22.5 C
Bengaluru
Sunday, January 19, 2020

ನಾವೀಗ ಮೂವರು ಎಂದಯಶ್ ದಂಪತಿ

Latest News

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಬೆಂಗಳೂರು: ‘ರಾಕಿಂಗ್​ಸ್ಟಾರ್’ ಯಶ್ ಮತ್ತು ರಾಧಿಕಾ ಪಂಡಿತ್ ಬುಧವಾರ (ಜು. 25) ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ‘ಇಬ್ಬರಿದ್ದವರು ಮೂವರಾಗಲಿದ್ದೇವೆ’ ಎಂದು ಫೇಸ್​ಬುಕ್ ಮತ್ತು ಟ್ವಿಟರ್​ನಲ್ಲಿ ಬರೆದುಕೊಂಡಿರುವ ರಾಧಿಕಾ, ತಾಯಿಯಾಗುತ್ತಿರುವ ಸಂತಸದ ಸಂಗತಿಯನ್ನು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಸಿಹಿ ಸುದ್ದಿ ಹೊರಬಿದ್ದಿದ್ದೇ ತಡ ಅಭಿಮಾನಿಗಳು ಶುಭಾಶಯಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಇತ್ತ ಯಶ್ ಕೂಡ ಈ ಸಂಭ್ರಮದ ವಿಷಯವನ್ನು ಟ್ವಿಟರ್​ನಲ್ಲಿ ಒಂದು ಟೀಸರ್ ಅಪ್​ಲೋಡ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ! ಅಚ್ಚರಿಪಟ್ಟರೂ ಇದು ಸತ್ಯ. ‘ವೈಜಿಎಫ್’ ಎಂಬ ಹೆಸರಿನ ಚಿಕ್ಕ ವಿಡಿಯೋ ತುಣುಕನ್ನು ಹಾಕಿ ‘ಯಶ್ ಇಸ್ ಗೋಯಿಂಗ್ ಟು ಬಿ ಎ ಫಾದರ್’ ಎಂದು ಬರೆದುಕೊಂಡಿದ್ದಾರೆ.

ಯಶ್-ರಾಧಿಕಾ ದಂಪತಿ ಚೊಚ್ಚಲ ಮಗುವಿನ ಆಗಮನ ಡಿಸೆಂಬರ್​ನಲ್ಲಿ ಆಗುವ ಸೂಚನೆ ಸಿಕ್ಕಿದೆ. ಆ ತಿಂಗಳನ್ನು ಯಶ್ ಟೀಸರ್​ನಲ್ಲಿ ನಮೂದಿಸಿದ್ದಾರೆ. ಆಗಸ್ಟ್​ನಲ್ಲಿ ‘ಕೆಜಿಎಫ್’ ಟೀಸರ್ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ಪ್ಲಾ್ಯನ್ ಹಾಕಿದೆ. ಅದಾದ ಬಳಿಕ ಸೆಪ್ಟಂಬರ್​ನಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆಗಳಿವೆ. ಈ ಮೂಲಕ ಒಂದೇ ವರ್ಷದಲ್ಲಿ ಅಭಿಮಾನಿಗಳಿಗೆ ಡಬಲ್ ಧಮಾಕಾ ನೀಡಲು ಯಶ್ ಸಜ್ಜಾಗಿದ್ದಾರೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ‘ಕನ್ನಡದ ಕೋಟ್ಯಧಿಪತಿ 2’ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅತಿಥಿಯಾಗಿ ಯಶ್ ಆಗಮಿಸಿದ್ದರು. ಆಗ ‘ನಾನು ಅಜ್ಜಿ ಆಗೋದು ಯಾವಾಗ’ ಎಂದು ಯಶ್ ತಾಯಿ ನೇರವಾಗಿ ಪ್ರಶ್ನಿಸಿದ್ದರು. ಅದಕ್ಕೆ ‘ಶೀಘ್ರದಲ್ಲೇ ನಿನ್ನಾಸೆ ಈಡೇರಲಿದೆ’ ಎಂದು ಹೇಳಿದ್ದರು ಯಶ್. ಇನ್ನು, ಯಶ್-ರಾಧಿಕಾ ದಂಪತಿಗೆ ಡಿಸೆಂಬರ್ ಎಂದರೆ ಅದೇನೋ ಸೆಳೆತ. 2014ರ ಡಿಸೆಂಬರ್​ನಲ್ಲಿ ಈ ಜೋಡಿ ಒಟ್ಟಿಗೆ ಅಭಿನಯಿಸಿದ್ದ ‘ಮಿಸ್ಟರ್ ಆಂಡ್ ಮಿಸೆಸ್ ರಾಮಾಚಾರಿ’ ತೆರೆಕಂಡು ಹಿಟ್ ಆಗಿತ್ತು. ಇವರಿಬ್ಬರು ಮದುವೆಯಾಗಿದ್ದೂ 2016ರ ಡಿಸೆಂಬರ್​ನಲ್ಲಿ. ಇದೀಗ ಡಿಸೆಂಬರ್​ನಲ್ಲೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಈ ಸ್ಟಾರ್ ದಂಪತಿ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...