27.7 C
Bengaluru
Wednesday, January 22, 2020

ಸಕಾಲಿಕ ನಿರ್ಧಾರ

Latest News

ಎಲ್ಲ ವರ್ಗದವರಿಗೂ ಲ್ಯಾಪ್​ಟಾಪ್ ವಿತರಿಸಲು ಎನ್​ಎಸ್​ಯುುಐ ಕಾರ್ಯಕರ್ತರ ಒತ್ತಾಯ

ಶಿವಮೊಗ್ಗ: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿರುವ ಉಚಿತ ಲ್ಯಾಪ್​ಟಾಪ್ ಯೋಜನೆಯನ್ನು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂಂದು ಒತ್ತಾಯಿಸಿ ಎನ್​ಎಸ್​ಯುುಐ...

ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕಿ : ಪಿಎಸ್‌ಐ ಸಣ್ಣ ವೀರೇಶ

ಮಸ್ಕಿ: ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ಗಳನ್ನು ಧರಿಸಿಕೊಳ್ಳಬೇಕು. ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕುವಂತೆ ಪಿಎಸ್‌ಐ ಸಣ್ಣ ವೀರೇಶ ಸೂಚಿಸಿದರು. ಪಟ್ಟಣದ...

ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಎದೆಯಲ್ಲಿ ದ್ವೇಷ ಭಾವನೆ ಕೆರಳಿಸಲು ಹುನ್ನಾರ

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆಯನ್ನೇ ಮುಂದಿಟ್ಟುಕೊಂಡು ಕೆಲವರು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಎದೆಯಲ್ಲಿ ದ್ವೇಷ ಭಾವನೆ ಕೆರಳಿಸುತ್ತಿದ್ದಾರೆ ಎಂದು ಅಖಿಲ ಭಾರತೀಯ ಕುಟುಂಬ ಪ್ರಬೋಧನ್...

ಪ್ರಾಚಾರ್ಯರನ್ನು ಅಮಾನತುಗೊಳಿಸಿ

ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ವಿದ್ಯಾರ್ಥಿಗಳು ಪ್ರತಿಭಟನೆ...

ನೇಪಾಳ ದುರಂತ| ಸಾವಿಗೀಡಾದ ಕೇರಳೀಯರ ಕುಟುಂಬದ ಕುಡಿಯೊಂದು ಬದುಕಿ ಉಳಿದಿದೆ, ಆದರೆ…

ನವದೆಹಲಿ: ನೇಪಾಳ ಪ್ರವಾಸಕ್ಕೆ ತೆರಳಿದ್ದ ಕೇರಳೀಯರ ತಂಡದಲ್ಲಿ ಸಾವಿಗೀಡಾದ ಎಂಟು ಮಂದಿಯ ಪೈಕಿ ಒಂದು ಕುಟುಂಬದ ಕುಡಿಯೊಂದು ಅದೃಷ್ಟವಶಾತ್ ಬದುಕಿ ಉಳಿದಿದೆ. ಎರಡನೇ...

ಆನ್​ಲೈನ್ ಮೂಲಕ ಔಷಧ ಮಾರಾಟವನ್ನು ನಿಷೇಧಿಸಬೇಕೆಂಬ ಬಹುದಿನಗಳ ಬೇಡಿಕೆ ಕಡೆಗೂ ಈಡೇರಿದೆ. ಈ ಸಂಬಂಧ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶಕರು (ಡಿಸಿಜಿಐ) ಗುರುವಾರ ಆದೇಶ ಹೊರಡಿಸಿದ್ದು, ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಔಷಧ ನಿಯಂತ್ರಕರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆರೋಗ್ಯ ಎಂಬುದು ತುಂಬ ಸೂಕ್ಷ್ಮವಾದ ವಿಷಯ. ಈ ಬಗ್ಗೆ ಅಪಾಯ ತಂದುಕೊಳ್ಳುವುದು, ನಮಗೆ ತೋಚಿದಂತೆ ಪ್ರಯೋಗ ಕೈಗೊಳ್ಳುವುದು ಖಂಡಿತ ಸೂಕ್ತವಲ್ಲ. ಜನರು ಅರಿವಿಲ್ಲದೆ ತಾವೇ ಸ್ವಯಂವೈದ್ಯರಂತೆ ವರ್ತಿಸುತ್ತ ಔಷಧಗಳನ್ನು ಆನ್​ಲೈನ್ ಮೂಲಕ ತರಿಸಿಕೊಳ್ಳುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಔಷಧ ತಯಾರಿಕೆ, ಅದಕ್ಕೆ ಬಳಸಲಾದ ಸಾಮಗ್ರಿಗಳು, ಔಷಧದ ಗುಣಮಟ್ಟ, ತೆಗೆದುಕೊಳ್ಳಬೇಕಾದ ಪ್ರಮಾಣ ಯಾವುದೂ ಗೊತ್ತಿಲ್ಲದೆ ಹೀಗೆ ಬೇಕಾಬಿಟ್ಟಿ ಔಷಧ ತರಿಸಿಕೊಳ್ಳುವುದರಿಂದ ಏನಾದರೂ ಹೆಚ್ಚು-ಕಡಿಮೆಯಾದರೆ ಅದಕ್ಕೆ ಯಾರು ಹೊಣೆ?

ಮಾಹಿತಿ-ತಂತ್ರಜ್ಞಾನದ ಲಾಭವನ್ನು ಸದುದ್ದೇಶಕ್ಕಾಗಿ ಬಳಸಿಕೊಂಡು, ಕೆಲಸವನ್ನು ಹಗುರ ಮಾಡಿಕೊಂಡರೆ ತಪ್ಪೇನಿಲ್ಲ. ಆದರೆ, ಎಲ್ಲದಕ್ಕೂ ಇದನ್ನೇ ನಂಬುವ ಪ್ರವೃತ್ತಿ ಅಪಾಯಕಾರಿಯಾದದ್ದು. ಪ್ರಸಕ್ತ ದಿನಗಳಲ್ಲಿ ಆರೋಗ್ಯ ಸೇವೆಗಳಿಗಾಗಲಿ, ಆಸ್ಪತ್ರೆಗಳಿಗಾಗಲಿ ಕೊರತೆಯಿಲ್ಲ. ಆದರೆ, ಸಮಯವಿಲ್ಲ ಎಂಬ ಸಬೂಬು ಹೇಳಿ ಇಂಟರ್​ನೆಟ್​ನಲ್ಲಿ ತಪ್ಪು ಇಲ್ಲವೆ ಅರೆಬರೆ ಮಾಹಿತಿ ಪಡೆದು ಅಪಾಯ ಆಹ್ವಾನಿಸಿಕೊಳ್ಳುವುದು ಸರಿಯಲ್ಲ. ಅಲ್ಲದೆ, ಆನ್​ಲೈನ್ ಮೂಲಕ ಔಷಧ ಮಾರಾಟಕ್ಕೆ ಸರ್ಕಾರದ ಅನುಮತಿಯಿಲ್ಲ ಎಂಬುದನ್ನು ಅರಿಯಬೇಕು. ಈ ಹಿಂದೆ ಆನ್​ಲೈನ್ ಆರೋಗ್ಯ ಸಮಾಲೋಚನೆಯ ಪ್ರಶ್ನೆ ಉದ್ಭವವಾದಾಗಲೂ ‘ಆನ್​ಲೈನ್ ಸಮಾಲೋಚನೆಯಿಂದ ಅನುಕೂಲಕ್ಕಿಂತ ರೋಗಿಯ ಜೀವಕ್ಕೆ ಆಪತ್ತೇ ಹೆಚ್ಚು’ ಎಂದು ಕರ್ನಾಟಕ ಮೆಡಿಕಲ್ ಕೌನ್ಸಿಲ್ (ಕೆಎಂಸಿ) ಎಚ್ಚರಿಕೆ ಕೊಟ್ಟಿದ್ದನ್ನು ಮರೆಯುವಂತಿಲ್ಲ.

‘ಆನ್​ಲೈನ್ ಮೂಲಕ ಔಷಧ ಮಾರಾಟಕ್ಕೆ ಯಾವುದೇ ನಿಯಂತ್ರಣ ಇಲ್ಲದಿದ್ದರೆ ಇದರಿಂದ ಏನಾದರು ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಹೊಣೆ ಯಾರು? ಈ ರೀತಿಯ ಮಾರಾಟದಿಂದ ಔಷಧ ಅಪಬಳಕೆ ಮತ್ತು ಔಷಧದ ವ್ಯಸನ ಅಂಟಿಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆನ್​ಲೈನ್ ಔಷಧ ಮಾರಾಟವನ್ನು ತಕ್ಷಣವೇ ನಿಷೇಧಿಸಬೇಕು’ ಎಂದು ದೆಹಲಿ ಹೈಕೋರ್ಟ್​ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. 2018ರ ಡಿಸೆಂಬರ್ 12ರಂದು ದೆಹಲಿ ಹೈಕೋರ್ಟ್ ಈ ಸಂಬಂಧ ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಔಷಧ ನಿಯಂತ್ರಣ ಮಹಾನಿರ್ದೇಶಕರು ಆನ್​ಲೈನ್ ಔಷಧಗಳ ಮಾರಾಟ ನಿಷೇಧಿಸಿ, ಆದೇಶ ಹೊರಡಿಸಿದ್ದಾರೆ.

ಇದಕ್ಕೆ, ಉದ್ಯಮವಲಯದಿಂದ ವಿರೋಧವೂ ಬಂದಿದೆ. ಆಹಾರ ವಿತರಣೆ ಮಾಡುವ ಸ್ವಿಗ್ಗಿ ಆಪ್ ಮಾದರಿಯಲ್ಲಿ ಔಷಧ ವಿತರಣೆ ಮಾಡಲಾಗುತ್ತಿದ್ದು, ಇದಕ್ಕೆ ತಡೆಯೊಡ್ಡುವುದರಿಂದ ಹಲವು ಬಗೆಯ ಅನಾನುಕೂಲಗಳು ಸೃಷ್ಟಿಯಾಗಲಿವೆ ಎಂಬುದು ಆನ್​ಲೈನ್ ಔಷಧ ಮಾರಾಟಗಾರರ ಅಂಬೋಣ. ಅದೇನಿದ್ದರೂ, ಇಲ್ಲಿ ಜನರ ಆರೋಗ, ಜತೆಗೆ ಸಮಾಜದ ಸ್ವಾಸ್ಥ್ಯವನ್ನೂ ಪ್ರಮುಖವಾಗಿ ಪರಿಗಣಿಸಬೇಕಾಗುತ್ತದೆ. ಔಷಧಗಳ ಅತಿಬಳಕೆ, ದುರ್ಬಳಕೆ ಅಪಾಯಕಾರಿಯೇ. ಹೀಗಾಗಿ, ಸೂಕ್ತ ನಿಯಂತ್ರಣಗಳಿಲ್ಲದೆ ಈ ವ್ಯವಸ್ಥೆಯನ್ನು ಮುಂದುವರಿಸುವುದು ಕಷ್ಟಕರ. ಈ ಹಿನ್ನೆಲೆಯಲ್ಲಿ, ಸರ್ಕಾರ ಸಕಾಲಿಕವಾದ ನಿರ್ಣಯವನ್ನು ಅಂಗೀಕರಿಸಿದೆ. ಇದರ ಸಾಧಕ-ಬಾಧಕಗಳ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟ ಚಿತ್ರಣ ದೊರೆಯಬಹುದು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...