ಇತಿ ಪಾಲಿಗೆ ಕವಚ ಸ್ಪೆಷಲ್ ಸಿನಿಮಾ

Latest News

ಸಂಸದ, ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​ ಕಾಣೆಯಾಗಿದ್ದಾರೆ ಹುಡುಕಿಕೊಡಿ: ದೆಹಲಿಯಲ್ಲಿ ಪತ್ತೆಯಾದ ನಾಪತ್ತೆ ಪೋಸ್ಟರ್​!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಲ್ಬಣಿಸಿರುವ ವಾಯುಮಾಲಿನ್ಯ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಸಂಸದೀಯ ಸಮಿತಿ ಕರೆದಿದ್ದ ಸಭೆಗೆ ಗೈರುಹಾಜರಾದ ಪೂರ್ವ ದೆಹಲಿಯ ಬಿಜೆಪಿ...

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

ವಿಆರ್​ಎಲ್​ ಪ್ರಾಯೋಜಕತ್ವದ ಹಾಫ್​ ಮ್ಯಾರಥಾನ್​ಗೆ ನಟಿ ಸುಮನ್ ನಗರ್‍ಕರ್ ಚಾಲನೆ: ಗಿನ್ನೆಸ್​ ದಾಖಲೆ ಬರೆದ ಓಜಲ್ ನಲವಡಿಗೆ ಸನ್ಮಾನ

ಹುಬ್ಬಳ್ಳಿ: ವಿಆರ್​ಎಲ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಹಾಫ್ ಮ್ಯಾರಥಾನ್​ಗೆ ಖ್ಯಾತ ನಟಿ ಸುಮನ್ ನಗರ್‍ಕರ್ ಅವರು ಫ್ಲ್ಯಾಗ್ ಆಫ್ ಮಾಡುವ ಮೂಲಕ ಭಾನುವಾರ ಚಾಲನೆ...

16 ವರ್ಷದ ಬಾಲಕನಿಂದ ಸೋದರಸಂಬಂಧಿ ಬಾಲಕಿ ಮೇಲೆ ಅತ್ಯಾಚಾರ

ಗುರುಗ್ರಾಮ: ಹದಿನಾರು ವರ್ಷದ ಬಾಲಕನೊಬ್ಬ ಸೋದರಸಂಬಂಧಿಯ 15 ವರ್ಷದ ಬಾಲಕಿಯನ್ನು ಮಂಚಕ್ಕೆ ಕಟ್ಟಿಹಾಕಿ ಅತ್ಯಾಚಾರ ಎಸಗಿರುವ ಆರೋಪ ಹರಿಯಾಣದ ಗುರುಗ್ರಾಮ 51ನೇ ವಲಯದಲ್ಲಿ...

ಜೀಪಿಗೆ ಅಡ್ಡ ಬಂದ ಕಾಡುಕೋಣವನ್ನು ಹಿಮ್ಮೆಟ್ಟಿಸಿದ ಶ್ವಾನ: ವಿಡಿಯೋ ವೈರಲ್​

ಚಿಕ್ಕಮಗಳೂರು: ವಾಹನಕ್ಕೆ ಅಡ್ಡ ಬಂದ ಕಾಡುಕೋಣವನ್ನು ಶ್ವಾನ ಹಿಮ್ಮೆಟ್ಟಿಸಿದ ಘಟನೆಯ ವಿಡಿಯೋ ಚಿತ್ರೀಕರಣ ವೈರಲ್​ ಆಗಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಕಾಫಿ ತೋಟದಲ್ಲಿ...

ಕನ್ನಡ, ಹಿಂದಿ, ಮಲಯಾಳಂ ಸೇರಿ ಬಹುಭಾಷಾ ಸಿನಿಮಾಗಳಲ್ಲಿ ಬಣ್ಣ ಹಚ್ಚಿರುವ ನಟಿ ಇತಿ ಆಚಾರ್ಯ ಈಗ ‘ಕವಚ’ (ಏ.5) ಮೂಲಕ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ. ಈ ಹಿಂದೆ ‘ಧ್ವನಿ’, ‘ಡೀಲ್ ರಾಜ’ ಸಿನಿಮಾಗಳಲ್ಲಿ ನಟಿಸಿದ್ದ ಅವರಿಗೆ ‘ಕವಚ’ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಮೊದಲ ಬಾರಿಗೆ ಶಿವರಾಜ್​ಕುಮಾರ್ ಜತೆ ತೆರೆಹಂಚಿಕೊಂಡಿರುವುದಕ್ಕೂ ಅವರು ತುಂಬ ಖುಷಿಯಾಗಿದ್ದಾರೆ.

| ಅವಿನಾಶ್ ಜಿ. ರಾಮ್ ಬೆಂಗಳೂರು

‘ಕವಚ’ದಲ್ಲಿ ನಿಮ್ಮ ಪಾತ್ರ ಹೇಗಿದೆ?

ನಾನಿಲ್ಲಿ ಪಂಜಾಬಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತುಂಬ ಸ್ವಾವಲಂಬಿ ಆಗಿ ಬದುಕುವ ಹೆಣ್ಣು ಮಗಳಾಗಿರುತ್ತೇನೆ. ಯಾವುದೇ ಚಿಂತೆ ಇಲ್ಲದೆ, ಅವಳಿಗಿಷ್ಟ ಬಂದಂತೆ ಜೀವನವನ್ನು ಕಳೆಯುತ್ತಿರುತ್ತಾಳೆ. ಶಿವರಾಜ್​ಕುಮಾರ್ ಅವರು ಅಂಧರಾಗಿ ಕಾಣಿಸಿಕೊಂಡಿದ್ದು, ನನ್ನ ಬಗ್ಗೆ ವಿಚಾರಿಸಿಕೊಳ್ಳುತ್ತಿರುತ್ತಾರೆ. ಅವರಿಗೆ ಕಣ್ಣು ಕಾಣದಿದ್ದರೂ, ನಾನೇನು ಮಾಡುತ್ತೇನೆ ಎಂಬುದನ್ನು ತಿಳಿದುಕೊಳ್ಳುವ ಸಾಮರ್ಥ್ಯ ಅವರಿಗಿರುತ್ತದೆ.

ಶಿವರಾಜ್​ಕುಮಾರ್ ಜತೆ ನಟಿಸುವ ಅವಕಾಶ ಸಿಕ್ಕಾಗ ನಿಮ್ಮ ಪ್ರತಿಕ್ರಿಯೆ ಹೇಗಿತ್ತು?

ಈ ಆಫರ್ ಸಿಕ್ಕಾಗ ತುಂಬ ಸಂತೋಷಪಟ್ಟಿದ್ದೆ. ಮೊದಲ ಬಾರಿಗೆ ನಾನು ಅವರೊಂದಿಗೆ ನಟಿಸುತ್ತಿದ್ದೇನೆ ಎಂದಾಗ, ಅವರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಪ್ರಯತ್ನಿಸಿದೆ. ಅವರು ದೊಡ್ಡ ನಟ, ದೊಡ್ಡ ಕುಟುಂಬದಿಂದ ಬಂದವರು, ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಕಲಾವಿದ. ಹೀಗೆ ಅವರ ಬಗ್ಗೆ ನನಗೆ ತಿಳಿದಿತ್ತು. ಆದರೆ, ಸೆಟ್​ನಲ್ಲಿ ಅವರು ಹೇಗಿರುತ್ತಾರೆ ಎಂಬುದು ಗೊತ್ತಿರಲಿಲ್ಲ. ಅವರ ಬಗ್ಗೆ ನನ್ನ ಕೆಲ ಸ್ನೇಹಿತರ ಬಳಿ ಕೇಳಿದಾಗ, ಎಲ್ಲರೂ ಅಭಿನಂದನೆ ತಿಳಿಸಿದರು. ‘ಅವರ ಜತೆ ನಟಿಸುತ್ತಿದ್ದೀಯಾ? ನಿಜಕ್ಕೂ ನಿನ್ ಸಿನಿಮಾ ಕರಿಯರ್ ಈಗ ಶುರು ಆಗ್ತಿದೆ’ ಅಂತೆಲ್ಲ ಹೇಳಿದರು.

ಅವರೊಂದಿಗೆ ಮೊದಲ ಬಾರಿಗೆ ಸ್ಕ್ರೀನ್ ಶೇರ್ ಮಾಡಿದ ಅನುಭವ ಹೇಗಿತ್ತು?

ಚಿತ್ರೀಕರಣಕ್ಕೆ ಹೋಗುವುದಕ್ಕೂ ಮೊದಲು ತುಂಬ ತಯಾರಿ ಮಾಡಿಕೊಂಡಿದ್ದೆ. ಹಿಂದಿನ ರಾತ್ರಿ ಸರಿಯಾಗಿ ನಿದ್ದೆಯನ್ನೇ ಮಾಡಿರಲಿಲ್ಲ. ಸೆಟ್​ನಲ್ಲಿ ನಿರ್ದೇಶಕರು ಮೊದಲ ಬಾರಿಗೆ ಶಿವಣ್ಣಗೆ ನನ್ನನ್ನು ಪರಿಚಯ ಮಾಡಿಕೊಟ್ಟರು. ಕೂಡಲೇ ನಾನು ಅವರ ಕಾಲಿಗೆ ನಮಸ್ಕರಿಸಿದೆ. ತಕ್ಷಣವೇ ಅವರು, ‘ಹೇ.. ಬಿಡಿ ಬಿಡಿ. ಇದೆಲ್ಲ ಯಾಕೆ? ನಾವಿಲ್ಲಿ ಕಲಾವಿದರು. ನೀವು ನಮ್ಮ ಸಿನಿಮಾದ ನಟಿ. ನಾವೆಲ್ಲ ಒಂದೇ’ ಎಂಬರ್ಥದ ಮಾತುಗಳನ್ನು ಆಡಿದರು. ಇದಕ್ಕೂ ಮೊದಲು 3-4 ಸಿನಿಮಾಗಳನ್ನು ಮಾಡಿದ್ದೇನೆ. ಆದರೂ ‘ಕವಚ’ದಲ್ಲಿ ನಟಿಸುವಾಗ ಸಾಕಷ್ಟು ವಿಷಯಗಳನ್ನು ಕಲಿತುಕೊಂಡೆ. ಶಿವಣ್ಣ ತುಂಬ ಸಲಹೆಗಳನ್ನು ನೀಡುತ್ತಿದ್ದು. ಯಾವ ಸೀನ್​ಗೆ ದೇಹಭಾಷೆ ಹೇಗೆಲ್ಲ ಇರಬೇಕು. ಮ್ಯಾನರಿಸಂ ಹೇಗಿರಬೇಕು ಎಂಬುದನ್ನೆಲ್ಲ ತಿಳಿಸಿಕೊಟ್ಟರು. ಕೆಲವೊಮ್ಮ ಆಕ್ಟಿಂಗ್ ಸ್ಕೂಲ್​ನಲ್ಲೂ ಕಲಿಯುವುದಕ್ಕೆ ಸಾಧ್ಯವಾಗದ ವಿಚಾರಗಳನ್ನು ಇಲ್ಲಿ ತಿಳಿದುಕೊಂಡೆ.

‘ಕವಚ’ ನಿಮ್ಮ ಕರಿಯರ್​ಗೆ ಎಷ್ಟು ಮಹತ್ವದ ಸಿನಿಮಾ?

ಈ ಹಿಂದೆಯೂ ನಾನು ಸಿನಿಮಾಗಳನ್ನು ಮಾಡಿದ್ದೇನೆ. ಆದರೆ, ಈ ಸಿನಿಮಾ ಬಹಳ ಮುಖ್ಯ. ಶಿವರಾಜ್​ಕುಮಾರ್ ಅವರಂತಹ ಲೆಜೆಂಡ್ ನಟನ ಜತೆ ಕೆಲಸ ಮಾಡಿದ್ದೇ ದೊಡ್ಡ ಅನುಭವ. ಜತೆಗೆ ಇಶಾ ಕೊಪ್ಪಿಕರ್, ವಸಿಷ್ಠ ಸಿಂಹ, ತಬಲಾ ನಾಣಿ, ರವಿ ಕಾಳೆ ಮುಂತಾದ ಅನುಭವಿ ಕಲಾವಿದರು ನಟಿಸಿರುವ ಸಿನಿಮಾ ಇದಾಗಿರುವುದರಿಂದ ಕಲಿಕೆಗೆ ಸಾಕಷ್ಟು ಅವಕಾಶವಿತ್ತು. ಅಲ್ಲದೆ, ನನ್ನ ಕರಿಯರ್​ನ ದೊಡ್ಡ ಸಿನಿಮಾವಿದು. ಈ ಹಿಂದೆ ನಾನು ನಟಿಸಿದ ಚಿತ್ರಗಳಿಂದ ಒಂದಷ್ಟು ಅನುಭವಗಳನ್ನು ಪಡೆದುಕೊಂಡಿದ್ದೇನೆ. ಆದರೆ, ಓರ್ವ ಕಲಾವಿದೆಯಾಗಿ ‘ಕವಚ’ ನನ್ನ ಮೊದಲ ಸಿನಿಮಾ ಎಂಬ ಭಾವ ಮೂಡುತ್ತಿದೆ. ಮುಂದೆ ವೃತ್ತಿಜೀವನವನ್ನು ಹೇಗೆ ಬೆಳೆಸಿಕೊಂಡು ಹೋಗಬೇಕು ಎಂಬುದನ್ನು ಈ ಸಿನಿಮಾ ಕಲಿಸಿದೆ.

ಯಾವ ರೀತಿಯ ಪಾತ್ರಗಳನ್ನು ಎದುರು ನೋಡುತ್ತಿದ್ದೀರಿ?

ಕಥೆ ಗಟ್ಟಿ ಆಗಿರಬೇಕು. ನಿಜ ಜೀವನಕ್ಕೆ ಹತ್ತಿರವಿರುವಂತಹ ಪಾತ್ರಗಳನ್ನು ಎದುರು ನೋಡುತ್ತಿದ್ದೇನೆ. ಯಾಕೆಂದರೆ, ಅಂಥ ಪಾತ್ರಗಳನ್ನು ಮಾಡಿದಾಗ ಪ್ರೇಕ್ಷಕರಿಗೆ ಬಹುಬೇಗ ಹತ್ತಿರವಾಗಬಹುದು. ಸದ್ಯಕ್ಕೆ ಬೇರೆ ಬೇರೆ ಭಾಷೆಗಳಲ್ಲೂ ಕೆಲಸ ಮಾಡಿದ್ದೇನೆ. ‘ಕವಚ’ ತೆರೆಕಂಡ ಬಳಿಕ ಕನ್ನಡದಲ್ಲಿ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳಲಿದ್ದೇನೆ.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....