್ಲಿ ಕಾರ್ಯಾಚರಣೆ ನಡೆಸಲಿವೆ. ಈಗಾಗಲೇ ಇಬ್ಬರು ಗುತ್ತಿಗೆದಾರರು ಅರ್ಜಿ ಸಲ್ಲಿಸಿದ್ದು, ಟೆಂಡರ್‌ಗೆ ಅನುಮೋದನೆ ನೀಡಲಾಗುವುದು. ಪ್ರವಾಸೋದ್ಯಮ ದಿನದಂದೇ ಉದ್ಘಾಟನೆ ನೆರವೇರಿಸಲು ಸಿದ್ಧತೆ ನಡೆದಿದೆ.
ಎಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...