16 C
Bangalore
Thursday, December 12, 2019

ಪುಷ್ಕರ್ ಫಿಲಂಸ್​ನಲ್ಲಿ ಶರಣ್

Latest News

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅನ್ನಭಾಗ್ಯ ಅಕ್ಕಿ ಪ್ರಮಾಣ ಇಳಿಕೆ? 408 ಕೋಟಿ ರೂ ಉಳಿತಾಯ 

| ಬೇಲೂರು ಹರೀಶ ಬೆಂಗಳೂರು ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್​ದಾರರಿಗೆ ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆಜಿಗೆ ಇಳಿಸಿ,...

ಬೆಂಗಳೂರು: ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರ ಪುಷ್ಕರ್ ಫಿಲಂಸ್​ನಲ್ಲಿ ಈಗಾಗಲೇ ರಕ್ಷಿತ್ ಶೆಟ್ಟಿ ಸಿನಿಮಾಗಳು ಮೂಡಿಬಂದಿವೆ. ಜತೆಗೆ ಇನ್ನೂ ಒಂದಷ್ಟು ಚಿತ್ರಗಳು ಮಾತುಕತೆ ಹಂತದಲ್ಲಿವೆ. ಅದರ ಮಧ್ಯೆ ದಿಗಂತ್, ದಾನೀಶ್ ಸೇಠ್ ನಟನೆಯ ಸಿನಿಮಾಗಳು ಪುಷ್ಕರ್ ಬ್ಯಾನರ್​ನಲ್ಲೇ ತಯಾರಾಗುತ್ತಿವೆ. ಈಗ ಇದೇ ನಿರ್ಮಾಣ ಸಂಸ್ಥೆಯಲ್ಲಿ ಶರಣ್ ನಾಯಕತ್ವದ ಹೊಸ ಚಿತ್ರವೊಂದು ಸೆಟ್ಟೇರಿದೆ. ವಿಶೇಷವೆಂದರೆ, ಈ ಸಿನಿಮಾಗೆ ನಿರ್ದೇಶನ ಮಾಡುತ್ತಿರುವುದು ‘ಸಿಂಪಲ್’ ಸುನಿ.

ಶರಣ್ ಜತೆಗೆ ಸಿನಿಮಾ ಮಾಡಬೇಕು ಎಂದು ಮೊದಲಿನಿಂದಲೂ ಪ್ಲಾ್ಯನ್ ಮಾಡಿಕೊಂಡಿದ್ದ ಪುಷ್ಕರ್​ಗೆ ಈಗ ಅದೃಷ್ಟ ಒಲಿದಿದೆ. ಕಾಮಿಡಿ ಸಿನಿಮಾಗಳಿಗೆ ಶರಣ್ ಖ್ಯಾತಿ ಪಡೆದಿದ್ದರೆ, ತುಸು ತುಂಟ ಸಂಭಾಷಣೆ ಬರೆದು, ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಮಾಡುವುದರಲ್ಲಿ ಸುನಿ ಸಿದ್ಧಹಸ್ತರು. ಅವರಿಬ್ಬರ ಕಾಂಬಿನೇಷನ್ ಹೇಗೆ ಮೂಡಿಬರಲಿದೆ ಎಂಬ ಕುತೂಹಲ ಪ್ರೇಕ್ಷಕರದ್ದು. ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಟ ಶರಣ್, ‘ಪುಷ್ಕರ್ ಬೇರೆ ಥರದ ಟ್ರೆಂಡ್ ಸೃಷ್ಟಿ ಮಾಡಿದ್ದಾರೆ. ಅವರೊಂದಿಗೆ ಕೆಲಸ ಮಾಡಬೇಕು ಎಂಬುದು ಬಯಕೆ ಆಗಿತ್ತು. ಈ ಸಿನಿಮಾ ಆಫರ್ ಬಂದಾಗ ಖುಷಿ ಆಯ್ತು. ಇದರ ಕಥೆ ತುಂಬ ಚೆನ್ನಾಗಿದೆ. ಕಾಮಿಡಿ ನನಗಿಷ್ಟದ ಪ್ರಕಾರ. ಅದರಾಚೆಗೆ ನಾನು ಹೋಗುವುದಿಲ್ಲ. ಆದರೆ, ಅದರೊಳಗೆ ಹೊಸದೇನಾದರೂ ಮಾಡಬಹುದಾ ಎಂಬುದನ್ನು ಇಲ್ಲಿ ಪ್ರಯತ್ನಿಸಲಿದ್ದೇವೆ’ ಎನ್ನುತ್ತಾರೆ.

ಇನ್ನು, ಸುನಿ ಕುರಿತು ಮೆಚ್ಚುಗೆ ಮಾತುಗಳನ್ನಾಡುವ ಅವರು, ‘ಸುನಿಗೆ ಕಾಮಿಡಿ ಸೆನ್ಸ್ ಇದೆ. ಈ ಹಿಂದಿನ ಸಿನಿಮಾಗಳಲ್ಲಿ ಅದನ್ನವರು ಸಾಬೀತು ಮಾಡಿದ್ದಾರೆ. ನಗಿಸೋದು ಕಷ್ಟದ ಕೆಲಸ. ಸುನಿ ಅದನ್ನು ತುಂಬ ಚೆನ್ನಾಗಿ ಮಾಡುತ್ತಾರೆ. ನಮ್ಮ ಮೂವರ ಕಾಂಬಿನೇಷನ್ನೇ ತುಂಬ ಚೆನ್ನಾಗಿದೆ. ಇಲ್ಲಿ ಹೊಸತನ ಇದೆ. ಶರಣ್ ಸಿನಿಮಾಗಳಲ್ಲಿ ಇದುವರೆಗೂ ನೀವು ನೋಡಿರದ ಹೊಸ ಸ್ಟೈಲ್ ಇರಲಿದೆ’ ಎಂದು ಕುತೂಹಲ ಮೂಡಿಸುತ್ತಾರೆ ಶರಣ್.

ಈ ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗೆ ಜನವರಿಯಲ್ಲಿ ಶೂಟಿಂಗ್ ಶುರುವಾಗಲಿದೆ. ಮೊದಲ ಹಂತದ ಚಿತ್ರೀಕರಣ ಬಾಳೆಹೊನ್ನೂರು ಸುತ್ತಮುತ್ತ ನಡೆಯಲಿದೆ. ಸದ್ಯ ಸುನಿ ‘ಬಜಾರ್’ ಸಿನಿಮಾದಲ್ಲಿ ಬಿಜಿಯಾಗಿದ್ದು, ಜನವರಿ ಎರಡನೇ ವಾರದಲ್ಲಿ ತೆರೆಕಾಣುವ ಸಾಧ್ಯತೆ ಇದೆ.

ಮಹಾಭಾರತದಲ್ಲಿ ತ್ರಿಶಂಕು ಎಂಬ ಒಂದು ಎಪಿಸೋಡ್ ಇದೆ. ಅದನ್ನು ನಾವು ಈ ಚಿತ್ರದಲ್ಲಿ ಬಳಕೆ ಮಾಡಲಿದ್ದೇವೆ. ಅದು ಹೇಗೆ ಎಂಬುದನ್ನು ಸಿನಿಮಾದಲ್ಲೇ ನೋಡಬೇಕು.

| ಸುನಿ ನಿರ್ದೇಶಕ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...