25.9 C
Bengaluru
Wednesday, January 22, 2020

ಗ್ರಂಥಾಲಯ ಮೇಲ್ವಿಚಾರಕರಿಗೆ ಸಂಕಷ್ಟ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿನ 6300 ಮೇಲ್ವಿಚಾರಕರ ಬದುಕು ಬೀದಿಗೆ ಬಿದ್ದಿದೆ. ಸೇವೆ ಕಾಯಮಾತಿಯ ಕನಸಿನಲ್ಲೇ ದಿನದೂಡುತ್ತ ನೂರಾರು ಸಿಬ್ಬಂದಿ ನಿವೃತ್ತಿಯ ಅಂಚಿಗೆ ಬಂದಿರುವುದು ಒಂದೆಡೆಯಾದರೆ, ಕಳೆದ ನಾಲ್ಕು ತಿಂಗಳಿಂದ ಗೌರವಧನವೂ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ಬವಣೆ ಕುರಿತು ವಿಜಯವಾಣಿ ಸಹಾಯವಾಣಿಗೆ ಬಂದ ಮನವಿ ಆಧರಿಸಿ ನಮ್ಮ ವರದಿಗಾರ ಹೀರಾನಾಯ್ಕ ಟಿ. ಈ ವಿಶೇಷ ವರದಿ ಸಿದ್ಧಪಡಿಸಿದ್ದಾರೆ.

ವಿಜಯಪುರ: ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಬರುವ ಗ್ರಂಥಾಲಯಗಳ ಮೇಲ್ವಿಚಾರಕರ ಬದುಕು ಬೀದಿಗೆ ಬೀಳುವ ಪರಿಸ್ಥಿತಿ ನಿರ್ವಣವಾಗಿದೆ. ನಾಲ್ಕು ತಿಂಗಳಿನಿಂದ ಗೌರವಧನ ಸಿಗದ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸೌಲಭ್ಯ ವಂಚಿತ: ರಾಜ್ಯದಲ್ಲಿ ಒಟ್ಟು 6 ಸಾವಿರ ಗ್ರಾಮ ಪಂಚಾಯಿತಿ (ಕೊಳಚೆ, ಅಲೆಮಾರಿ ಪ್ರದೇಶ) ಗ್ರಂಥಾಲಯಗಳಿದ್ದು, ಅವುಗಳಲ್ಲಿ 6,300 ಸಿಬ್ಬಂದಿಯಿದ್ದಾರೆ. ದಿನ ಬೆಳಗ್ಗೆ ಹಾಗೂ ಸಂಜೆ ಒಟ್ಟು ದಿನಕ್ಕೆ ಎಂಟು ತಾಸು ಕೆಲಸ. ಆದರೆ ಸರ್ಕಾರದಿಂದ ಯಾವುದೇ ಸೌಲಭ್ಯಗಳಿಲ್ಲ ಎಂದು ಗ್ರಂಥಾಲಯ ಮೇಲ್ವಿಚಾರಕರು ಅಳಲು ತೋಡಿಕೊಳ್ಳುತ್ತಾರೆ. ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕರಾಗಿರುವ ಒಂದು ಸಾವಿರಕ್ಕೂ ಹೆಚ್ಚು ನೌಕರರು ನಿವೃತ್ತಿ ಅಂಚಿನಲ್ಲಿದ್ದಾರೆ.

400ಕ್ಕೂ ಹೆಚ್ಚು ಸಿಬ್ಬಂದಿ ಮರಣ ಹೊಂದಿದ್ದಾರೆ. ಅವರಿಗೆ ಸರ್ಕಾರದಿಂದ ನಯಾಪೈಸೆಯೂ ಬಂದಿಲ್ಲ. ಕಳೆದ 30 ವರ್ಷಗಳಿಂದ ಪೂರ್ಣಾವಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಅದರೆ ಇಲಾಖೆ ಅಧಿಕಾರಿಗಳು ಕೆಲಸದ ಸಮಯ ಕಡಿತಗೊಳಿಸಿ, ಸರ್ಕಾರದ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡಿದ್ದಾರೆ. ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸಿ, ಹುದ್ದೆ ಕಾಯಂಗೊಳಿಸಬೇಕು ಎಂದು ಮೇಲ್ವಿಚಾರಕ ರಮೇಶ ಕುಂಬಾರ ಒತ್ತಾಯಿಸುತ್ತಾರೆ.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಂಥಾಲಯ ಮೇಲ್ವಿಚಾರಕರ ಸೇವೆ ಕಾಯಂಗೆ ಸರ್ಕಾರ ಬದ್ಧ ಎಂದು ಹೇಳಿದ್ದರು. ಅದರೆ ಈ ಘೋಷಣೆ ಜಾರಿಗೆ ಸರ್ಕಾರದ ಜತೆಗೆ ಇಲಾಖೆ ಅಧಿಕಾರಿಗಳೂ ಮೀನಮೇಷ ಎಣಿಸುತ್ತಿದ್ದಾರೆ.

| ಕೆ.ವಿ.ಸತ್ಯನಾರಾಯಣ, ರಾಜ್ಯಾಧ್ಯಕ್ಷ , ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಸಂಘ

 

ಕನಿಷ್ಠ ವೇತನವೂ ಇಲ್ಲ 

ಕಳೆದ 29 ವರ್ಷಗಳಿಂದ ಗ್ರಂಥಾಲಯ ಮೇಲ್ವಿಚಾರಕ ರಾಗಿರುವ ಇವರಿಗೆ ಕನಿಷ್ಠ ವೇತನವೂ ದೊರಕಿಲ್ಲ. ಪ್ರಾರಂಭಿಕವಾಗಿ 300 ರೂ. ಮಾಸಿಕ ಗೌರವಧನ ಪಡೆಯುತ್ತಿದ್ದ ಇವರ ವೇತನ ದಶಕದ ಬಳಿಕ (2007) 7 ಸಾವಿರ ರೂ.ಗೆ ಹೆಚ್ಚಳವಾಗಿದೆ. ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸಿಬ್ಬಂದಿಗೆ ಕನಿಷ್ಠ 13,200 ರೂ. ವೇತನ ನೀಡುವಂತೆ 2015ರಲ್ಲಿ ಕಾರ್ವಿುಕ ಇಲಾಖೆ ನಿರ್ದೇಶನ ನೀಡಿದ್ದರೂ ಈವರೆಗೆ ಜಾರಿಯಾಗಿಲ್ಲ. ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಿಬ್ಬಂದಿಯಂತೆ ಪ್ರತಿದಿನ ಕೆಲಸ ಮಾಡುತ್ತಿದ್ದೇವೆ. ಅದನ್ನು ದಿನಕ್ಕೆ ನಾಲ್ಕು ಗಂಟೆಗಳಿಗೆ ಸೀಮಿತಗೊಳಿಸಿ, ತಾತ್ಕಾಲಿಕ ಸೇವೆ ಎಂದು ಪರಿಗಣಿಸಿ, ಸರ್ಕಾರದ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡಲಾಗಿದೆ ಎಂದು ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರು ದೂರುತ್ತಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...