ವಿಜಯರತ್ನ ಪ್ರಶಸ್ತಿ ಪ್ರದಾನ ಇಂದು: ವಿವಿಧ ಕ್ಷೇತ್ರಗಳ 27 ಸಾಧಕರಿಗೆ ಗೌರವ | Vijayaratna Award

Vijayaratna Award
Published on

Vijayaratna Award : ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಪ್ರತಿವರ್ಷ ನೀಡುವ ಪ್ರತಿಷ್ಠಿತ ‘ವಿಜಯರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಶುಕ್ರವಾರ (ಜೂ.20) ಬೆಂಗಳೂರಿನಲ್ಲಿ ನಡೆಯಲಿದೆ.

ರಾಜ್ಯಾದ್ಯಂತ ಎಲ್ಲ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಇದ್ದುಕೊಂಡು ಸಮಾಜಸೇವೆಯಲ್ಲಿ ತೊಡಗಿರುವ ಗಣ್ಯರು, ಸಾಧಕರನ್ನು ಗುರುತಿಸುವ ಕಾಯಕವನ್ನು ವಿಜಯವಾಣಿ ಮಾಡುತ್ತಿದೆ. ಅದೇ ರೀತಿ ಈ ಬಾರಿ ವಿವಿಧ ಕ್ಷೇತ್ರಗಳ 27 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ನಗರದ ಖಾಸಗಿ ಹೋಟೆಲ್​ನಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, ಬಿಎಂಟಿಎಫ್ ಎಡಿಜಿಪಿ ಡಿ.ರೂಪಾ ಮತ್ತು ವಿಆರ್​ಎಲ್ ಸಮೂಹ ಸಂಸ್ಥೆಗಳ ಎಂಡಿ ಡಾ.ಆನಂದ ಸಂಕೇಶ್ವರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಪ್ರಶಸ್ತಿಯನ್ನು ನೀಡುವ ಮೂಲಕ ಒಳ್ಳೆಯ ಕೆಲಸಕ್ಕೆ ಪ್ರೋತ್ಸಾಹ ನೀಡುವ ಜತೆಗೆ ಮತ್ತೊಂದಿಷ್ಟು ಜನರಿಗೆ ಉತ್ಸಾಹ ಬರುವಂತೆ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ನಿರಂತರವಾಗಿ ಈ ಕೆಲಸವನ್ನು ವಿಜಯವಾಣಿ ಮಾಡುತ್ತಿದೆ. ಕಾರ್ಯಕ್ರಮಕ್ಕೆ ಎಂಎಸ್​ಐಎಲ್ ಸಹಯೋಗ ಇದೆ.

ಸನ್ಮಾನ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಈ ಕೆಳಗಿನ ಕ್ಯೂ ಆರ್​ ಕೋಡ್​ ಅನ್ನು ಸ್ಕ್ಯಾನ್​ ಮಾಡಿ...

QR CODE
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net