21.7 C
Bengaluru
Tuesday, January 21, 2020

12ರಿಂದ ಗುಮ್ಮಟನಗರಿಯಲ್ಲಿ ನಮ್ಮೂರ ಜಾತ್ರೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ವಿಜಯಪುರ: ಉತ್ತರ ಕರ್ನಾಟಕದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಜ.12 ರಿಂದ 18ರ ವರೆಗೆ ವಿದ್ಯುಕ್ತವಾಗಿ ಜರುಗಲಿದೆ ಎಂದು ಸಿದ್ಧೇಶ್ವರ ಸಂಸ್ಥೆ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಬರ ಆವರಿಸಿರುವುದರಿಂದ ಈ ಬಾರಿ ಅತ್ಯಂತ ಸರಳ ರೀತಿಯಿಂದ ಜಾತ್ರಾ ಮಹೋತ್ಸವ ಆಯೋಜಿಸಲಾಗುತ್ತಿದೆ, ಶಾಸ್ತ್ರೋಕ್ತವಾದ ಎಲ್ಲ ಕಾರ್ಯಕ್ರಮಗಳು ಪ್ರತಿ ವರ್ಷದಂತೆ ನಡೆಯಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜ.12 ರಂದು ಸಂಜೆ 6 ಗಂಟೆಯಿಂದ ಸಿದ್ಧೇಶ್ವರ ಜಾತ್ರಾ ಮಹೋತ್ಸವ ವಿದ್ಯುಕ್ತವಾಗಿ ಆರಂಭಗೊಳ್ಳಲಿದೆ. ಅಂದು ಸಂಜೆ 6ಕ್ಕೆ ಶ್ರೀ ಸಿದ್ಧೇಶ್ವರ ದೇವಾಲಯದಿಂದ ನಂದಿ ಧ್ವಜಗಳ ಮೆರವಣಿಗೆ ಆರಂಭಗೊಳ್ಳಲಿದೆ. ಪ್ರಮುಖ ಮಾರ್ಗಗಳಲ್ಲಿ ಸಂಚರಿಸುವ ನಂದಿ ಧ್ವಜಗಳ ಮೆರವಣಿಗೆ ಇಂಡಿ ರಸ್ತೆಯ ಚತುಮುಖ ಗಣಪತಿ ದೇವಾಲಯಕ್ಕೆ ತಲುಪಲಿದೆ. ಚತುಮುಖ ಗಣಪತಿ ದೇವಾಲಯದಲ್ಲಿ ವಿಶೇಷ ಅಭಿಷೇಕ, ಪ್ರಸಾದ ವಿತರಣೆ ನಡೆಯಲಿದೆ ಎಂದು ವಿವರಿಸಿದರು.

ಜ.13 ರಂದು ಮಧ್ಯಾಹ್ನ 12.30 ಕ್ಕೆ ಶ್ರೀ ಸಿದ್ಧೇಶ್ವರ ದೇವಾಲಯದಿಂದ ಲಿಂಗದ ಗುಡಿಯವರೆಗೆ ವೈಭವದಿಂದ ನಂದಿ ಧ್ವಜಗಳ ಮೆರವಣಿಗೆ ನಡೆಯಲಿದೆ. ನಗರದದ 770 ಲಿಂಗದ ಗುಡಿಗೆ ನಂದಿ ಧ್ವಜಗಳ ಮೆರವಣಿಗೆ ತಲುಪಿದ ನಂತರ, ಅಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಸಂಜೆ ಶ್ರೀ ಸಿದ್ಧೇಶ್ವರ ದೇವಾಲಯದ ಆವರಣದಲ್ಲಿ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದರು.

ಜ. 14 ರಂದು ಶ್ರೀ ಸಿದ್ಧೇಶ್ವರ ದೇವಾಲಯದ ಆವರಣದಲ್ಲಿ ಮಧ್ಯಾಹ್ನ 12.30 ಕ್ಕೆ ಅಕ್ಷತಾರ್ಪಣೆ -ಭೋಗಿ ಕಾರ್ಯಕ್ರಮ ನಡೆಯಲಿದ್ದು, ಶ್ರೀಸಿದ್ಧರಾಮನ ಯೋಗದಂಡಕ್ಕೆ ಅಕ್ಷತೆ ಹಾಗೂ ವಿಧಿವಿಧಾನಗಳೊಡನೆ ಚರಿತ್ರೆ ಓದುವ ಕಾರ್ಯಕ್ರಮ, ನಂತರ ನಂದಿ ಧ್ವಜಗಳ ಉತ್ಸವ ಜರುಗಲಿದೆ. ಅದೇ ದಿನ ರಾತ್ರಿ 8ಕ್ಕೆ ಮನರಂಜನಾ ಕಾರ್ಯಕ್ರಮ ಜರುಗಲಿದೆ. ಜ.15 ರಂದು ಮಧ್ಯಾಹ್ನ 12.30 ಕ್ಕೆ ಹೋಮ-ಹವನ ನಡೆಯಲಿದ್ದು, ಪಲ್ಲಕ್ಕಿಯೊಂದಿಗೆ ನಂದಿ ಧ್ವಜಗಳ ಉತ್ಸವ ವೈಭವದಿಂದ ಜರುಗಲಿದೆ ಎಂದರು.

ಜ.16 ರಂದು ಸಂಜೆ 7 ರಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಿತ್ತಾಕರ್ಷಕ ಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ. ಅದರಂತೆ ಜಾತ್ರಾ ಮಹೋತ್ಸವ ಪ್ರಯುಕ್ತ ಹಲವಾರು ಕ್ರೀಡಾಕೂಟಗಳನ್ನು ಸಹ ಆಯೋಜಿಸಲಾಗುತ್ತಿದೆ. ಜ.17 ರಂದು ಬೆಳಗ್ಗೆ 11 ಕ್ಕೆ ಭಾರ ಎತ್ತುವ ಸ್ಪರ್ಧೆ, ಜ. 18 ರಂದು ಮಧ್ಯಾಹ್ನ 3ಕ್ಕೆ ನಗರದ ಎಸ್.ಎಸ್.ಹೈಸ್ಕೂಲ್ ಮೈದಾನದಲ್ಲಿ ಜಂಗೀ ನಿಖಾಲಿ ಕುಸ್ತಿ ಪಂದ್ಯಾವಳಿಗಳು ನಡೆಯಲಿವೆ.

ಇನ್ನೂ ಉತ್ತರ ಕರ್ನಾಟಕದ ಪ್ರಸಿದ್ಧ ಜಾನುವಾರು ಜಾತ್ರೆ ಸಹ ಈ ಬಾರಿಯೂ ನಡೆಯಲಿದ್ದು, ಜ.12 ರಿಂದ ತೊರವಿಯ ಎಪಿಎಂಸಿಯ ವಿಶಾಲ ಜಾಗೆಯಲ್ಲಿ ಜಾನುವಾರು ಜಾತ್ರೆ ನಡೆಯಲಿದ್ದು, ಕೃಷಿ ಉತ್ಪನ್ನಗಳ ಪ್ರದರ್ಶನ ನಡೆಯಲಿದೆ ಎಂದು ಯತ್ನಾಳ ವಿವರಿಸಿದರು. ಶ್ರೀ ಸಿದ್ದೇಶ್ವರ ಸಂಸ್ಥೆ ಚೇರ್​ವುನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂ.ಗು. ಸಜ್ಜನ, ಸಿದ್ರಾಮಪ್ಪ ಉಪ್ಪಿನ, ಗುರು ಗಚ್ಚಿನಮಠ, ರಾಘವ ಅಣ್ಣಿಗೇರಿ, ಚಂದ್ರು ಚೌಧರಿ, ಸುರೇಶ ಜಾಧವ ಇನ್ನಿತರರು ಉಪಸ್ಥಿತರಿದ್ದರು.

ಈ ಬಾರಿ ‘ಸಿದ್ಧೇಶ್ವರ ರತ್ನ’ ಇಲ್ಲ: ಪ್ರತಿ ಬಾರಿಯೂ ವಿವಿಧ ರಂಗಗಳಲ್ಲಿ ಸಾಧನೆ ತೋರಿದ ಸಾಧಕರನ್ನು ಗುರುತಿಸಿ ಸಿದ್ಧೇಶ್ವರ ರತ್ನ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜಾತ್ರಾ ಮಹೋತ್ಸವವನ್ನು ಆಚರಣೆಯ ದೃಷ್ಟಿಯಿಂದ, ಭೀಕರ ಬರಗಾಲ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಬಾರಿ ಸಿದ್ಧೇಶ್ವರ ರತ್ನ ಪ್ರಶಸ್ತಿ ಪ್ರದಾನ ಹಾಗೂ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸಕ್ತ ವರ್ಷ ರದ್ದುಗೊಳಿಸಲಾಗಿದೆ. ಮುಂದಿನ ವರ್ಷ ಮತ್ತೆ ಸಂಪ್ರದಾಯದಂತೆ ಸಿದ್ಧೇಶ್ವರ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಯತ್ನಾಳ ಪ್ರಕಟಿಸಿದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...