21 C
Bengaluru
Thursday, January 23, 2020

ಅನಿವಾರ್ಯ ನಿರ್ಧಾರ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಈಗಾಗಲೇ ಜಾಗತಿಕ ಆರ್ಥಿಕ ಹಿನ್ನಡೆಯ ಪರಿಣಾಮ ಭಾರತದ ಮೇಲೂ ತೀವ್ರ ಪ್ರಮಾಣದಲ್ಲಿ ಆಗಿರುವುದು ಸ್ಪಷ್ಟ ಗೋಚರ. ಉದ್ಯಮವಲಯ ಸಂಕಟದಲ್ಲಿದ್ದರೆ, ಹಲವು ವಲಯಗಳು ನಷ್ಟದ ಕೂಪಕ್ಕೆ ಸಿಲುಕಿಕೊಂಡಿವೆ. ಪರಿಣಾಮ, ಜಿಡಿಪಿ ಕುಸಿತ ದಾಖಲಿಸಿದ್ದು, ಆರ್ಥಿಕವಾಗಿ ಉಲ್ಲಾಸದ ದಿನಗಳೇನೂ ಕಾಣುತ್ತಿಲ್ಲ. ಈ ಪರಿಸ್ಥಿತಿ ನಿರ್ದಿಷ್ಟವಾಗಿ ಎಷ್ಟು ದಿನ ಮುಂದುವರಿಯಲಿದೆ ಎಂದು ಹೇಳುವುದು ಕಷ್ಟಸಾಧ್ಯವಾದರೂ, ಈಗಾಗಲೇ ಸಂಭವಿಸಿರುವ ನಷ್ಟ ಮತ್ತು ಬಂಡವಾಳ ಹೂಡಿಕೆಯಲ್ಲಿನ ನಿರುತ್ಸಾಹ ವಾತಾವರಣದಿಂದ ಚೇತರಿಸಿಕೊಳ್ಳಲು ಖಂಡಿತವಾಗಿಯೂ ಕಾಲಾವಕಾಶ ಬೇಕು. ರೆಪೋ ದರವನ್ನು ಹಲವು ಬಾರಿ ತಗ್ಗಿಸಿದರೂ ಹೇಳಿಕೊಳ್ಳುವಂಥ ಪ್ರಯೋಜನವಾಗಿಲ್ಲ. ಬ್ಯಾಂಕಿಂಗ್ ರಂಗದ ಸುಧಾರಣೆಗಳ ಫಲಿತಾಂಶ ಮುಂದಿನ ದಿನಗಳಲ್ಲಿ ಗೊತ್ತಾಗಬೇಕಿದೆಯಷ್ಟೇ. ಒಂದೆಡೆ ಈ ಸಮಸ್ಯೆಗಳು ಬೃಹದಾಕಾರ ಪಡೆದುಕೊಂಡಿದ್ದರೆ, ಮತ್ತೊಂದೆಡೆ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಪೈಕಿ ಹಲವು ಶತಪ್ರಯತ್ನದ ಬಳಿಕವೂ ನಷ್ಟದಿಂದ ಆಚೆ ಬಂದಿಲ್ಲ. ಸರ್ಕಾರ ಬಂಡವಾಳ ಸುರಿದು ಬಸವಳಿದು ಹೋಗಿದೆ. ಇಂಥ ಕಂಪನಿಗಳಿಗೆ ಇನ್ನಷ್ಟು ದುಡ್ಡು ಸುರಿಯುವುದು ವ್ಯರ್ಥ ಎಂದು ಆರ್ಥಿಕ ಹಾಗೂ ಸಾಮಾಜಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಮಹತ್ವದ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರ ನಷ್ಟದಲ್ಲಿರುವ ಸಾರ್ವಜನಿಕ ರಂಗದ ಉದ್ಯಮಗಳ (ಪಿಎಸ್​ಯುು) ಷೇರುಗಳನ್ನು ಮಾರಾಟ ಮಾಡಲು ಹಾಗೂ ಅಗತ್ಯವಾದಲ್ಲಿ ಕಂಪನಿಗಳನ್ನು ಮುಚ್ಚಲು ಮುಂದಾಗಿದೆ. ಈ ನಿರ್ಧಾರದ ಬಗ್ಗೆ ಪರ-ವಿರೋಧ ಅಭಿಪ್ರಾಯ ಕೇಳಿಬರುತ್ತಿದ್ದು, ಈ ನಡೆಯ ಪರಿಣಾಮಗಳ ಅವಲೋಕನ ಆರಂಭವಾಗಿದೆ. ಅದೇನಿದ್ದರೂ, ಸರ್ಕಾರದ ಪಾಲಿಗೆ ಇದೊಂದು ಅನಿವಾರ್ಯದ ಹೆಜ್ಜೆಯಾಗಿತ್ತು. ದೇಶದ ಅತಿ ದೊಡ್ಡ ಹೆಲಿಕಾಪ್ಟರ್ ಸಂಸ್ಥೆ ಪವನ್ ಹಂಸ್, ಭಾರತ ಪಂಪ್ಸ್ ಮತ್ತು ಕಂಪ್ರೆಸರ್ಸ್, ಸ್ಕೂಟರ್ಸ್ ಇಂಡಿಯಾ, ಹಿಂದುಸ್ತಾನ್ ಆಂಟಿಬಯೋಟಿಕ್ಸ್, ಹಿಂದುಸ್ತಾನ್ ನ್ಯೂಸ್ ಪ್ರಿಂಟ್ಸ್, ಹೋಟೆಲ್ ಕಾಪೋರೇಷನ್ ಆಫ್ ಇಂಡಿಯಾ-ಇವು ಮಾರಾಟಕ್ಕಿರುವ ಸಂಸ್ಥೆಗಳು. ಆದರೆ, ಕೆಲವು ಸಂಸ್ಥೆಗಳ ಖರೀದಿಗೆ ಯಾರೂ ಮುಂದೆ ಬಾರದಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಷೇರು ಮಾರಾಟ ಮಾಡುವ ಸಂಬಂಧ ಕಳೆದ ಐದು ವರ್ಷಗಳಲ್ಲಿ ಒಟ್ಟು 33 ನಷ್ಟದಲ್ಲಿರುವ ಪಿಎಸ್​ಯುುಗಳನ್ನು ಪಟ್ಟಿ ಮಾಡಲಾಗಿದೆ. ಈ ಪೈಕಿ ನಷ್ಟದಲ್ಲಿರುವ ಕೆಲ ಹೋಟೆಲ್ ಆಸ್ತಿಗಳನ್ನು ಮಾರಾಟ ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಕೆಲವನ್ನು ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಲಾಗಿದೆ. ಷೇರು ಮಾರಾಟ ಪ್ರಕ್ರಿಯೆಯಿಂದ ಈ ವರ್ಷ 1.05 ಲಕ್ಷ ಕೋಟಿ ರೂ. ಸಂಗ್ರಹಿಸುವುದು ಸರ್ಕಾರದ ಗುರಿಯಾಗಿದೆ.

ಇವುಗಳ ಪುನಶ್ಚೇತನಕ್ಕೆ ಈ ಹಿಂದೆಯೇ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಬಂಡವಾಳ ಹೂಡಿಕೆ ಮಾಡಿ ಜೀವ ತುಂಬಲು ಯತ್ನಿಸಲಾಗಿದೆ. ಆದರೆ, ತೀವ್ರ ಸ್ಪರ್ಧೆ, ವೃತ್ತಿಪರತೆಯ ಕೊರತೆ ಸೇರಿ ಹಲವು ಸಮಸ್ಯೆಗಳಿಂದ ಈ ಕಂಪನಿಗಳು ಮೇಲೇದ್ದಿಲ್ಲ. ಸರ್ಕಾರದ ಮುಂದೆಯೂ ಬೇರೆ ಆಯ್ಕೆ ಇಲ್ಲ. ಷೇರು ಮಾರಾಟದ ಮೂಲಕ ಒಂದಿಷ್ಟು ಆರ್ಥಿಕ ಸಂಪನ್ಮೂಲವಾದರೂ ಕ್ರೋಡೀಕರಿಸಬಹುದು. ಆದರೆ, ತೀರಾ ನಷ್ಟದಲ್ಲಿರುವ ಕಂಪನಿಗಳನ್ನು ಯಾರೂ ಕೊಳ್ಳದಿದ್ದರೆ ಸರ್ಕಾರದ ಮುಂದಿನ ನಡೆ ಏನಾಗಿರುತ್ತದೆ ಎಂಬುದನ್ನು ಕಾದು ನೋಡಬೇಕು. ಸ್ವಲ್ಪ ಕಹಿ ಎನಿಸಿದರೂ, ಸದ್ಯದ ಸ್ಥಿತಿಯಲ್ಲಿ ಇದು ಅವಶ್ಯ ಕ್ರಮವಾಗಿತ್ತು ಎನ್ನಬಹುದು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...