More

    ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನ ಗೆಲ್ಲಲಿದೆ, ಆನಂತರ ಕಾದು ನೋಡಿ ಎಂದ ವಿಜಯೇಂದ್ರ

    ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲಲಿದೆ. ಆನಂತರ ಕಾಂಗ್ರೆಸ್ ಸರ್ಕಾರದ ಕಥೆ ಏನಾಗಲಿದೆ ಎಂಬುದನ್ನು ಕಾದು ನೋಡಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.

    ಮುಂದಿನ ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಭಾನುವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆ ಮುಗಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ ಎಂದು ಹೇಳಿದರು.
    ಅಧಿಕಾರಕ್ಕೆ ಬಂದ ನಂತರ 24 ಗಂಟೆಯಲ್ಲೇ ಎಲ್ಲ 5 ಗ್ಯಾರೆಂಟಿಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ತಿಂಗಳು ಕಳೆದಿದರೂ ಒಂದೇ ಒಂದು ಗ್ಯಾರೆಂಟಿಯನ್ನೂ ಅವರಿಗೆ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.
    ಸಂಸದ ಪ್ರತಾಪ್ ಸಿಂಹ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೊಂದಾಣಿಕೆ ರಾಜಕಾರಣದಿಂದ ಪಕ್ಷಕ್ಕೆ ಸೋಲಾಗಿದೆ ಎಂದಿದ್ದಾರೆ. ಅವರಿಗೆ ಹೇಳುವಷ್ಟು ದೊಡ್ಡವನು ನಾನಲ್ಲ. ಅವರು ಸೋಲಿಲ್ಲದ ಸದರಾರರೆಂಬ ಬಿರುದು ಪಡೆದವರು. ಚುನಾವಣೆಯಲ್ಲಿ ಪಕ್ಷ ಸೋತಿದೆ. ಈ ಸಮಯದಲ್ಲಿ ಆರೋಪ-ಪ್ರತ್ಯಾರೋಪ ಮಾಡುವುದು ಸರಿಯಲ್ಲ. ಒಗ್ಗಟ್ಟಾಗಿರಬೇಕಿದೆ ಎಂದು ಯಡಿಯೂರಪ್ಪ ಅವರ ಮಗನೆಂದು ಈ ಮಾತನ್ನು ನಾನು ಹೇಳುತ್ತಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹೇಳುತ್ತಿದ್ದೇನೆ ಎಂದರು.
    ಮತದಾರರು ಮತ್ತು ಕಾರ್ಯಕರ್ತರು ನಮ್ಮನ್ನು ತಿರಸ್ಕರಿಸಿದ್ದಾರೆ. ಇದನ್ನು ಅರಿತು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸೀಟು ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದು ಮನವಿ ಮಾಡಿದರು.
    ವಿಜಯೇಂದ್ರನ ಮಿಲ್ನಿಂದ ಅಕ್ಕಿ ತಂದು ಕೊಡಲಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಪಡಿತರ ವಿತರಣೆಗೆ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಬೇಕು. ರಾಜ್ಯದಲ್ಲಿ ರೈತರ ಅಕ್ಕಿ ಕೊರತೆ ಕಂಡುಬಂದರೆ ಹೊರರಾಜ್ಯದಿಂದ ತಂದು ಕೊಡುವಂತೆ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts