More

    ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ

    ಭಾಲ್ಕಿ: ರಾಜ್ಯದಲ್ಲಿ ತೀವ್ರ ಬರವಿದ್ದರೂ ಸಮರ್ಪಕ ನಿರ್ವಹಣೆ ಮಾಡುವಲ್ಲಿ ಎಡವಿದ ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿ ಆಡಳಿತ ಆಡಳಿತ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ಭಾಲ್ಕಿ ಆರೋಪಿಸಿದರು.

    ಖಟಕಚಿಂಚೋಳಿ ಗ್ರಾಮದ ರೈತ ವೈಜಿನಾಥ ಉಂಬರಗೆ ಹೊಲಕ್ಕೆ ಬುಧವಾರ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದ ಅವರು, ಬರ ಪರಿಹಾರ ಕೊಡುವಲ್ಲಿ ಸರ್ಕಾರ ವಿಫಲವಾಗಿದ್ದರಿಂದಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಹಿರಿಯರ ನಾಯಕರ ನೇತೃತ್ವದಲ್ಲಿ ತಂಡ ರಚಿಸಿ ಬರಪೀಡಿತ ಪ್ರದೇಶಗಳಿಗೆ ತೆರಳಿ ಬೆಳೆ ನಷ್ಟದ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

    ಬೀದರ್ ಜಿಲ್ಲೆಯಲ್ಲಿ ನಾಲ್ಕೈದು ತಿಂಗಳಲ್ಲಿ ೧೨ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಗಂಭೀರವಾಗಿ ಪರಿಗಣಿಸಬೇಕಿತ್ತು. ಆದರೆ ಅವರು ರೈತರ ಸಮಸ್ಯೆ ಆಲಿಸದೆ ಕರ್ತವ್ಯ ಮರೆತಿದ್ದಾರೆ. ಜಿಲ್ಲೆಯ ಯಾವ ತಾಲೂಕು, ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದ್ದೀರಿ? ಎಷ್ಟು ಸಭೆ ನಡೆಸಿ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ೩೩ ಸಾವಿರ ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ವರದಿ ನೀಡಿದ ಸರ್ಕಾರ, ೧೭ ಸಾವಿರ ಕೋಟಿ ರೂ. ಪರಿಹಾರ ಕೊಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಆದರೆ ಬರದಿಂದ ಸಂಕಷ್ಟದಲ್ಲಿರುವ ಜನರಿಗೆ ಕೇವಲ ೩೪೦ ಕೋಟಿ ರೂ. ಪರಿಹಾರ ಘೋಷಿಸಿದೆ ಹೊರತು, ಇದುವರೆಗೆ ಬಿಡುಗಡೆ ಮಾಡಿಲ್ಲ. ಇನ್ನಾದರೂ ಸರ್ಕಾರ ಎಚ್ಚೆತ್ತು ರೈತರ ಸಮಸ್ಯೆ ಆಲಿಸಬೇಕು. ಎಕರೆಗೆ ೨೦-೨೫ ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

    ಶಾಸಕರಾದ ಪ್ರಭು ಚವ್ಹಾಣ್, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದು ಪಾಟೀಲ್, ಶರಣು ಸಲಗರ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಪ್ರಮುಖರಾದ ಶಿವರಾಜ ಗಂದಗೆ, ಬಾಬು ವಾಲಿ, ರವೀಂದ್ರ ರೆಡ್ಡಿ, ವಿಜಯಕುಮಾರ ಕಡಗಂಚಿ, ದಿಗಂಬರರಾವ ಮಾನಕಾರಿ, ವೀರಣ್ಣ ಕಾರಬಾರಿ, ಕೆ.ಡಿ. ಗಣೇಶ, ಸನ್ಮುಖಯ್ಯ ಸ್ವಾಮಿ, ಸಂಗಮೇಶ ಟೆಂಕಾಳೆ, ರವೀಂದ್ರ ಕಣಜೆ ಇತರರಿದ್ದರು.

    ತಾಲೂಕಿನ ರೈತರು ಅನಾವೃಷ್ಟಿಯಿಂದ ಸಂಕಷ್ಟದಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಅನ್ನದಾತರ ಅಹವಾಲು ಆಲಿಸಿ ಎಕರೆಗೆ ಕನಿಷ್ಠ ೨೫ ಸಾವಿರ ರೂ. ಪರಿಹಾರ ಕೊಡಿಸಬೇಕು.
    | ಪ್ರಕಾಶ ಖಂಡ್ರೆ ಮಾಜಿ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts