More

  ಬಹುಕೋಟಿ ವಂಚನೆ ಪ್ರಕರಣ; ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ನ್ಯಾಯಾಲಯ

  ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ನವೆಂಬರ್ 1ರವರೆಗೆ ವಿಸ್ತರಿಸಿ ಆದೇಶಿಸಿದೆ.

  ಗುರುವಾರ (ಅಕ್ಟೋಬರ್ 19)ಕ್ಕೆ ಅವರ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡ ಬಳಿಕ ಅವರ ಬಂಧನದ ಅವಧಿಯನ್ನು ಸ್ಥಳೀಯ ಎಸಿಬಿ ನ್ಯಾಯಾಲಯವು ನಾಲ್ಕನೇ ಬಾರಿಗೆ ವಿಸ್ತರಿಸಿದೆ.

  ಇದನ್ನೂ ಓದಿ: ಕಾಂಗ್ರೆಸ್​ ವತಿಯಿಂದ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸಾಧ್ಯತೆ: ಶಶಿ ತರೂರ್

  ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಕಾರಣ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ವಿಜಯವಾಡ ಎಸಿಬಿ ನ್ಯಾಯಾಲಯವು ನ್ಯಾಯಾಂಗ ಬಂಧನದ ಅವಧಿಯನ್ನು ನವೆಂಬರ್​ 1ರವರೆಗೆ ವಿಸ್ತರಿಸಿ ಆದೇಶಿಸಿದೆ.

  ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶ ಸಿಐಡಿ ಸೆಪ್ಟೆಂಬರ್​ 9ರಂದು ವಶಕ್ಕೆ ಪಡೆದಿತ್ತು. ಚಂದ್ರಬಾಬು ನಾಯ್ಡು ಅವರನ್ನು ವಿಜಯವಾಡದಲ್ಲಿರುವ ರಾಜಮಹೇಂದ್ರವರಂ ಕಾರಾಗೃಹದಲ್ಲಿ ಇರಿಸಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts