More

    ಎಂ.ಬಿ. ಪಾಟೀಲರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿ

    ವಿಜಯಪುರ: ಉತ್ತರ ಕರ್ನಾಟಕದ ಹಿರಿಯ ರಾಜಕಾರಣಿ, ಲಿಂಗಾಯತ ನಾಯಕ ಎಂ.ಬಿ. ಪಾಟೀಲ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಜಿ.ಪಂ. ಅಧ್ಯಕ್ಷ ಶಿವಯೋಗಪ್ಪ ನೇದಲಗಿ ತಿಳಿಸಿದ್ದಾರೆ.
    ಪ್ರಭಾವಿ ನಾಯಕರಾಗಿರುವ ಎಂ.ಬಿ. ಪಾಟೀಲರು ರಾಜ್ಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದಕ್ಷಿಣ ಕರ್ನಾಟಕ ಭಾಗದ ಅನೇಕ ಚುನಾವಣೆಗಳಲ್ಲಿ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಮಾತ್ರವಲ್ಲ, ನೆರೆಯ ಮಹಾರಾಷ್ಟ್ರದ ಚುನಾವಣೆಯಲ್ಲೂ ಅವರು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಾಗಿರುವ ಎಂ.ಬಿ. ಪಾಟೀಲರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಿದ್ದೇ ಆದಲ್ಲಿ ರಾಜ್ಯದಲ್ಲಿ ಪಕ್ಷ ಫಿನಿಕ್ಸ್ ಪಕ್ಷಿಯಂತೆ ಎದ್ದು ಬರುವುದರಲ್ಲಿ ಅಚ್ಚರಿಯಿಲ್ಲ ಎಂದು ತಿಳಿಸಿದ್ದಾರೆ.
    ಈ ಹಿಂದಿನ ಸರ್ಕಾರದಲ್ಲಿ ನೀರಾವರಿ ಮಂತ್ರಿಯಾಗಿ ಎಂ.ಬಿ. ಪಾಟೀಲರು ಮಾಡಿರುವ ಕಾರ್ಯ ವರ್ಣನಾತೀತ. ಇಡೀ ರಾಜ್ಯದ ನೀರಾವರಿ ಯೋಜನೆಗಳೇ ಎಂ.ಬಿ. ಪಾಟೀಲರ ಸಾಧನೆ ಕೊಂಡಾಡುತ್ತಿವೆ. ಉತ್ತರ ಕರ್ನಾಟಕವಂತೂ ಸಂಪೂರ್ಣ ನೀರಾವರಿ ಮಾಡಿದ್ದು ಇಂದಿಗೂ ಜನ ಅವರ ನಾಯಕತ್ವಕ್ಕಾಗಿ ಹಂಬಲಿಸುತ್ತಿದ್ದಾರೆ. ಹೀಗಾಗಿ ಎಂ.ಬಿ. ಪಾಟೀಲರ ಕೈಗೆ ಪಕ್ಷದ ಚುಕ್ಕಾಣಿ ನೀಡಬೇಕು. ಎಲ್ಲ ಸಮುದಾಯದವರು, ನಾಯಕರನ್ನು ಒಂದಾಗಿಸಿಕೊಂಡು ಪಕ್ಷ ಮುನ್ನಡೆಸುವ ಶಕ್ತಿ ಎಂ.ಬಿ. ಪಾಟೀಲರಿಗಿದೆ. ಮಾತ್ರವಲ್ಲ, ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕಾದರೆ ಎಂ.ಬಿ. ಪಾಟೀಲರಿಗೆ ಕೆಪಿಸಿಸಿ ಅಧ್ಯಕ್ಷಗಿರಿ ನೀಡಬೇಕೆಂದು ನೇದಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts